ಪಠಾಣ್‌ಕೋಟ್‌ನ ಸೇನಾ ಶಿಬಿರದ ಬಳಿ ಗ್ರೆನೇಡ್ ದಾಳಿ; ಮುಂದುವರಿದ ತನಿಖೆ

ಪಠಾಣ್‌ಕೋಟ್‌ನ ಸೇನಾ ಶಿಬಿರದ ತ್ರಿವೇಣಿ ಗೇಟ್ ಬಳಿ ಗ್ರೆನೇಡ್ ಸ್ಫೋಟ ಸಂಭವಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಸಿಸಿಟಿವಿಗಳ ದೃಶ್ಯಾವಳಿಗಳನ್ನು ತನಿಖೆ ಮಾಡಲಾಗುತ್ತಿದೆ ಎಂದು ಪಠಾಣ್‌ಕೋಟ್‌ನ ಎಸ್‌ಎಸ್‌ಪಿ ಸುರೇಂದ್ರ ಲಂಬಾ ಹೇಳಿದ್ದಾರೆ.

ಪಠಾಣ್‌ಕೋಟ್‌ನ ಸೇನಾ ಶಿಬಿರದ ಬಳಿ ಗ್ರೆನೇಡ್ ದಾಳಿ; ಮುಂದುವರಿದ ತನಿಖೆ
ಗ್ರೆನೇಡ್ ದಾಳಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Nov 22, 2021 | 10:19 AM

ದೆಹಲಿ: ಪಠಾಣ್‌ಕೋಟ್‌ನ (Pathankot) ಧೀರಪುಲ್ (Dheerapul ಬಳಿಯ ಭಾರತೀಯ ಸೇನೆಯ (Indian Army) ತ್ರಿವೇಣಿ ಗೇಟ್‌ನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ (Grenade Blast) ಸಂಭವಿಸಿದೆ. ಕಂಟೋನ್ಮೆಂಟ್‌ನ ತ್ರಿವೇಣಿ ಗೇಟ್‌ನ (Triveni Gate)ಮುಂದೆ ಕೆಲವು ಅಪರಿಚಿತ ಮೋಟರ್‌ಸೈಕ್ಲಿಸ್ಟ್‌ಗಳು ಗ್ರೆನೇಡ್ ಬಿಸಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನಾ ಸ್ಥಳದಿಂದ ಪಡೆದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸುತ್ತಿರುವುದಾಗಿ ಪೊಲೀಸರು ಹೇಳಿದ್ದಾರೆ.  “ಪಠಾಣ್‌ಕೋಟ್‌ನ ಸೇನಾ ಶಿಬಿರದ ತ್ರಿವೇಣಿ ಗೇಟ್ ಬಳಿ ಗ್ರೆನೇಡ್ ಸ್ಫೋಟ ಸಂಭವಿಸಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಸಿಸಿಟಿವಿಗಳ ದೃಶ್ಯಾವಳಿಗಳನ್ನು ತನಿಖೆ ಮಾಡಲಾಗುತ್ತಿದೆ” ಎಂದು ಪಠಾಣ್‌ಕೋಟ್‌ನ ಎಸ್‌ಎಸ್‌ಪಿ ಸುರೇಂದ್ರ ಲಂಬಾ ಹೇಳಿರುವುದಾಗಿ ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸ್ಫೋಟದ ನಂತರ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ . ಸ್ಥಳದಿಂದ ಸ್ಥಳೀಯ ಪೊಲೀಸ್ ಅಧಿಕಾರಿಗಳು ಗ್ರೆನೇಡ್‌ನ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ. ತನಿಖೆ ನಡೆಯುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಬಹಿರಂಗಪಡಿಸಿಲ್ಲ. ಸ್ಫೋಟದಲ್ಲಿ ಯಾವುದೇ ಗಾಯಗಳಾಗಿರುವ ಬಗ್ಗೆ ವರದಿಯಾಗಿಲ್ಲ.

ಜನವರಿ 2016 ರಲ್ಲಿ, ಭಾರತೀಯ ವಾಯುಪಡೆಯ ಪಠಾಣ್‌ಕೋಟ್ ವಾಯುಪಡೆಯ ನೆಲೆಯ ಮೇಲೆ ಭಾರಿ ಶಸ್ತ್ರಸಜ್ಜಿತ ಭಯೋತ್ಪಾದಕರು ದಾಳಿ ಮಾಡಿದರು, ಇದರಲ್ಲಿ ಭದ್ರತಾ ಪಡೆಗಳ ಮೂವರು ಸಿಬ್ಬಂದಿ ಹುತಾತ್ಮರಾಗಿದ್ದರು.

ಇದನ್ನೂ ಓದಿ: Petrol Price Today: ಇಂದು ಪೆಟ್ರೋಲ್​, ಡೀಸೆಲ್​ ಬೆಲೆ ಎಷ್ಟಿದೆ? ಮಾಹಿತಿ ಇಲ್ಲಿದೆ

ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಕ್ಷಣಾರ್ಧದಲ್ಲಿ ಅತ್ಯಾದ್ಭುತ ಕ್ಯಾಚ್ ಹಿಡಿದ ಮ್ಯಾಕ್ಸ್​ವೆಲ್
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ