ಮಾಧ್ಯಮ, ಸಾಮಾಜಿಕ ಮಾಧ್ಯಮಗಳಲ್ಲಿ ರಾಮ ಮಂದಿರ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಬೇಡಿ: ಕೇಂದ್ರ

ಸಮಾರಂಭದ ಮುಂಚೆಯೇ, ವಿಐಪಿ ಟಿಕೆಟ್‌ಗಳು, ರಾಮಮಂದಿರ ಪ್ರಸಾದವನ್ನು ಒದಗಿಸುವುದಾಗಿ ಹೇಳಿಕೊಳ್ಳುವ ಹಲವಾರು ವಂಚನೆಯ ಲಿಂಕ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ಹಿನ್ನಲೆಯಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಸುಳ್ಳು ಸುದ್ದಿ ಹರಡದಂತೆ ಎಚ್ಚರವಹಿಸಲು ಸಲಹೆ ನೀಡಿದೆ.

ಮಾಧ್ಯಮ, ಸಾಮಾಜಿಕ ಮಾಧ್ಯಮಗಳಲ್ಲಿ ರಾಮ ಮಂದಿರ ಬಗ್ಗೆ ಸುಳ್ಳು ಸುದ್ದಿ ಪ್ರಕಟಿಸಬೇಡಿ: ಕೇಂದ್ರ
ರಾಮಮಂದಿರ
Follow us
ರಶ್ಮಿ ಕಲ್ಲಕಟ್ಟ
|

Updated on: Jan 20, 2024 | 5:16 PM

ದೆಹಲಿ ಜನವರಿ 20: ರಾಮ ಮಂದಿರದ (Ram mandir) ಘಟನೆಗೆ ಸಂಬಂಧಿಸಿದ ಸುಳ್ಳು ಮತ್ತು ತಿರುಚಿದ ವಿಷಯವನ್ನು ಪ್ರಕಟಿಸುವುದನ್ನು ತಡೆಯಲು ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ಸರ್ಕಾರ ಕೇಳಿಕೊಂಡಿದೆ. ಭವ್ಯ ಸಮಾರಂಭದಲ್ಲಿ, ಜನವರಿ 22 ರಂದು ಭಗವಾನ್ ರಾಮ ಲಲ್ಲಾನ (Ram lalla) ಪ್ರಾಣ-ಪ್ರತಿಷ್ಠೆಯೊಂದಿಗೆ ರಾಮ ಮಂದಿರವನ್ನು ಉದ್ಘಾಟಿಸಲಾಗುವುದು. ಈ ಕಾರ್ಯಕ್ರಮಕ್ಕೆ ಒಂದು ವಾರ ಮುಂಚಿತವಾಗಿ, ಜನವರಿ 16 ರಂದು ವಿಧಿವಿಧಾನ ಆಚರಣೆಗಳು ಪ್ರಾರಂಭವಾದವು. ಸಮಾರಂಭದ ಮುಂಚೆಯೇ, ವಿಐಪಿ ಟಿಕೆಟ್‌ಗಳು, ರಾಮಮಂದಿರ ಪ್ರಸಾದವನ್ನು ಒದಗಿಸುವುದಾಗಿ ಹೇಳಿಕೊಳ್ಳುವ ಹಲವಾರು ವಂಚನೆಯ ಲಿಂಕ್‌ಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ

“ಕೆಲವು ಪರಿಶೀಲಿಸದ, ಪ್ರಚೋದನಕಾರಿ ಮತ್ತು ನಕಲಿ ಸಂದೇಶಗಳನ್ನು ವಿಶೇಷವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಡಲಾಗುತ್ತಿದೆ, ಇದು ಕೋಮು ಸೌಹಾರ್ದತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುತ್ತದೆ” ಇದಲ್ಲದೆ, ತಮ್ಮ ಶ್ರದ್ಧೆಯ ಭಾಗವಾಗಿ, ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು ಮೇಲೆ ತಿಳಿಸಲಾದ ಸ್ವಭಾವದ ಮಾಹಿತಿಯನ್ನು ಹೋಸ್ಟ್ ಮಾಡಲು, ಪ್ರದರ್ಶಿಸಲು ಅಥವಾ ಪ್ರಕಟಿಸಲು ಸಮಂಜಸವಾದ ಪ್ರಯತ್ನಗಳನ್ನು ಮಾಡಲು ಸಲಹೆ ನೀಡಲಾಗುತ್ತದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿದೆ .

ಇ-ಕಾಮರ್ಸ್ ಸೈಟ್ ಅಮೆಜಾನ್ ನಲ್ಲಿ’ಶ್ರೀರಾಮ ಮಂದಿರ ಅಯೋಧ್ಯೆ ಪ್ರಸಾದ್’ ಎಂದು ಸಿಹಿತಿಂಡಿ ಮಾರಾಟ ಮಾಡುತ್ತಿರುವ ಬಗ್ಗೆ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರದಿಂದ ನೋಟಿಸ್ ಅನ್ನು ಸ್ವೀಕರಿಸಿದೆ. ಅಮೆಜಾನ್ ತನ್ನ ನೀತಿಗಳಿಗೆ ಅನುಗುಣವಾಗಿ ಅಂತಹ ಮಾರಾಟ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ:ಅಯೋಧ್ಯೆ ರಾಮ ಮಂದಿರ ಪ್ರಸಾದ; ಎಂದು ಸಿಹಿತಿಂಡಿ ಮಾರಾಟ ಮಾಡಿದ್ದಕ್ಕೆ ಅಮೆಜಾನ್‌ಗೆ ಕೇಂದ್ರ ಸರ್ಕಾರ ನೋಟೀಸ್

ಕೆಲವು ದಿನಗಳ ಹಿಂದೆ, ಪ್ರಾಣ-ಪ್ರತಿಷ್ಠಾ ಕಾರ್ಯಕ್ರಮಕ್ಕಾಗಿ ತ್ವರಿತ ವಿಐಪಿ ಟಿಕೆಟ್‌ಗಳ ಭರವಸೆಯೊಂದಿಗೆ ನಕಲಿ QR ಕೋಡ್‌ನೊಂದಿಗೆ WhatsApp ಸಂದೇಶವನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಯಿತು. ಪ್ರಾಣ-ಪ್ರತಿಷ್ಠಾ ಕಾರ್ಯಕ್ರಮಕ್ಕಿರುವ ಆಹ್ವಾನವನ್ನು ಆಯ್ದ ಅತಿಥಿಗಳಿಗೆ ದೇವಾಲಯದ ಟ್ರಸ್ಟ್ ಮಾತ್ರ ಕಳುಹಿಸುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್