ಗ್ರೇಟರ್ ನೋಯ್ಡಾದಲ್ಲಿ ಒಂದೇ ಕುಟುಂಬದ 5 ಮಂದಿ ನಿಗೂಢ ಸಾವು: ಎಲ್ಲರೂ ಕೊನೆಯದಾಗಿ ಸೇವಿಸಿದ್ದು ನೂಡಲ್ಸ್!

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಒಂದೇ ಕುಟುಂಬದ ಐವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಕುಟುಂಬವು ಕೊನೆಯದಾಗಿ ಚಹಾ ಮತ್ತು ನೂಡಲ್ಸ್ ಸೇವಿಸಿ ಮಲಗಿತ್ತು ಎನ್ನಲಾಗಿದ್ದು, ವಿಷಾಹಾರದ ಶಂಕೆ ವ್ಯಕ್ತವಾಗಿದೆ. ಪೊಲೀಸರು ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿದ್ದು, ಸಾವಿನ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ಬಳಿಕ ತಿಳಿಯಬೇಕಿದೆ.

ಗ್ರೇಟರ್ ನೋಯ್ಡಾದಲ್ಲಿ ಒಂದೇ ಕುಟುಂಬದ 5 ಮಂದಿ ನಿಗೂಢ ಸಾವು: ಎಲ್ಲರೂ ಕೊನೆಯದಾಗಿ ಸೇವಿಸಿದ್ದು ನೂಡಲ್ಸ್!
ಸಾಂದರ್ಭಿಕ ಚಿತ್ರ
Image Credit source: TV9 Network

Updated on: Oct 17, 2026 | 11:14 AM

ಮುಖ್ಯಾಂಶಗಳು

  • ಗ್ರೇಟರ್ ನೋಯ್ಡಾದಲ್ಲಿ ಒಂದೇ ಕುಟುಂಬದ ಐವರ ನಿಗೂಢ ಸಾವು
  • ಕೊನೆಯದಾಗಿ ಚಹಾ ಮತ್ತು ನೂಡಲ್ಸ್ ಸೇವಿಸಿದ್ದ ಕುಟುಂಬ
  • ಆಹಾರ ವಿಷಪ್ರಾಶನ ಶಂಕೆ

ನವದೆಹಲಿ, ಅಕ್ಟೋಬರ್ 17: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ರಬೂಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ಕುಟುಂಬದ ಐವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಮೃತರಲ್ಲಿ 38 ವರ್ಷದ ಮಹೇಶ್, ಅವರ 36 ವರ್ಷದ ಪತ್ನಿ ಲಲಿತಾ ಹಾಗೂ ಮೂವರು ಮಕ್ಕಳು ಸೇರಿದ್ದಾರೆ. ಕುಟುಂಬದ ಸಾವಿಗೆ ವಿಷಾಹಾರ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆಯಾದರೂ, ಸಾವಿನ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ.

ಮಲಗಿದ್ದಲ್ಲೇ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಕುಟುಂಬದ ಸದಸ್ಯರು ರಾತ್ರಿ ನೂಡಲ್ಸ್ ಸೇವಿಸಿ ಮಲಗಿದ್ದರು. ಶನಿವಾರ ಬೆಳಗ್ಗೆ ಮನೆಯಲ್ಲಿ ಯಾವುದೇ ಚಟುವಟಿಕೆ ಕಾಣಿಸದಿದ್ದಾಗ ನೆರೆಹೊರೆಯವರಿಗೆ ಅನುಮಾನ ಬಂದಿದೆ. ಮನೆಯೊಳಗೆ ಹೋಗಿ ನೋಡಿದಾಗ ಐವರೂ ಹಾಸಿಗೆಯ ಮೇಲೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರನ್ನು ಎಬ್ಬಿಸಲು ಪ್ರಯತ್ನಿಸಿದರೂ ಯಾವುದೇ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಆಹಾರ ಪದಾರ್ಥಗಳ ಮಾದರಿ ಸಂಗ್ರಹ

ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ವಿಧಿವಿಜ್ಞಾನ ತಜ್ಞರ ತಂಡ ಪರಿಶೀಲನೆ ನಡೆಸಿದೆ. ಅಡುಗೆಮನೆಯಲ್ಲಿದ್ದ ಚಹಾ ಪಾತ್ರೆಗಳು, ನೂಡಲ್ಸ್ ಹಾಗೂ ಇತರ ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ಕಳುಹಿಸಲು ಕ್ರಮ ಕೈಗೊಳ್ಳಲಾಗಿದೆ. ಐವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ: ಲವರ್ ಜೊತೆ ಸೇರಿ ಗಂಡನನ್ನು ಕೊಂದು, ಹಾವು ಕಚ್ಚಿತೆಂದ ಮಹಿಳೆಗೆ ಗಲ್ಲು ಶಿಕ್ಷೆ; ಆ ಒಂದು ತಪ್ಪಿಂದ ಬಯಲಾಯ್ತು ರಹಸ್ಯ

ಕುಟುಂಬವು ಕೊನೆಯದಾಗಿ ಚಹಾ ಮತ್ತು ನೂಡಲ್ಸ್ ಸೇವಿಸಿತ್ತು ಎನ್ನಲಾಗಿದ್ದರೂ, ಅವುಗಳ ಸೇವನೆಯೇ ಸಾವಿಗೆ ಕಾರಣ ಎಂಬುದು ಇನ್ನೂ ದೃಢಪಟ್ಟಿಲ್ಲ. ಆಹಾರ ವಿಷಪ್ರಾಶನ ಸೇರಿದಂತೆ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕವೇ ಸಾವಿನ ನಿಖರ ಕಾರಣ ತಿಳಿಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us