NRC: ಆಧಾರ್​ನೊಂದಿಗೆ ಚುನಾವಣಾ ಗುರುತು ಸಂಖ್ಯೆಯ ಬೆಸುಗೆ; ರಾಷ್ಟ್ರೀಯ ಪೌರತ್ವ ನೋಂದಣಿಗಾಗಿ ದತ್ತಾಂಶ ಕಲೆಹಾಕುವ ಮೊದಲ ಹೆಜ್ಜೆ

ಕೇಂದ್ರ ಸರ್ಕಾರವು ಆರಂಭಿಸಲಿರುವ ಹೊಸ ದತ್ತಾಂಶ ಸಂಚಯವನ್ನು ಜನಸಂಖ್ಯಾ ರಿಜಿಸ್ಟರ್, ಮತದಾರರ ಪಟ್ಟಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಪಾಸ್​ಪೋರ್ಟ್​ ಮತ್ತು ಡ್ರೈವಿಂಗ್ ಲೈಸೆನ್ಸ್​ನೊಂದಿಗೆ ಸಂಯೋಜಿಸುವ ನಿರೀಕ್ಷೆ ಇದೆ.

NRC: ಆಧಾರ್​ನೊಂದಿಗೆ ಚುನಾವಣಾ ಗುರುತು ಸಂಖ್ಯೆಯ ಬೆಸುಗೆ; ರಾಷ್ಟ್ರೀಯ ಪೌರತ್ವ ನೋಂದಣಿಗಾಗಿ ದತ್ತಾಂಶ ಕಲೆಹಾಕುವ ಮೊದಲ ಹೆಜ್ಜೆ
ಎನ್​ಆರ್​ಸಿ ವಿರೋಧಿ ಪ್ರತಿಭಟನೆ (ಎಡಚಿತ್ರ) ಮತ್ತು ಅಧಿಕಾರಿಗಳ ಕಾರ್ಯವೈಖರಿ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 14, 2022 | 7:48 AM

ದೆಹಲಿ: ರಾಷ್ಟ್ರೀಯ ಪೌರತ್ವ ನೋಂದಣಿ (National Register of Citizens – NRC) ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವು ಸದ್ದಿಲ್ಲದೆ ಕೆಲವು ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಮಹತ್ವಾಕಾಂಕ್ಷಿ ಯೋಜನೆಯ ಮೊದಲ ಹೆಜ್ಜೆಯಾಗಿ ಭಾರತೀಯ ನಾಗರಿಕರ ರಾಷ್ಟ್ರೀಯ ದತ್ತಾಂಶ ಸಂಚಯ (ಡೇಟಾಬೇಸ್) ರೂಪಿಸಲು ಕೇಂದ್ರ ಸರ್ಕಾರವು ಮುಂದಾಗಿದೆ. ಮುಂದಿನ ದಿನಗಳಲ್ಲಿ ದೇಶದಲ್ಲಿ ಆಗುವ ಎಲ್ಲ ಜನನ ಮತ್ತು ಮರಣಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ನೋಂದಾಯಿಸಲಾಗುವುದು ಎಂಬ ಸಂಗತಿಯು ಸಚಿವ ಸಂಪುಟ ಸಭೆಯ ಟಿಪ್ಪಣಿ ಮತ್ತು ಗೃಹ ಸಚಿವಾಲಯವು ಮಂಡಿಸಿರುವ ಕರಡು ಮಸೂದೆಯು ಬಹಿರಂಗಪಡಿಸಿದೆ. ಈವರೆಗೆ ಇಂಥ ದತ್ತಾಂಶ ಸಂಚಯವನ್ನು ಸ್ಥಳೀಯ ನೋಂದಣಿ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಗಳು ನಿರ್ವಹಿಸುತ್ತಿದ್ದವು. ಆದರೆ ಇದೀಗ ಕೇಂದ್ರ ಸರ್ಕಾರವೇ ದೇಶಾದ್ಯಂತ ಈ ಹೊಣೆಗಾರಿಕೆಯನ್ನು ವಹಿಸಿಕೊಳ್ಳಲು ಮುಂದಾಗಿದೆ.

ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವಂತೆ ಯಾರನ್ನೂ ಒತ್ತಾಯಿಸುವಂತಿಲ್ಲ. ಅದು ನಾಗರಿಕರು ಸ್ವಯಂ ಪ್ರೇರಿತವಾಗಿ ತೆಗೆದುಕೊಳ್ಳಬೇಕಿರು ನಿರ್ಧಾರ ಎಂದು ಸದ್ಯಕ್ಕೆ ಹೇಳಲಾಗಿದೆ. ಚುನಾವಣಾ ಆಯೋಗವು ಸೂಚಿಸಿರುವ ಮತಗಟ್ಟೆ ಅಧಿಕಾರಿಗಳು ಮನೆಮನೆಗಳಿಗೆ ತೆರಳಿ ಆಧಾರ್ ಕಾರ್ಡ್ ಮತ್ತು ಚುನಾವಣಾ ಗುರುತು ಚೀಟಿಯ ಸಂಖ್ಯೆಯನ್ನು ಪರಸ್ಪರ ಬೆಸೆಯುತ್ತಿದ್ದಾರೆ. ಈ ಹಿಂದೆ ಚುನಾವಣಾ ಆಯೋಗವು ಈ ಸಂಬಂಧ ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ತರಲು ಶಿಫಾರಸು ಮಾಡಿದ್ದಾಗ ಸಂಸತ್ತಿನಲ್ಲಿ ತೀವ್ರ ವಿರೋಧ ಎದುರಿಸಿತ್ತು. ಆದರೆ ಇದೀಗ ಹಿಂಬಾಗಿಲ ಮೂಲಕ ಇಂಥದ್ದೇ ಪ್ರಯತ್ನಗಳು ಆರಂಭವಾಗಿವೆ ಎಂದು ಹಲವು ಹೇಳುತ್ತಿದ್ದಾರೆ.

ಕೇಂದ್ರ ಸರ್ಕಾರವು ಆರಂಭಿಸಲಿರುವ ಹೊಸ ದತ್ತಾಂಶ ಸಂಚಯವನ್ನು ಜನಸಂಖ್ಯಾ ರಿಜಿಸ್ಟರ್, ಮತದಾರರ ಪಟ್ಟಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಪಾಸ್​ಪೋರ್ಟ್​ ಮತ್ತು ಡ್ರೈವಿಂಗ್ ಲೈಸೆನ್ಸ್​ನೊಂದಿಗೆ ಸಂಯೋಜಿಸಬೇಕೆಂದು ಸರ್ಕಾರವು ಬಯಸಿದೆ. ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವ ಹೊಂದಿರುವ ಸಚಿವ ಸಂಪುಟದ ಟಿಪ್ಪಣಿಯ ಹಿಂದೆಯೇ ಇಂಥದ್ದೇ ಆಶಯ ಇರುವುದನ್ನು ಅಲ್ಲಗಳೆಯಲು ಆಗುವುದಿಲ್ಲ.

ಮುಂದಿನ ದಿನಗಳಲ್ಲಿ ಪೌರತ್ವ ದತ್ತಾಂಶವನ್ನು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಕಚೇರಿಯೇ ನಿರ್ವಹಿಸುತ್ತದೆ. ರಾಜ್ಯಗಳ ಮುಖ್ಯ ರಿಜಿಸ್ಟ್ರಾರ್​ಗಳು ಈ ಕಚೇರಿಗೆ ನೆರವಾಗುತ್ತಾರೆ. ಆಧಾರ್, ಪಡಿತರ ಚೀಟಿಗಳು, ಮತದಾರರ ಪಟ್ಟಿ, ಪಾಸ್​ಪೋರ್ಟ್​ ಮತ್ತು ಡ್ರೈವಿಂಗ್ ಲೈಸೆನ್ಸ್​ ನೀಡುವ ಹೊಣೆಗಾರಿಕೆ ಹೊಂದಿರುವ ವಿವಿಧ ಏಜೆನ್ಸಿಗಳೊಂದಿಗೆ ಈ ಸಂಸ್ಥೆಯು ನಿಯಮಿತವಾಗಿ ಕೆಲಸ ಮಾಡಲಿದೆ.

ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ಸಂಯೋಜಿಸುವ ಮತ್ತು ನವೀಕರಿಸುವ ಮೂಲಕ ಸರ್ಕಾರವು ಕಾನೂನುಬಾಹಿರವೆಂದು ಪರಿಗಣಿಸುವ ವಲಸಿಗರನ್ನು ದೇಶದಿಂದ ಹೊರಹಾಕಲು ಸರ್ಕಾರವು ಚಿಂತನೆ ನಡೆಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಹಿಂದೆ ಸೂಚಿಸಿದ್ದಂತೆ ರಾಷ್ಟ್ರವ್ಯಾಪಿ ರಾಷ್ಟ್ರೀಯ ಪೌರತ್ವ ನೋಂದಣಿ (National Register of Citizens – NRC) ಆರಂಭಿಸುವ ಪ್ರಕ್ರಿಯೆಯನ್ನು ಜಾರಿಗೆ ತರಲು ಸರ್ಕಾರವು ಮುಂದಿನ ದಿನಗಳಲ್ಲಿ ಮುಂದಾಗಲಿದೆ ಎಂದು ಸಂಪುಟ ಸಭೆಯ ಟಿಪ್ಪಣಿಯು ಹೇಳಿದೆ. ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯ (Citizenship Amendment Act – CAA) ಅನುಷ್ಠಾನಕ್ಕಾಗಿ ಅಸ್ಸಾಂಗಾಗಿ ಮೊದಲ ಬಾರಿಗೆ ಎನ್​ಆರ್​ಸಿ ಘೋಷಿಸಲಾಗಿತ್ತು. ನಂತರದ ದಿನಗಳಲ್ಲಿ ಇದನ್ನು ದೇಶವ್ಯಾಪಿ ವಿಸ್ತರಿಸಲಾಗುವುದು ಎಂಬ ಚರ್ಚೆಯು ಭಾರೀ ಚರ್ಚೆ, ಪ್ರತಿಭಟನೆಗಳನ್ನು ಹುಟ್ಟುಹಾಕಿತ್ತು.

ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ 2015ಕ್ಕಿಂತಲೂ ಮೊದಲು ನೆರೆಯ ದೇಶಗಳಿಂದ ಬಂದಿರುವ ಮುಸ್ಲಿಮೇತರ ನಿರಾಶ್ರಿತರಿಗೆ ಪೌರತ್ವ ಸಿಗಲಿದೆ. ಆದರೆ ಇದಕ್ಕೆ ಪೂರಕವಾಗಿ ರಾಷ್ಟ್ರೀಯ ಜಾರಿಗೆ ತರಲು ಉದ್ದೇಶಿಸಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆಯಿಂದ ಅಲ್ಪಸಂಖ್ಯಾತ ಸಮುದಾಯವು ಹೆಚ್ಚಿನ ಕಿರುಕುಳ ಅನುಭವಿಸಬೇಕಾಗಬಹುದು ಎಂಬುದು ಕೇಂದ್ರ ನಡೆಯನ್ನು ವಿರೋಧಿಸುತ್ತಿರುವವರ ವಾದವಾಗಿದೆ.

ಸಚಿವ ಸಂಪುಟದಲ್ಲಿ ಈ ಪ್ರಸ್ತಾವಕ್ಕೆ ಶೀಘ್ರ ಅನುಮೋದನೆ ದೊರೆಯುವ ಸಾಧ್ಯತೆಯಿದ್ದು, ಸಂಸತ್ತಿನ ಮುಂದಿನ ಅಧಿವೇಶನದಲ್ಲಿ ತಿದ್ದುಪಡಿ ಮಸೂದೆ ಮಂಡನೆಯಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಸರ್ಕಾರದ ಉನ್ನತ ಮೂಲಗಳನ್ನು ಉಲ್ಲೇಖಿಸಿ ‘ಎನ್​ಡಿಟಿವಿ’ ಜಾಲತಾಣ ವರದಿ ಮಾಡಿದೆ.

Published On - 7:48 am, Fri, 14 October 22

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್