ಸರ್ಕಾರಗಳು ಬದಲಾಗಿವೆ, ಆಡಳಿತಗಾರರು ಬಂದರು, ಹೋದರು ಭಾರತ ಮಾತ್ರ ದೃಢವಾಗಿ ಉಳಿದಿದೆ: ಪ್ರಧಾನಿ ಮೋದಿ

ಸರ್ಕಾರಗಳು ಬದಲಾದವು, ಆಡಳಿತಗಾರರು ಬಂದರು ಮತ್ತು ಹೋದರು. ಆದರೆ ಭಾರತವು ದೃಢವಾಗಿ ಉಳಿದಿದೆ. ಈಶಾನ್ಯ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ತ್ವರಿತವಾಗಿ ನಡೆಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

Follow us
ಗಂಗಾಧರ​ ಬ. ಸಾಬೋಜಿ
|

Updated on: Apr 14, 2023 | 9:02 PM

ಅಸ್ಸಾಂ: ಪ್ರಧಾನಿ ನರೇಂದ್ರ ಮೋದಿ (Naredra Modi) ಅವರು ಶುಕ್ರವಾರ ಈಶಾನ್ಯದ ಮೊದಲ ಆಲ್​ ಇಂಡಿಯಾ ಇನ್​​ಸ್ಟಿಟ್ಯೂಟ್​​ ಆಫ್​ ಮೆಡಿಕಲ್​ ಸೈನ್ಸಸ್​ ಗುವಾಹಟಿಯನ್ನು ಉದ್ಘಾಟಿಸಿದರು. AIIMS ಗುವಾಹಟಿಯ ಶಂಕುಸ್ಥಾಪನೆಯನ್ನು ಪ್ರಧಾನಿ ಮೋದಿಯವರು ಮೇ 2017 ರಲ್ಲಿ ನೆರವೇರಿಸಿದ್ದು, 1120 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಗುವಾಹಟಿ ವಿಮಾನ ನಿಲ್ದಾಣದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಪ್ರಧಾನಿಯನ್ನು ಬರಮಾಡಿಕೊಂಡರು. ಹಾಗೆಯೇ 14,300 ಕೋಟಿ ರೂ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಪಲಾಶಬರಿ ಮತ್ತು ಸುಳ್ಕುಚಿಯನ್ನು ಸಂಪರ್ಕಿಸುವ ಬ್ರಹ್ಮಪುತ್ರ ನದಿಯ ಸೇತುವೆ ಮತ್ತು ಶಿವಸಾಗರದಲ್ಲಿ ‘ರಂಗ್ ಘರ್’ ಸೌಂದರ್ಯೀಕರಣ ಕಾಮಗಾರಿಗೆ ಅವರು ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರಗಳು ಬದಲಾದವು, ಆಡಳಿತಗಾರರು ಬಂದರು ಮತ್ತು ಹೋದರು. ಆದರೆ ಭಾರತವು ದೃಢವಾಗಿ ಉಳಿದಿದೆ. ಈಶಾನ್ಯ ಭಾಗದಲ್ಲಿ ಅಭಿವೃದ್ಧಿ ಕಾರ್ಯಗಳು ತ್ವರಿತವಾಗಿ ನಡೆಯುತ್ತಿದೆ ಎಂದು ಹೇಳಿದರು.

ಏಕ್ ಭಾರತ್, ಶ್ರೇಷ್ಠ ಭಾರತ್​ ಪ್ರತಿಬಿಂಬ

ನೀವೆಲ್ಲರೂ ನಿಮ್ಮ ಸಂಸ್ಕೃತಿಯನ್ನು ಸಾಕಷ್ಟು ಉಳಿಸಿದ್ದೀರಿ ಮತ್ತು ಬೆಳೆಸಿದ್ದೀರಿ. ಇಲ್ಲಿರುವ ನಾವೆಲ್ಲರೂ ಈ ಸಂಸ್ಕೃತಿ ಮತ್ತು ಬೆಳವಣಿಗೆಯ ಹಬ್ಬವನ್ನು ಆಚರಿಸುತ್ತಿದ್ದೇವೆ. ಈ ಸಮಾರಂಭವು ಏಕ್ ಭಾರತ್, ಶ್ರೇಷ್ಠ ಭಾರತ್​ ಪ್ರತಿಬಿಂಬವಾಗಿದೆ. ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರ ನಮ್ಮ ಸಂಕಲ್ಪವನ್ನು ಈಡೇರಿಸಲು ಈ ಹಬ್ಬವು ಸ್ಫೂರ್ತಿಯಾಗಿದೆ. ನಮ್ಮ ಸಂಸ್ಕೃತಿ, ನಮ್ಮ ಸಂಪ್ರದಾಯಗಳು ಸಾವಿರಾರು ವರ್ಷಗಳಿಂದ ಪ್ರತಿಯೊಬ್ಬ ಭಾರತೀಯರನ್ನುತಲುಪುತ್ತದೆ. ಇದು ಭಾರತದ ವಿಶೇಷ ಎಂದರು.

ಇದನ್ನೂ ಓದಿ: Modi In Assam: ಗುವಾಹಟಿಯಲ್ಲಿ ಏಮ್ಸ್​ ಆಸ್ಪತ್ರೆ ಉದ್ಘಾಟಿಸಿದ ಮೋದಿ, ಬಿಹು ನೃತ್ಯ ದಾಖಲೆಗೆ ಸಾಕ್ಷಿಯಾಗಲಿರುವ ಪ್ರಧಾನಿ

ಭಾರತ ಇಂದು ಸ್ವತಂತ್ರವಾಗಿದೆ. ಅಭಿವೃದ್ಧಿ ಹೊಂದಿದ ಭಾರತವನ್ನು ನಿರ್ಮಿಸುವುದು ನಮ್ಮೆಲ್ಲರ ದೊಡ್ಡ ಕನಸು. ದೇಶಕ್ಕಾಗಿ ಬದುಕುವ ಸೌಭಾಗ್ಯ ನಮಗೆ ಸಿಕ್ಕಿದೆ. ನನ್ನ ಭಾರತದ ಯುವಕರಿಗೆ ಜಗತ್ತನ್ನು ಗೆಲ್ಲುವ ಸಾಮರ್ಥ್ಯವಿದೆ ಎಂದು ಹೇಳಿದರು.

ಜನರ ಕಷ್ಟಗಳನ್ನು ಕಡಿಮೆ ಮಾಡುವತ್ತ ಗಮನ

ಮತ ಬ್ಯಾಂಕ್ ಬದಲಿಗೆ ನಾವು ದೇಶದ ಜನರ ಕಷ್ಟಗಳನ್ನು ಕಡಿಮೆ ಮಾಡುವತ್ತ ಗಮನಹರಿಸಿದ್ದೇವೆ. ಹಣದ ಕೊರತೆಯಿಂದ ಯಾವುದೇ ಬಡವರ ಚಿಕಿತ್ಸೆಯನ್ನು ಮುಂದೂಡಬಾರದು ಎಂದು ನಾವು ನಿರ್ಧರಿಸಿದ್ದೇವೆ. 2014 ಕ್ಕಿಂತ ಮೊದಲು 10 ವರ್ಷಗಳಲ್ಲಿ ಕೇವಲ 150 ವೈದ್ಯಕೀಯ ಕಾಲೇಜುಗಳನ್ನು ಮಾತ್ರ ನಿರ್ಮಿಸಲಾಗಿದೆ. ಕಳೆದ 9 ವರ್ಷಗಳಲ್ಲಿ ನಮ್ಮ ಸರ್ಕಾರದಲ್ಲಿ ಸುಮಾರು 300 ಹೊಸ ವೈದ್ಯಕೀಯ ಕಾಲೇಜುಗಳನ್ನು ನಿರ್ಮಿಸಿದ್ದೇವೆ. ಕಳೆದ 9 ವರ್ಷಗಳಲ್ಲಿ ದೇಶದಲ್ಲಿ ಎಂಬಿಬಿಎಸ್ ಸೀಟುಗಳು ದ್ವಿಗುಣಗೊಂಡು ಒಂದು ಲಕ್ಷಕ್ಕೂ ಹೆಚ್ಚಾಗಿವೆ ಎಂದು ತಿಳಿಸಿದರು.

ಇದನ್ನೂ ಓದಿ: Guinness Record: ಒಂದೇ ಸ್ಥಳದಲ್ಲಿ ಅತಿ ದೊಡ್ಡ ಬಿಹು ಪ್ರದರ್ಶನ; ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ಪ್ರವೇಶಿಸಿದ ಅಸ್ಸಾಂ

11 ಸಾವಿರಕ್ಕೂ ಹೆಚ್ಚು ಕಲಾವಿದರಿಂದ ಬಿಹು ನೃತ್ಯ  

ಈ ಸಂದರ್ಭದಲ್ಲಿ ಗುವಾಹಟಿಯ ಸರುಸಜೈ ಕ್ರೀಡಾಂಗಣದಲ್ಲಿ ಬಿಹು ನೃತ್ಯದ ವಿಶ್ವ ದಾಖಲೆಗೆ ಸಾಕ್ಷಿಯಾಯಿತು. 11 ಸಾವಿರಕ್ಕೂ ಹೆಚ್ಚು ಕಲಾವಿದರು ಏಕಕಾಲದಲ್ಲಿ ಬಿಹು ನೃತ್ಯ ಮಾಡುವ ಮೂಲಕ ಗಿನ್ನೆಸ್ ವಿಶ್ವದಾಖಲೆ ನಿರ್ಮಾಣ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್