AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Telegram Ban: ಭಾರತದಲ್ಲಿ ಟೆಲಿಗ್ರಾಮ್​ಗೆ ತಾತ್ಕಾಲಿಕ ನಿಷೇಧ: ನೀಟ್ ಮರು ಪರೀಕ್ಷೆಗೂ ಮುನ್ನ ಕೇಂದ್ರದ ಕ್ರಮ

ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ (NEET-UG 2026) ಮರು ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆಪ್ ಆದ ‘ಟೆಲಿಗ್ರಾಮ್’ (Telegram) ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ನಿರ್ಧರಿಸಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ನೀಡಿರುವ ಅಧಿಕೃತ ನಿರ್ದೇಶನದ ಪ್ರಕಾರ, ಭಾರತದಲ್ಲಿ ಜೂನ್ 22, 2026 ರವರೆಗೆ ಟೆಲಿಗ್ರಾಮ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ.

Telegram Ban: ಭಾರತದಲ್ಲಿ ಟೆಲಿಗ್ರಾಮ್​ಗೆ ತಾತ್ಕಾಲಿಕ ನಿಷೇಧ: ನೀಟ್ ಮರು ಪರೀಕ್ಷೆಗೂ ಮುನ್ನ ಕೇಂದ್ರದ ಕ್ರಮ
ಟೆಲಿಗ್ರಾಂImage Credit source: The Hindu
ನಯನಾ ರಾಜೀವ್
|

Updated on:Jun 16, 2026 | 11:14 AM

Share

ನವದೆಹಲಿ, ಜೂನ್ 16: ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್ (NEET-UG 2026) ಮರು ಪರೀಕ್ಷೆಯನ್ನು ಅತ್ಯಂತ ಪಾರದರ್ಶಕ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ದೇಶಾದ್ಯಂತ ಜನಪ್ರಿಯ ಮೆಸೇಜಿಂಗ್ ಆಪ್ ಆದ ‘ಟೆಲಿಗ್ರಾಮ್’ (Telegram) ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲು ನಿರ್ಧರಿಸಿದೆ.

ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು (MeitY) ನೀಡಿರುವ ಅಧಿಕೃತ ನಿರ್ದೇಶನದ ಪ್ರಕಾರ, ಭಾರತದಲ್ಲಿ ಜೂನ್ 22, 2026 ರವರೆಗೆ ಟೆಲಿಗ್ರಾಮ್ ಸೇವೆಗಳು ತಾತ್ಕಾಲಿಕವಾಗಿ ಲಭ್ಯವಿರುವುದಿಲ್ಲ. ಜೂನ್ 21 ರಂದು ದೇಶಾದ್ಯಂತ ಬಿಗಿಯಾದ ಭದ್ರತೆಯೊಂದಿಗೆ ನೀಟ್ (UG) ಮರು ಪರೀಕ್ಷೆ ನಡೆಯಲಿದ್ದು, ಪರೀಕ್ಷೆಗೆ ಸಂಬಂಧಿಸಿದ ಯಾವುದೇ ಮಾಹಿತಿ ಅಥವಾ ಪ್ರಶ್ನೆಪತ್ರಿಕೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಸೋರಿಕೆಯಾಗದಂತೆ ತಡೆಯಲು ಈ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ನೀಟ್ ಪರೀಕ್ಷೆಯನ್ನು ನಡೆಸುವ ಜವಾಬ್ದಾರಿ ಹೊತ್ತಿರುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ಕೇಂದ್ರ ಸರ್ಕಾರದ ಈ ತ್ವರಿತ ಮತ್ತು ಕಠಿಣ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದೆ. ಈ ತಾತ್ಕಾಲಿಕ ನಿಷೇಧವು ಪರೀಕ್ಷೆಯ ನ್ಯಾಯಸಮ್ಮತತೆಯನ್ನು ಕಾಪಾಡಲು ಮತ್ತು ದೇಶದ ಲಕ್ಷಾಂತರ ಪ್ರಾಮಾಣಿಕ ವಿದ್ಯಾರ್ಥಿಗಳಿಗೆ ಯಾವುದೇ ಅನ್ಯಾಯವಾಗದಂತೆ ತಡೆಯಲು ನೆರವಾಗಲಿದೆ ಎಂದು ಎನ್‌ಟಿಎ ತಿಳಿಸಿದೆ.

ಮತ್ತಷ್ಟು ಓದಿ: ‘ಎರಡು ವರ್ಷದ ಶ್ರಮ ವ್ಯರ್ಥವಾಯಿತು’: ನೀಟ್ ಪರೀಕ್ಷೆ ರದ್ದತಿಗೆ ವಿದ್ಯಾರ್ಥಿನಿ ಬೇಸರ

ಜೂನ್ 21 ರಂದು ನಡೆಯಲಿರುವ ನೀಟ್ ಮರು ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ಅಥವಾ ವದಂತಿಗಳು ಹರಡದಂತೆ ತಡೆಯಲು ಕೇಂದ್ರ ಸರ್ಕಾರವು ಮುಂಜಾಗ್ರತಾ ಕ್ರಮವಾಗಿ ಜೂನ್ 22 ರವರೆಗೆ ಭಾರತದಲ್ಲಿ ಟೆಲಿಗ್ರಾಮ್ ಆಪ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿದೆ.

ಭಾರತದಲ್ಲಿ ಟೆಲಿಗ್ರಾಂ ಬಳಸುತ್ತಿರುವವರು ಎಷ್ಟು ಮಂದಿ?

ಇತ್ತೀಚಿನ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಸರಿಸುಮಾರು 10 ಕೋಟಿಗೂ ಹೆಚ್ಚು ಮಂದಿ ಟೆಲಿಗ್ರಾಂ ಸಕ್ರಿಯ ಬಳಕೆದಾರರಿದ್ದಾರೆ. ಜಾಗತಿಕವಾಗಿ ಟೆಲಿಗ್ರಾಮ್ ಆಪ್ ಡೌನ್‌ಲೋಡ್ ಆಗುವ ಒಟ್ಟು ಪ್ರಮಾಣದಲ್ಲಿ ಸುಮಾರು ಶೇ. 22 ರಷ್ಟು ಪಾಲು ಭಾರತದ್ದೇ ಆಗಿದೆ. ಭಾರತದ ಇಂಟರ್ನೆಟ್ ಬಳಕೆದಾರರಲ್ಲಿ ಶೇ. 39 ರಷ್ಟು ಜನರು ವಿವಿಧ ಅಗತ್ಯಗಳಿಗಾಗಿ ಟೆಲಿಗ್ರಾಮ್ ಅನ್ನು ಬಳಸುತ್ತಾರೆ.

ಈ ತಾತ್ಕಾಲಿಕ ನಿಷೇಧದಿಂದಾಗಿ ಸಾಮಾನ್ಯ ಬಳಕೆದಾರರಿಗೆ ಕೆಲವು ದಿನಗಳ ಕಾಲ ತೊಂದರೆಯಾಗಲಿದ್ದರೂ, ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಪರೀಕ್ಷೆಯ ಭದ್ರತೆಯ ಹಿತದೃಷ್ಟಿಯಿಂದ ಈ ಕ್ರಮ ಅನಿವಾರ್ಯವಾಗಿತ್ತು ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಿಳಿಸಿದೆ.

ಎಡಿಟಿಂಗ್ ವೈಶಿಷ್ಟ್ಯದ ಮೇಲೂ ನಿರ್ಬಂಧ: ಟೆಲಿಗ್ರಾಮ್ ಆಪ್ ಮೇಲಿನ ನಿಷೇಧ ಜೂನ್ 22ಕ್ಕೆ ಮುಗಿದರೂ, ಜೂನ್ 30ರವರೆಗೆ ಭಾರತದಲ್ಲಿ ಈ ಮೆಸೇಜ್ ಎಡಿಟಿಂಗ್ ವೈಶಿಷ್ಟ್ಯವನ್ನು ನಿಷ್ಕ್ರಿಯಗೊಳಿಸುವಂತೆ (Disable) ಟೆಲಿಗ್ರಾಮ್ ಸಂಸ್ಥೆಗೆ ಸರ್ಕಾರ ಆದೇಶಿಸಿದೆ.

ಟೆಲಿಗ್ರಾಮ್‌ನಲ್ಲಿ ಹಳೆಯ ಸಂದೇಶಗಳ ಸಮಯವನ್ನು (Timestamp) ಬದಲಾಯಿಸದೆ, ಅವುಗಳ ಒಳಗಿನ ಪಠ್ಯವನ್ನು ಎಡಿಟ್ ಮಾಡಬಹುದು. ಪರೀಕ್ಷೆ ಮುಗಿದ ನಂತರ ಹಳೆಯ ಮೆಸೇಜ್‌ಗಳನ್ನು ಎಡಿಟ್ ಮಾಡಿ, ತಮಗೆ ಪರೀಕ್ಷೆಗೂ ಮುನ್ನವೇ ಪ್ರಶ್ನೆಪತ್ರಿಕೆ ಸಿಕ್ಕಿತ್ತು ಎಂದು ಸುಳ್ಳು ಪುರಾವೆಗಳನ್ನು ಸೃಷ್ಟಿಸಿ ಪ್ರಶ್ನೆಪತ್ರಿಕೆ ಸೋರಿಕೆ (Paper Leak) ವದಂತಿಗಳನ್ನು ಹರಡಲು ಈ ವೈಶಿಷ್ಟ್ಯವನ್ನು ಬಳಸಲಾಗುತ್ತಿತ್ತು. ಇದನ್ನು ತಡೆಯಲು ಸರ್ಕಾರ ಈ ನಿರ್ಧಾರ ಮಾಡಿದೆ.

ನೀಟ್ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ತಾವೇ ಮೊದಲು ನೀಡುವುದಾಗಿ ಹೇಳಿ ಕೆಲವು ವಂಚಕರ ಜಾಲಗಳು ಟೆಲಿಗ್ರಾಮ್ ಚಾನೆಲ್‌ಗಳ ಮೂಲಕ ಅಭ್ಯರ್ಥಿಗಳು ಹಾಗೂ ಅವರ ಪೋಷಕರಿಂದ ಹಣ ವಸೂಲಿ ಮಾಡಲು ಯತ್ನಿಸುತ್ತಿದ್ದವು. ಇಂತಹ ವಂಚನೆಗಳನ್ನು ತಡೆಯಲು ಸರ್ಕಾರ ಮುಂದಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:06 am, Tue, 16 June 26

Follow Us