ಕೊರೊನಾದಿಂದ ಗುಣಮುಖನಾದ ವ್ಯಕ್ತಿಯಲ್ಲಿ ಹಸಿರು ಫಂಗಸ್ ಪತ್ತೆ.. ಶುರುವಾಗಿದೆ ಬಣ್ಣ ಬಣ್ಣದ ಫಂಗಸ್ಗಳ ಹಾವಳಿ
34 ವರ್ಷದ ವ್ಯಕ್ತಿಯಲ್ಲಿ ಗ್ರೀನ್ ಫಂಗಸ್ ಪತ್ತೆಯಾಗಿದ್ದು ಆ ವ್ಯಕ್ತಿಯನ್ನು ಇಂದೋರ್‌ನಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ಏರ್‌ಲಿಫ್ಟ್ ಮೂಲಕ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊವಿಡ್‌ನಿಂದ ಗುಣಮುಖರಾದ ಬಳಿಕ ಗ್ರೀನ್ ಫಂಗಸ್ ಪತ್ತೆಯಾಗಿದೆ.
ಇಂದೋರ್: ಮಹಾಮಾರಿ ಕೊರೊನಾ ಸಂಕಷ್ಟದ ನಡುವೆ ದೇಶದಲ್ಲಿ ಬಣ್ಣ ಬಣ್ಣದ ಫಂಗಸ್ಗಳು ಕಾಡತೊಡಗಿವೆ. ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್, ಯೆಲ್ಲೋ ಫಂಗಸ್ ಆಯ್ತು ಇದೀಗ ಗ್ರೀನ್ ಫಂಗಸ್ ಪತ್ತೆಯಾಗಿದೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಗ್ರೀನ್ ಫಂಗಸ್ ಪತ್ತೆಯಾಗಿದ್ದು ಆತಂಕ ಹೆಚ್ಚು ಮಾಡಿದೆ.
34 ವರ್ಷದ ವ್ಯಕ್ತಿಯಲ್ಲಿ ಗ್ರೀನ್ ಫಂಗಸ್ ಪತ್ತೆಯಾಗಿದ್ದು ಆ ವ್ಯಕ್ತಿಯನ್ನು ಇಂದೋರ್‌ನಿಂದ ಮುಂಬೈನ ಹಿಂದೂಜಾ ಆಸ್ಪತ್ರೆಗೆ ಏರ್‌ಲಿಫ್ಟ್ ಮೂಲಕ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊವಿಡ್‌ನಿಂದ ಗುಣಮುಖರಾದ ಬಳಿಕ ಗ್ರೀನ್ ಫಂಗಸ್ ಪತ್ತೆಯಾಗಿದೆ. ವ್ಯಕ್ತಿಯ ಸೈನಸ್, ಶ್ವಾಸಕೋಶ, ರಕ್ತದಲ್ಲಿ ಫಂಗಸ್ ಪತ್ತೆಯಾಗಿದೆ. ಕೊರೊನಾದಿಂದ ಗುಣಮುಖರಾದ ಬಳಿಕ ವ್ಯಕ್ತಿಗೆ ಜ್ವರ, ಮೂಗಿನಲ್ಲಿ ರಕ್ತಸ್ರಾವ ಲಕ್ಷಣಗಳು ಕಾಣಿಸಿಕೊಂಡಿತ್ತು. ಈಗ ಗ್ರೀನ್ ಫಂಗಸ್ ಪತ್ತೆಯಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ.
ಶ್ರೀ ಅರಬಿಂದೋ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (SAIMS) ವಿಭಾಗದ ಮುಖ್ಯಸ್ಥ ಡಾ.ರವಿ ದೋಸಿ, ಕೊವಿಡ್ -19 ರಿಂದ ಚೇತರಿಸಿಕೊಂಡಿದ್ದ ವ್ಯಕ್ತಿ ಅನುಮಾನದಲ್ಲೇ ಪರೀಕ್ಷೆಗೆ ಒಳಗಾಗಿದ್ದ ಈ ವೇಳೆ ಆತನಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ತಗುಲಿರುವುದು ಪತ್ತೆಯಾಗಿದೆ. ಆದರೆ ಅವನ ಸೈನಸ್, ಶ್ವಾಸಕೋಶ, ರಕ್ತದಲ್ಲಿ ಹಸಿರು ಫಂಗಸ್ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: Coronavirus cases in India: ಕಳೆದ 24 ಗಂಟೆಗಳಲ್ಲಿ 62,224 ಹೊಸ ಕೊವಿಡ್ ಪ್ರಕರಣ, 2542 ಮಂದಿ ಸಾವು