ರೈತರ ಜತೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ಸಿದ್ಧ: ಹರ್​ದೀಪ್ ಸಿಂಗ್ ಪುರಿ

ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಹಲವರಿಗೆ ತಾವು ಯಾಕೆ ಪ್ರತಿಭಟನೆ ಮಾಡುತ್ತಿದ್ದೇವೆ ಎಂಬುದು ಗೊತ್ತಿಲ್ಲ. ಇದು ನನಗೆ ಬೇಸರವನ್ನುಂಟು ಮಾಡಿದೆ. ನಮ್ಮ ಜತೆ ಬಂದು ಮಾತನಾಡಿ ಎಂದು ಸರ್ಕಾರ ಈಗಲೂ ಎಲ್ಲ ರೈತರಿಗೆ ಸಂದೇಶ ಕಳುಹಿಸುತ್ತಿದೆ ಎಂದು ಎಚ್​ಡಿಸಿಸಿಐ ನಡೆಸಿದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪುರಿ ಹೇಳಿದ್ದಾರೆ.

ರೈತರ ಜತೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸಲು ಕೇಂದ್ರ ಸರ್ಕಾರ ಸಿದ್ಧ: ಹರ್​ದೀಪ್ ಸಿಂಗ್ ಪುರಿ
ಹರ್​ದೀಪ್ ಸಿಂಗ್ ಪುರಿ
Follow us
ರಶ್ಮಿ ಕಲ್ಲಕಟ್ಟ
|

Updated on:Dec 17, 2020 | 6:45 PM

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಕಾನೂನಿನ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ಜತೆ ಕುಳಿತು ಮಾತುಕತೆ ನಡೆಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಸಲು ನಾವು ಸಿದ್ಧ ಎಂದು ಕೇಂದ್ರ ವಸತಿ ಸಚಿವ ಹರ್​ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ಪಂಜಾಬ್, ಹರ್ಯಾಣ ಮತ್ತು ಇತರ ರಾಜ್ಯಗಳಿಂದ ಬಂದ ಸಾವಿರಾರು ರೈತರು ದೆಹಲಿ ಗಡಿಭಾಗವಾದ ಸಿಂಘು ಮತ್ತು ಟಿಕ್ರಿಯಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. 22 ದಿನಗಳಿಂದ ರೈತರ ಪ್ರತಿಭಟನೆ ಮುಂದುವರಿದಿದೆ.

ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಹಲವರಿಗೆ ತಾವು ಯಾಕೆ ಪ್ರತಿಭಟನೆ ಮಾಡುತ್ತಿದ್ದೇವೆ ಎಂಬುದು ಗೊತ್ತಿಲ್ಲ. ಇದು ನನಗೆ ಬೇಸರವನ್ನುಂಟು ಮಾಡಿದೆ. ನಮ್ಮ ಜತೆ ಬಂದು ಮಾತನಾಡಿ ಎಂದು ಸರ್ಕಾರ ಈಗಲೂ ಎಲ್ಲ ರೈತರಿಗೆ ಸಂದೇಶ ಕಳುಹಿಸುತ್ತಿದೆ ಎಂದು ಉದ್ಯಮ ಸಂಸ್ಥೆ ಎಚ್​ಡಿಸಿಸಿಐ ನಡೆಸಿದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಪುರಿ ಹೇಳಿದ್ದಾರೆ.

ಅವರದ್ದು ಮೂರು ಬೇಡಿಕೆಗಳಿವೆ- ಎಂಎಸ್​ಪಿ (ಕನಿಷ್ಠ ಬೆಂಬಲ ಬೆಲೆ) ವ್ಯವಸ್ಥೆ ರದ್ದು ಮಾಡಬಾರದು. ಮಂಡಿ ವ್ಯವಸ್ಥೆ ಇರಬೇಕು. ಯಾರೂ ರೈತರ ಭೂಮಿಯನ್ನು ಕಸಿದುಕೊಳ್ಳಬಾರದು ಎಂಬುದಾಗಿತ್ತು. ಇವುಗಳನ್ನು ನಾವು ಸಮ್ಮತಿಸಿದ್ದೇವೆ. ಪ್ರತಿಭಟನೆಕಾರರಲ್ಲಿ ತಪ್ಪು ಗ್ರಹಿಕೆ ಇದೆ. ಸಮಸ್ಯೆ ಪರಿಹಾರಕ್ಕಾಗಿ ನಾವು ಯಾರ ಜತೆಗೂ ಮಾತುಕತೆ ನಡೆಸಲು ಸಿದ್ದ ಎಂದಿದ್ದಾರೆ ನಾಗರಿಕ ವಿಮಾನ ಯಾನ ಸಚಿವ ಪುರಿ.

ಡಿಸೆಂಬರ್ ತಿಂಗಳ ಅಂತ್ಯ ಅಥವಾ 2021 ಮಾರ್ಚ್ ತಿಂಗಳೊಳಗೆ ನಾವು ಕೋವಿಡ್ ಪೂರ್ವ ಸಹಜ ಸ್ಥಿತಿಗೆ ಮರಳುವ ಸಾಧ್ಯತೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಾರ್ಚ್ ತಿಂಗಳಲ್ಲಿ ಲಾಕ್​​ಡೌನ್ ಘೋಷಣೆ ಆದಾಗ ಬಂದ್ ಆಗಿದ್ದ ವಿಮಾನಯಾನವು ಮೇ 25ರಂದು ಪುನರಾರಂಭವಾಗಿತ್ತು. ಆಗ ಪ್ರತಿದಿನ 30,000 ಪ್ರಯಾಣಿಕರು ಪ್ರಯಾಣ ನಡೆಸುತ್ತಿದ್ದರು. ಕೆಲವು ದಿನಗಳ ಹಿಂದೆ 2,53,000 ಪ್ರಯಾಣಿಕರು ಪ್ರಯಾಣಿಸಿದ್ದರು ಎಂದು ಸಚಿವರು ಹೇಳಿದ್ದಾರೆ.

Delhi chalo | ರೈತರು ಗಲಭೆಕೋರರಲ್ಲ, ಪ್ರತಿಭಟಿಸುವ ಹಕ್ಕು ಅವರಿಗಿದೆ: ಸುಪ್ರೀಂಕೋರ್ಟ್ ಸ್ಪಷ್ಟ ನುಡಿ

Published On - 6:41 pm, Thu, 17 December 20

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು