ಒಮಿಕ್ರಾನ್ ಸೋಂಕು: ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರಿಗೆ ಡಿ 1ರಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಪ್ರಯಾಣ ಆರಂಭಿಸುವ ಮುನ್ನ ಏರ್ ಸುವಿಧಾ ಪೋರ್ಟಲ್‌ನಲ್ಲಿ ನೆಗೆಟಿವ್ ರಿಪೋರ್ಟ್‌ ಅಪ್‌ಲೋಡ್ ಮಾಡಬೇಕು ಎಂದು ಭಾರತ ಸರ್ಕಾರ ಸೂಚಿಸಿದೆ.

ಒಮಿಕ್ರಾನ್ ಸೋಂಕು: ಹೈರಿಸ್ಕ್ ದೇಶಗಳಿಂದ ಬರುವ ಪ್ರಯಾಣಿಕರಿಗೆ ಡಿ 1ರಿಂದ ಹೊಸ ಮಾರ್ಗಸೂಚಿ ಬಿಡುಗಡೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Nov 28, 2021 | 11:13 PM

ದೆಹಲಿ: ಕೆಲ ದೇಶಗಳಲ್ಲಿ ಹೊಸ ತಳಿಯ ಒಮಿಕ್ರಾನ್ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಹೈರಿಸ್ಕ್‌ ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗಾಗಿ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಗಳು ಡಿ 1ರಿಂದ ಜಾರಿಗೆ ಬರಲಿವೆ. ವಿದೇಶಗಳಿಂದ ಬರುವ ಪ್ರಯಾಣಿಕರು 14 ದಿನಗಳ ಪ್ರಯಾಣದ ವಿವರ ಕಡ್ಡಾಯವಾಗಿ ಸಲ್ಲಿಸಬೇಕು. ಪ್ರಯಾಣ ಆರಂಭಿಸುವ ಮುನ್ನ ಏರ್ ಸುವಿಧಾ ಪೋರ್ಟಲ್‌ನಲ್ಲಿ ನೆಗೆಟಿವ್ ರಿಪೋರ್ಟ್‌ ಅಪ್‌ಲೋಡ್ ಮಾಡಬೇಕು. ವಿಮಾನ ನಿಲ್ದಾಣಗಳಲ್ಲಿಯೂ ಕೊವಿಡ್ ಟೆಸ್ಟ್‌ ಮಾಡಿಸಬೇಕು. ನೆಗೆಟಿವ್ ರಿಪೋರ್ಟ್​ ಬಂದರೆ 7 ದಿನಗಳ ಕಾಲ ಹೋಂ ಕ್ವಾರಂಟೈನ್‌ ಇರಬೇಕು. 8ನೇ ದಿನದಂದು ಮತ್ತೆ ಕೊವಿಡ್ ಟೆಸ್ಟ್‌ ಮಾಡಿಸಬೇಕು. 2ನೇ ಟೆಸ್ಟ್‌ನಲ್ಲಿ ನೆಗೆಟಿವ್ ಬಂದರೂ 7 ದಿನಗಳವರೆಗೆ ಸ್ವಯಂ ನಿಗಾವಣೆಯಲ್ಲಿರುಬೇಕು ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚನೆ ಕರ್ನಾಟಕದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ ಹೆಚ್ಚಾಗಿದೆ. ಮೈಸೂರು ಜಿಲ್ಲೆಯ ಗಡಿ ಚೆಕ್​ಪೋಸ್ಟ್​ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ.ಸೋಮಶೇಖರ್​ ಸೂಚನೆ ನೀಡಿದ್ದಾರೆ. ಹೊರ ರಾಜ್ಯಗಳಿಂದ ಬರುವವರಿಗೆ ಚೆಕ್​ಪೋಸ್ಟ್​ಗಳಲ್ಲಿ ತಪಾಸಣೆಗೆ ಒಳಪಡಿಸಬೇಕು. ಅಂಥವರು ಕಡ್ಡಾಯವಾಗಿ ಆರ್​ಟಿಪಿಸಿಆರ್ ನೆಗೆಟಿವ್​ ರಿಪೋರ್ಟ್​ ಹೊಂದಿರಬೇಕು. ಚೆಕ್​ಪೋಸ್ಟ್​ಗಳು ದಿನದ 24 ಗಂಟೆಯೂ ಕೆಲಸ ಮಾಡಬೇಕು. ಚೆಕ್​ಪೋಸ್ಟ್​ಗಳಿಗೆ ಜಿಲ್ಲಾಧಿಕಾರಿ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು. ಸರ್ಕಾರಿ ಕಚೇರಿ, ಸಾರ್ವಜನಿಕ ಸ್ಥಳದಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಹಾಕಿಸಿಕೊಂಡಿರಬೇಕು. ಕೇರಳದಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸಬೇಕು. ಪ್ರವಾಸಿ ಸ್ಥಳಗಳಲ್ಲಿ ಸಾಕಷ್ಟು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಿದ್ದಾರೆ.

15 ದಿನಗಳ ಹಿಂದೆ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಆರ್​ಟಿಪಿಸಿಆರ್​ ಟೆಸ್ಟ್ ಮಾಡಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಕೊವಿಡ್ ನೆಗೆಟಿವ್​ ರಿಪೋರ್ಟ್​ ಬಂದ ನಂತರ 7 ದಿನಕ್ಕೊಮ್ಮೆ ಹಾಸ್ಟೆಲ್​ಗಳಲ್ಲಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮೈಸೂರು ಜಿಲ್ಲಾಡಳಿತಕ್ಕೆ ಸಚಿವ ಸೋಮಶೇಖರ್​ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಕೊರೊನಾ ರೂಪಾಂತರಿ ಒಮಿಕ್ರಾನ್ ಆತಂಕ; ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್​ನಲ್ಲಿ ಹೈ ಅಲರ್ಟ್ ಇದನ್ನೂ ಓದಿ: ಒಮಿಕ್ರಾನ್ ವೈರಸ್ ಪತ್ತೆ: 3 ದೇಶಗಳಿಂದ ಕರ್ನಾಟಕಕ್ಕೆ ಬರುವವರಿಗೆ RTPCR ಪರೀಕ್ಷೆ ಕಡ್ಡಾಯ; ಟೆಸ್ಟಿಂಗ್ ಹೆಚ್ಚಿಸಲು ಸರ್ಕಾರ ಆದೇಶ

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್