ಸಾಮಾಜಿಕ ಮಾಧ್ಯಮ ನಿಯಂತ್ರಣಕ್ಕೆ ಸರ್ಕಾರದ ಆಲೋಚನೆ; ಬಿಜೆಪಿ ನಾಯಕ ರಾಮ್ ಮಾಧವ್
ಸಾಮಾಜಿಕ ಮಾಧ್ಯಮಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ಬೇರುಗಳನ್ನು ಅಲ್ಲಾಡಿಸುವಷ್ಟು ಶಕ್ತಿಶಾಲಿಯಾಗಿವೆ. ಅವು ಸೃಷ್ಟಿಸುವ ಹೊಸ ಸಮಸ್ಯೆಗಳಿಗೆ ಹೊಸ ಕಾನೂನುಗಳ ಅಗತ್ಯವಿದೆ ಎಂದು ಬಿಜೆಪಿಯ ಹಿರಿಯ ನಾಯಕ ರಾಮ್ ಮಾಧವ್ ತಿಳಿಸಿದ್ದಾರೆ.
ದೆಹಲಿ: ಸಾಮಾಜಿಕ ಮಾಧ್ಯಮಗಳು ದೇಶದಲ್ಲಿ ಅರಾಜಕತೆಯನ್ನು ಸೃಷ್ಟಿಸುವಷ್ಟು ಪ್ರಬಲವಾಗಿ ಬೆಳೆದಿದ್ದು, ಅವುಗಳನ್ನು ನಿಯಂತ್ರಿಸಿ ಸಾಂವಿಧಾನಿಕ ಚೌಕಟ್ಟಿನಡಿ ಕಾರ್ಯನಿರ್ವಹಿಸುವ ವ್ಯವಸ್ಥೆ ರೂಪಿಸುವತ್ತ ಕೇಂದ್ರ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಬಿಜೆಪಿಯ ಹಿರಿಯ ನಾಯಕ ರಾಮ್ ಮಾಧವ್ (Ram Madhav) ಹೇಳಿದ್ದಾರೆ.
ಅವರ ‘ಬಿಕಾಸ್ ಇಂಡಿಯಾ ಕಮ್ಸ್ ಫಸ್ಟ್’ (Because India Comes First) ಕೃತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಆಧುನಿಕ ಜಗತ್ತಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಸಾಮಾಜಿಕ ಜಾಲತಾಣಗಳು ದೇಶದ ಬಹುದೊಡ್ಡ ಸಮೂಹವನ್ನು ನಿಯಂತ್ರಿಸುತ್ತಿವೆ. ಸಾಮಾಜಿಕ ಜಾಲತಾಣಗಳ್ನು ನಿಯಂತ್ರಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಕಷ್ಟ ಅನುಭವಿಸಬೇಕಾಗಿದ್ದು, ಸರ್ಕಾರ ಸಾಮಾಜಿಕ ಮಾಧ್ಯಮಗಳನ್ನು ನಿಯಂತ್ರಿಸುವತ್ತ ಚಿತ್ತ ಹರಿಸಿದೆ ಎಂದು ಅವರು ತಿಳಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳು ದೇಶದಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದ ಅವರು, ಸಾಮಾಜಿಕ ಮಾಧ್ಯಮಗಳು ಪ್ರಜಾಪ್ರಭುತ್ವ ವ್ಯವಸ್ಥೆಯ ಬೇರುಗಳನ್ನು ಅಲ್ಲಾಡಿಸುವಷ್ಟು ಶಕ್ತಿಶಾಲಿಯಾಗಿವೆ. ಅವುಗಳು ಸರ್ಕಾರದ ಎದುರು ಸೃಷ್ಟಿಸಿದ ಸವಾಲುಗಳನ್ನು ಸಾಂವಿಧಾನಿಕವಾಗಿಯೇ ಎದುರಿಸಬೇಕಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ ಎಂದು ಸುಳುಹು ನಿಡಿದರು.
ಇಂದು ಸೃಷ್ಟಿಯಾಗಿರುವ ಹೊಸ ಸವಾಲುಗಳನ್ನು ಎದುರಿಸಲು ಪ್ರಸ್ತುತ ಜಾರಿಯಲ್ಲಿರುವ ಕಾನೂನುಗಳಿಂದ ಸಾಧ್ಯವಿಲ್ಲ. ಹೀಗಾಗಿ ಹೊಸ ಸಮಸ್ಯೆಗಳಿಗೆ ಹೊಸ ಕಾನೂನುಗಳ ಅಗತ್ಯವಿದೆ ಎಂದು ಹೇಳಿದರು.
ಇದನ್ನೂ ಓದಿ: ಕೇರಳ: ಸಾಮಾಜಿಕ ಮಾಧ್ಯಮ ನಿರ್ಬಂಧ ಸುಗ್ರೀವಾಜ್ಞೆಗೆ ತಾತ್ಕಾಲಿಕ ತಡೆ
ಹೊಸ ಪುಸ್ತಕ Middle Class, Media and Modi | ಮಧ್ಯಮ ವರ್ಗ, ಮಾಧ್ಯಮವನ್ನು ಮೋದಿ ಆವರಿಸಿಕೊಂಡ ಪರಿಯಿದು
Published On - 6:18 pm, Sun, 21 February 21