ಸರ್ಕಾರಿ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿ ತಲುಪಬೇಕು, ಇಲ್ಲವೇ ಅರ್ಧ ದಿನದ ರಜೆ ಕಡಿತ: ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳಿಗೆ ಮಹತ್ವದ ಆದೇಶವನ್ನು ನೀಡಿದೆ. ಇನ್ನು ಮುಂದೆ ಬೆಳಗ್ಗೆ 9.15ಕ್ಕೆ ಕಚೇರಿಗೆ ಕಡ್ಡಾಯವಾಗಿ ಹಾಜರಾಗಬೇಕು ಎಂದು ಆದೇಶವನ್ನು ನೀಡಿದೆ. ಒಂದು ವೇಳೆ ತಡವಾದರೆ ಅರ್ಧ ದಿನದ ಕ್ಯಾಶುಯಲ್ ರಜೆಯನ್ನು ಕಡಿತಗೊಳಿಸಲಾಗುವುದು ಎಂದು ಹೇಳಿದೆ.

ಸರ್ಕಾರಿ ಉದ್ಯೋಗಿಗಳು ಬೆಳಗ್ಗೆ 9.15ಕ್ಕೆ ಕಚೇರಿ ತಲುಪಬೇಕು, ಇಲ್ಲವೇ ಅರ್ಧ ದಿನದ ರಜೆ ಕಡಿತ: ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ ಅಧಿಕಾರಿಗಳು ಹಾಗೂ ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on: Jun 24, 2024 | 9:46 AM

ಕೇಂದ್ರ ಸರ್ಕಾರ ದೇಶಾದ್ಯಂತ ತನ್ನ ಉದ್ಯೋಗಿಗಳಿಗೆ ಖಡಕ್​​​ ಆದೇಶವೊಂದನ್ನು ನೀಡಿದೆ. ಕಛೇರಿಗೆ ತಡವಾಗಿ ಬರುವ ಸಿಬ್ಬಂದಿಗಳಿಗೆ ಕೇಂದ್ರ ಚಾಟಿ ಬೀಸಿದೆ. ಇನ್ನು ಮುಂದೆ ಉನ್ನತ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಬೆಳಗ್ಗೆ 9:15 ರೊಳಗೆ ಕೆಲಸಕ್ಕೆ ಬರುವಂತೆ ಸೂಚಿಸಿದೆ. ಇದರಲ್ಲಿ 15 ನಿಮಿಷಗಳ ಗ್ರೇಸ್ ಅವಧಿಯೂ ಸೇರಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಸುತ್ತೋಲೆ ಹೊರಡಿಸಿದೆ. ನೌಕರರು ತಮ್ಮ ಕಚೇರಿಗಳಿಗೆ ಬೆಳಗ್ಗೆ 9:15 ಕ್ಕೆ ತಲುಪಬೇಕು ಹಾಗೂ ಆಧಾರ್-ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಬಳಸಿಕೊಂಡು ತಮ್ಮ ಹಾಜರಾತಿಯನ್ನು ಹಾಕಬೇಕು ಎಂದು ಸೂಚಿಸಿದೆ.

ಸಿಬ್ಬಂದಿಗಳು ಒಂದು ವೇಳೆ ಬೆಳಗ್ಗೆ 9.15 ರೊಳಗೆ ಬಾರದಿದ್ದಲ್ಲಿ ಅರ್ಧ ದಿನದ ಕ್ಯಾಶುಯಲ್ ರಜೆಯನ್ನು ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದೆ. ಕೇಂದ್ರ ಸರ್ಕಾರಿ ಕಚೇರಿಗಳು ಬೆಳಗ್ಗೆ 9 ರಿಂದ ಸಂಜೆ 5.30 ರವರೆಗೆ ಕಡ್ಡಾಯವಾಗಿ ಕಾರ್ಯನಿರ್ವಹಿಸುತ್ತವೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ. ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರಿ ಉದ್ಯೋಗಿಗಳು ಕಚೇರಿಗೆ ತಡವಾಗಿ ಬರುವುದು ಮತ್ತು ಕಚೇರಿಯಿಂದ ಬೇಗನೆ ಹೊರಡುವವರ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು ಹಾಗೂ ಇದನ್ನು ತಡೆಯಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೋವಿಡ್-19ನಿಂದ ಆಧಾರ್-ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಬಳಕೆಯನ್ನು ಅಮಾನತುಗೊಳಿಸಲಾಗಿತ್ತು. ಆದರೆ ಇದೀಗ ಆ ವ್ಯವಸ್ಥೆಯನ್ನು ಮತ್ತೆ ಜಾರಿ ಮಾಡಿ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ಹಾಕಲೇಬೇಕು ಎಂದು ಹೇಳಲಾಗಿದೆ.

ಇದನ್ನೂ ಓದಿ: ನೀಟ್​ ಪ್ರಶ್ನೆ ಪತ್ರಿಕೆ ಸೋರಿಕೆ: ಉನ್ನತ ಮಟ್ಟದ ಸಮಿತಿ ರಚನೆ, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವುದು ನಮ್ಮ ಬದ್ಧತೆ: ಧರ್ಮೇಂದ್ರ ಪ್ರಧಾನ್

ಸಿಬ್ಬಂದಿ ರಜೆ ಬಗ್ಗೆ ಮುಂಚಿತವಾಗಿ ತಿಳಿಸಬೇಕು

ವರದಿಯ ಪ್ರಕಾರ, ಸಿಬ್ಬಂದಿಗಳಿಗೆ ಒಂದು ದಿನ ಕಚೇರಿಗೆ ಹಾಜರಾಗಲು ಸಾಧ್ಯವಾಗದಿದ್ದರೆ ಮುಂಚಿತವಾಗಿ ತಿಳಿಸಲು ನೌಕರರಿಗೆ ಸುತ್ತೋಲೆ ಹೇಳಲಾಗಿದೆ. ಇದಕ್ಕಾಗಿ ಕ್ಯಾಶುಯಲ್ ರಜೆಯನ್ನು ಬಳಸಿಕೊಳ್ಳಬೇಕು ಎಂದು ಹೇಳಿದೆ. ಇನ್ನು ಈ ಬಗ್ಗೆ ಹಿರಿಯ ಅಧಿಕಾರಿಗಳು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ಸಿಬ್ಬಂದಿಗಳು ಸಂಜೆ 7 ರ ನಂತರ ಹೊರಡುವುದರಿಂದ ಅವರಿಗೆ ನಿಗದಿತ ಕೆಲಸದ ಸಮಯವಿಲ್ಲ. ಹೆಚ್ಚಿದ ಡಿಜಿಟಲೀಕರಣವು ಅನೇಕ ಫೈಲ್‌ಗಳನ್ನು ವಿದ್ಯುನ್ಮಾನವಾಗಿ ಅವರಿಗೆ ಲಭ್ಯವಾಗುವಂತೆ ಮಾಡಿದೆ. ಇದು ಮನೆಯಿಂದಲೂ ಕೆಲಸ ಮಾಡುವ ಅವಕಾಶವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಕೋವಿಡ್ -19 ಲಸದ ಸಂಸ್ಕೃತಿಯಲ್ಲಿ ತುಂಬಾ ಬದಲಾವಣೆಯನ್ನು ತಂದಿದೆ. ಲಾಕ್‌ಡೌನ್‌ ಸಮಯದಲ್ಲಿ ಮಾಡಿದ ವರ್ಕ್​​​​ ಫ್ರಮ್ ಹೋಮ್ ವ್ಯವಸ್ಥೆ, ಈಗಲೂ ರೂಢಿಯಲ್ಲಿದೆ. ಇದು ವಾಸ್ತವವಾಗಿ ತಮ್ಮ ಉತ್ಪಾದಕತೆಯ ಮಟ್ಟವನ್ನು ಹೆಚ್ಚಿಸಿದೆ ಎಂದು ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ಉದ್ಯೋಗಿಗಳು ವಾದಿಸುತ್ತಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ