AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ದಿನಗಳ ಒಳಗೆ ನಿಯಮಪಾಲನೆ ವಿವರ ನೀಡಲು ಆನ್​ಲೈನ್ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ

ಕಳೆದ ಫೆಬ್ರುವರಿ ತಿಂಗಳಲ್ಲಿ ಪ್ರಕಟಿಸಿದ್ದ ನಿಯಮಗಳ ಪಾಲನೆ ಬಗ್ಗೆ 15 ದಿನಗಳ ಒಳಗೆ ವಿವರ ನೀಡಬೇಕು ಎಂದು ಸೂಚಿಸಲಾಗಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ನಿನ್ನೆಯಷ್ಟೇ (ಮೇ 26) ಕೇಂದ್ರ ಸರ್ಕಾರ ಇಂಥದ್ದೇ ವಿವರ ನೀಡಲು ಸೂಚನೆ ನೀಡಿ, 24 ಗಂಟೆಗಳ ಗಡುವು ನೀಡಿತ್ತು.

15 ದಿನಗಳ ಒಳಗೆ ನಿಯಮಪಾಲನೆ ವಿವರ ನೀಡಲು ಆನ್​ಲೈನ್ ಮಾಧ್ಯಮಗಳಿಗೆ ಕೇಂದ್ರ ಸರ್ಕಾರ ಸೂಚನೆ
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:May 27, 2021 | 5:56 PM

Share

ದೆಹಲಿ: ನಿಯಮಪಾಲನೆ ವಿವರ ನೀಡುವಂತೆ ಕೇಂದ್ರ ಸರ್ಕಾರವು ಆನ್​ಲೈನ್ ಸುದ್ದಿ ಪ್ರಕಾಶನ ಸಂಸ್ಥೆಗಳು ಮತ್ತು ಒಟಿಟಿ ವೇದಿಕೆಗಳಿಗೆ ಇಂದು ಸೂಚಿಸಿದೆ. ಕಳೆದ ಫೆಬ್ರುವರಿ ತಿಂಗಳಲ್ಲಿ ಪ್ರಕಟಿಸಿದ್ದ ನಿಯಮಗಳ ಪಾಲನೆ ಬಗ್ಗೆ 15 ದಿನಗಳ ಒಳಗೆ ವಿವರ ನೀಡಬೇಕು ಎಂದು ಸೂಚಿಸಲಾಗಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳಿಗೆ ನಿನ್ನೆಯಷ್ಟೇ ಕೇಂದ್ರ ಸರ್ಕಾರ ಇಂಥದ್ದೇ ವಿವರ ನೀಡಲು ಸೂಚನೆ ನೀಡಿ, 24 ಗಂಟೆಗಳ ಗಡುವು ನೀಡಿತ್ತು. ಈ ಸಂಬಂಧ ಹಲವು ಆನ್​ಲೈನ್ ವೇದಿಕೆಗಳು ವಿವಿಧ ನ್ಯಾಯಾಲಯಗಳಲ್ಲಿ ಅರ್ಜಿ ದಾಖಲಿಸಿದ್ದು, ವಿಚಾರಣೆಯಿನ್ನೂ ಬಾಕಿಯಿದೆ.

ಕಳೆದ ಫೆಬ್ರುವರಿ ತಿಂಗಳಲ್ಲಿ ಕೇಂದ್ರ ಸರ್ಕಾರವು ‘ಮಾಹಿತಿ ತಂತ್ರಜ್ಞಾನ (ಮಾರ್ಗದರ್ಶಿ ಸೂತ್ರಗಳು, ನಿಗಾ ವ್ಯವಸ್ಥೆ ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು 2021’ (Information Technology (Guidelines for Intermediaries and Digital Media Ethics Code) Rules) ಪ್ರಕಟಿಸಿತ್ತು. ಡಿಜಿಟಲ್ ಸುದ್ದಿ ಮಾಧ್ಯಮಗಳು, ಸಾಮಾಜಿಕ ಮಾಧ್ಯಮ ವೇದಿಕೆಗಳು ಮತ್ತು ನೆಟ್​ಫ್ಲಿಕ್ಸ್​ ಹಾಗೂ ಅಮೆಜಾನ್​ ಪ್ರೈಂನಂಥ ಒಟಿಟಿ ಸ್ಟ್ರೀಮಿಂಗ್ ಸೇವೆಗಳ ನಿಯಂತ್ರಣಕ್ಕೆ ಮೊದಲ ಬಾರಿಗೆ ಮಾರ್ಗದರ್ಶಿ ಸೂತ್ರಗಳನ್ನು ಪ್ರಕಟಿಸಲಾಯಿತು.

ಸಮಾನ ಅವಕಾಶಗಳನ್ನು ಕಲ್ಪಿಸಿಕೊಡುವ, ಪ್ರಗತಿಪರ, ಮೃದುಧೋರಣೆಯ ನಿಯಂತ್ರಣ ವ್ಯವಸ್ಥೆ ರೂಪಿಸಲು ಸರ್ಕಾರ ಉದ್ದೇಶಿಸಿದೆ. ನೀತಿಸಂಹಿತೆ ಹಾಗೂ ಮೂರು ಹಂತಗಳ ದೂರು ವಿಲೇವಾರಿ ವ್ಯವಸ್ಥೆ ರೂಪಿಸಬೇಕೆಂದು ಸುದ್ದಿ ಜಾಲತಾಣಗಳು ಮತ್ತು ಒಟಿಟಿ ವೇದಿಕೆಗಳಿಗೆ ಸರ್ಕಾರ ಸೂಚನೆ ನೀಡಿತ್ತು.

ಈ ನಿಯಮಗಳ ಪ್ರಕಾರ ಎಲ್ಲ ಡಿಜಿಜಲ್ ವೇದಿಕೆಗಳು ದೂರು ವಿಲೇವಾರಿ ವ್ಯವಸ್ಥೆಯನ್ನು ಆರಂಭಿಸಬೇಕಿದೆ. ನಿಯೋಜಿತ ಅಧಿಕಾರಿಯು ದೂರುಗಳನ್ನು ವಿಚಾರಣೆ ನಡೆಸಿ ಸೂಕ್ತ ಕ್ರಮಕ್ಕೆ ಶಿಫಾರಸು ಮಾಡಬಹುದು. ಇಂಥ ವೇದಿಕೆಗಳಲ್ಲಿ ಪ್ರಸಾರವಾಗುವ ಕಂಟೆಂಟ್​ನಲ್ಲಿ ಇರಬಹುದಾದ ಆಕ್ಷೇಪಾರ್ಹವಾದವುಗಳನ್ನು ಗುರುತಿಸಿ ತೆಗೆದುಹಾಕುತ್ತಾರೆ. ಸರ್ಕಾರದ ನಿಯಮಗಳಿಗೆ ಬದ್ಧವಾಗಿರುವ ಬಗ್ಗೆ ವರದಿಗಳನ್ನು ನೀಡಬೇಕು.

ಈ ಕಾನೂನು ಡಿಜಿಟಲ್ ಮಾಧ್ಯಮಗಳನ್ನು ಪತ್ರಿಕಾ ಮಂಡಳಿಯ ಅಧೀನಕ್ಕೆ ತರುವುದರ ಜೊತೆಗೆ, ಎಲ್ಲ ಸುದ್ದಿ ಜಾಲತಾಣಗಳು ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ವೆಬ್​ಸೈಟ್​ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸೂಚಿಸಿದೆ.

ಸುದ್ದಿತಾಣಗಳಿಗೆ ಪ್ರಕಾಶಕರು ಸ್ವಯಂ ನಿಯಂತ್ರಣಾ ವ್ಯವಸ್ಥೆ ರೂಪಿಸಬೇಕು. ಇದಕ್ಕಾಗಿ ನಿರ್ದಿಷ್ಟ ವ್ಯಕ್ತಿಯನ್ನು ಗುರುತಿಸಿರಬೇಕು. ಅಂತಿಮವಾಗಿ ಈ ವಿಚಾರವನ್ನು ಉನ್ನತ ಹಂತದಲ್ಲಿ ನಿಗಾ ವಹಿಸಲು ಒಂದು ವ್ಯವಸ್ಥೆ ರೂಪಿಸಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರವು ಹೇಳಿತ್ತು.

ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಒಟ್ಟಾರೆ ವ್ಯವಸ್ಥೆಯ ಮೇಲೆ ನಿಗಾ ಇರಿಸುವ ವ್ಯವಸ್ಥೆ ರೂಪಿಸಲಿದೆ. ಸ್ವಯಂ ನಿಯಂತ್ರಣ ಸಂಸ್ಥೆಗಳು ಅನುಸರಿಸಬೇಕಾದ ನಿಯಮಗಳನ್ನು ರೂಪಿಸುವ ಜೊತೆಗೆ ಶಿಷ್ಟಾಚಾರಗಳ ಪಟ್ಟಿಯನ್ನೂ ಪ್ರಕಟಿಸಲಿದೆ ಎಂದು ಕೇಂದ್ರ ಸರ್ಕಾರವು ಹೇಳಿತ್ತು. ವಿವಿಧ ಇಲಾಖೆಗಳ ನಡುವಣ ಸಮನ್ವಯಕ್ಕಾಗಿ ಸಮಿತಿಯೊಂದನ್ನು ರಚಿಸುವುದಾಗಿಯೂ ತಿಳಿಸಿತ್ತು. ಜಂಟಿ ಕಾರ್ಯದರ್ಶಿ ಅಥವಾ ಅದಕ್ಕೂ ಮೇಲ್ಮಟ್ಟದ ಅಧಿಕಾರಿಯೊಬ್ಬರನ್ನು ಒಟ್ಟಾರೆ ವ್ಯವಸ್ಥೆಯ ಮೇಲ್ವಿಚಾರಕ್ಕಾಗಿ ನೇಮಿಸಲಾಗುವುದು. ಯಾವುದಾದರೂ ಕಂಟೆಂಟ್ ಸರಿಯಿಲ್ಲ ಎನಿಸಿದರೆ ಈ ಅಧಿಕಾರಿ ಅದನ್ನು ನಿರ್ಬಂಧಿಸಲು ಆದೇಶಿಸುವ ಅಧಿಕಾರ ಹೊಂದಿರುತ್ತಾರೆ ಎಂದು ಕೇಂದ್ರ ಸರ್ಕಾರ ಹೇಳಿತ್ತು.

(Govt of India Directs Online News Publishers to Give Details On Compliance In 15 Days)

ಇದನ್ನೂ ಓದಿ: ಸೋಷಿಯಲ್ ಮೀಡಿಯಾ, ಒಟಿಟಿಗೆ ಹೊಸ ಕಾನೂನು; ಟ್ವಿಟ್ಟರ್, ಫೇಸ್​ಬುಕ್ ಕೆಲಸ ಮಾಡೋದು ನಿಲ್ಲಿಸುತ್ತಾ?

ಇದನ್ನೂ ಓದಿ: ಸೋಷಿಯಲ್ ಮೀಡಿಯಾ, ಒಟಿಟಿ, ಡಿಜಿಟಲ್ ಕಂಟೆಂಟ್ ನಿಯಂತ್ರಣಕ್ಕೆ ಕೇಂದ್ರದಿಂದ ಹೊಸ ನಿಯಮ: ನೀವು ತಿಳಿಯಬೇಕಾದ 10 ಅಂಶಗಳು

Published On - 5:53 pm, Thu, 27 May 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ