AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಈ ಜನಾದೇಶ ಹೊಸ ಬಲ ತುಂಬಿದೆ’; ಬಂಗಾಳ, ಅಸ್ಸಾಂ ಉಪಚುನಾವಣೆಯ ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಧನ್ಯವಾದ

ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ನಡೆದ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಗೆದ್ದ ಬಿಜೆಪಿ ಅಭ್ಯರ್ಥಿಗಳನ್ನು ಅಭಿನಂದಿಸಿದ್ದಾರೆ. ಇಂದು (ಶುಕ್ರವಾರ) ಮತ ಎಣಿಕೆ ಮುಕ್ತಾಯಗೊಂಡ ನಂತರ ಫಲಿತಾಂಶಗಳನ್ನು ಪ್ರಕಟಿಸಲಾಯಿತು. ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಬೆಂಬಲ ನೀಡಿದ ಮತದಾರರಿಗೆ ಧನ್ಯವಾದ ತಿಳಿಸಿದ್ದು, ಈ ಫಲಿತಾಂಶಗಳು ಬಿಜೆಪಿ-ಎನ್‌ಡಿಎ ಸರ್ಕಾರದ ಆಡಳಿತದ ಮೇಲಿರುವ ಸಾರ್ವಜನಿಕರ ವಿಶ್ವಾಸವನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದ್ದಾರೆ.

‘ಈ ಜನಾದೇಶ ಹೊಸ ಬಲ ತುಂಬಿದೆ’; ಬಂಗಾಳ, ಅಸ್ಸಾಂ ಉಪಚುನಾವಣೆಯ ಬಿಜೆಪಿ ಗೆಲುವಿಗೆ ಪ್ರಧಾನಿ ಮೋದಿ ಧನ್ಯವಾದ
ಪಶ್ಚಿಮ ಬಂಗಾಳದ ಸಿಎಂ ಸುವೇಂದು ಅಧಿಕಾರಿ ಜೊತೆ ಪ್ರಧಾನಿ ಮೋದಿImage Credit source: PTI
ಸುಷ್ಮಾ ಚಕ್ರೆ
|

Updated on: Oct 09, 2026 | 7:25 PM

Share

ನವದೆಹಲಿ, ಅಕ್ಟೋಬರ್ 9: ಲೋಕಸಭೆ ಮತ್ತು ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಸಾಧಿಸಿದ ಭರ್ಜರಿ ಗೆಲುವಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಶುಕ್ರವಾರ) ಮತದಾರರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರ ಹಾಗೂ ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಫಲಿತಾಂಶಗಳು ಜನರು ಬಿಜೆಪಿ- ಎನ್‌ಡಿಎ ಸರ್ಕಾರದ ಉತ್ತಮ ಆಡಳಿತದೊಂದಿಗೆ ದೀರ್ಘವಾದ ಸಂಪರ್ಕ ಹೊಂದಿದ್ದಾರೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿವೆ ಎಂದು ಅವರು ಹೇಳಿದ್ದಾರೆ.

“ಜನರ ನಿರಂತರ ಆಶೀರ್ವಾದಕ್ಕೆ ನನ್ನ ಕೃತಜ್ಞತೆಗಳು! ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರ ಹಾಗೂ ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಫಲಿತಾಂಶಗಳು ಜನರು ಬಿಜೆಪಿ-ಎನ್‌ಡಿಎ ಮೈತ್ರಿಕೂಟದ ಉತ್ತಮ ಆಡಳಿತದೊಂದಿಗೆ ದೀರ್ಘವಾದ ಸಂಪರ್ಕವನ್ನು ಹೊಂದಿದ್ದಾರೆ ಎಂಬುದನ್ನು ಮತ್ತೊಮ್ಮೆ ತೋರಿಸುತ್ತವೆ. ವಿಜೇತ ಬಿಜೆಪಿ ಅಭ್ಯರ್ಥಿಗಳನ್ನು ನಾನು ಅಭಿನಂದಿಸುತ್ತೇನೆ ಮತ್ತು ನಮ್ಮ ಪಕ್ಷದ ಕಾರ್ಯಕರ್ತರ ಶ್ರಮವನ್ನು ಶ್ಲಾಘಿಸುತ್ತೇನೆ. ಪುದುಚೇರಿಯ ತಟ್ಟಂಚಾವಡಿಯಲ್ಲಿ ಗೆಲುವು ಸಾಧಿಸಿದ ನಮ್ಮ ಮೌಲ್ಯಯುತ ಎನ್‌ಡಿಎ ಪಾಲುದಾರ ಪಕ್ಷವಾದ ಎಐಎನ್‌ಆರ್‌ಸಿ ಅನ್ನು ಕೂಡ ನಾನು ಅಭಿನಂದಿಸುತ್ತೇನೆ. ಜನರ ಕಲ್ಯಾಣಕ್ಕಾಗಿ ಮತ್ತು ಉಜ್ವಲ ಹಾಗೂ ಸಮೃದ್ಧ ಭವಿಷ್ಯಕ್ಕಾಗಿ ಅವರ ಆಕಾಂಕ್ಷೆಗಳನ್ನು ಈಡೇರಿಸಲು ನಾವು ನಿರಂತರವಾಗಿ ಶ್ರಮಿಸುತ್ತಿದ್ದು, ಈ ಜನಾದೇಶವು ನಮಗೆ ಹೆಚ್ಚಿನ ಬಲವನ್ನು ನೀಡುತ್ತದೆ” ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ನಂದಿಗ್ರಾಮ ಉಪಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ಐತಿಹಾಸಿಕ ಜಯ; ಫಲಿಸದ ಕಾಂಗ್ರೆಸ್-ಟಿಎಂಸಿ ತಂತ್ರಗಾರಿಕೆ

ರೇಜಿನಗರ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ:

ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ರೇಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಬಿಜೆಪಿ 75,816 ಮತಗಳ ಅಂತರದಿಂದ ಜಯ ಗಳಿಸುವ ಮೂಲಕ ಮುಸ್ಲಿಂ ಪ್ರಾಬಲ್ಯದ ಕ್ಷೇತ್ರದಲ್ಲಿ ಐತಿಹಾಸಿಕ ಸಾಧನೆ ಮಾಡಿದೆ. ಚುನಾವಣಾ ಆಯೋಗ ಪ್ರಕಟಿಸಿದ ಫಲಿತಾಂಶಗಳ ಪ್ರಕಾರ, ಬಿಜೆಪಿ ಅಭ್ಯರ್ಥಿ ಶಂಖರವ್ ಸರ್ಕಾರ್ ಅವರು 1,29,914 ಮತಗಳನ್ನು ಪಡೆದು, ತಮ್ಮ ಹತ್ತಿರದ ಎದುರಾಳಿ ಆಮ್ ಜನತಾ ಉನ್ನಯನ್ ಪಾರ್ಟಿಯ (AJUP) ಅಭ್ಯರ್ಥಿ ಗೋಲಂ ನಬಿ ಆಜಾದ್ ಅವರನ್ನು ಸೋಲಿಸಿದ್ದಾರೆ. ಬಿಜೆಪಿಯು ಶೇ. 63.14 ಮತಗಳನ್ನು ಪಡೆದುಕೊಂಡರೆ, ಆಜಾದ್ ಅವರು ಶೇ. 26.29 ಮತಗಳನ್ನು ಗಳಿಸಿದರು.

ಇದನ್ನೂ ಓದಿ: ಉಪಚುನಾವಣೆ ಫಲಿತಾಂಶ: ಬಂಗಾಳ ಹಾಗೂ ಅಸ್ಸಾಂನಲ್ಲಿ ಬಿಜೆಪಿ, ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮುನ್ನಡೆ

ನಂದಿಗ್ರಾಮ ಉಪಚುನಾವಣೆಯಲ್ಲಿ ಬಿಜೆಪಿ ಕ್ಲೀನ್ ಸ್ವೀಪ್:

ಈ ವಾರದ ಆರಂಭದಲ್ಲಿ ಉಪಚುನಾವಣೆ ನಡೆದ ನಂದಿಗ್ರಾಮ ಕ್ಷೇತ್ರವನ್ನು ಉಳಿಸಿಕೊಳ್ಳುವಲ್ಲಿ ಬಿಜೆಪಿ ಭಾರಿ ವಿಜಯ ದಾಖಲಿಸಿದೆ. ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಮಾಜಿ ಸಹಾಯಕ ಚಂದ್ರನಾಥ್ ರಥ್ ಅವರ ತಾಯಿಯಾದ ಬಿಜೆಪಿಯ ಹಾಸಿ ರಾಣಿ ರಥ್ ಅವರು ತಮ್ಮ ಹತ್ತಿರದ ಎದುರಾಳಿ ಕಾಂಗ್ರೆಸ್ ನಾಯಕ ಮಿಲನ್ ಪ್ರಧಾನ್ ಅವರನ್ನು 1,22,753 ಮತಗಳ ಅಂತರದಿಂದ ಸೋಲಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ನೇಮಕಾತಿ ಹಗರಣದಲ್ಲಿ ತೇಲಿಬಂದ ದುಗ್ಗಪ್ಪ ಯಾರು?
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!