AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮದುವೆ ಮಂಟಪದಿಂದ ಓಡಿಹೋದ ವರ, ವಾಟ್ಸಾಪ್‌ಗೆ ಬಂದ ಆ ಒಂದು ಫೋಟೋ ತಂದ ಭಾರಿ ಫಜೀತಿ

ಹರಿಯಾಣದ ಕೈಥಾಲ್‌ನಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಮದುವೆ ಶಾಸ್ತ್ರದ ವೇಳೆ ವರನ ಮೊಬೈಲ್‌ಗೆ ಅಪರಿಚಿತ ನಂಬರ್‌ನಿಂದ ವಧುವಿನ ಹಳೆಯ ಫೋಟೋಗಳು ವಾಟ್ಸಾಪ್ ಮೂಲಕ ಬಂದಿವೆ. ಇದರಿಂದ ಆಘಾತಗೊಂಡ ವರ ಮಂಟಪದಿಂದಲೇ ದಿಢೀರ್ ಓಡಿಹೋಗಿದ್ದಾನೆ. ಈ ಹೈಡ್ರಾಮಾದ ವಿಡಿಯೋ ವೈರಲ್ ಆಗಿದ್ದು, ನೆಟಿಜನ್‌ಗಳು ತರಹೇವಾರಿ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Video: ಮದುವೆ ಮಂಟಪದಿಂದ ಓಡಿಹೋದ ವರ, ವಾಟ್ಸಾಪ್‌ಗೆ ಬಂದ ಆ ಒಂದು ಫೋಟೋ ತಂದ ಭಾರಿ ಫಜೀತಿ
ಮದುವೆ
ನಯನಾ ರಾಜೀವ್
|

Updated on: Jul 08, 2026 | 9:16 AM

Share

ಕೈಥಾಲ್ ,ಜುಲೈ 08: ಮದುವೆ(Marriage) ಶಾಸ್ತ್ರಗಳು ಮುಗಿದು ಇನ್ನೇನು ಹಾರ ಬದಲಾಯಿಸಬೇಕು ಎನ್ನುವಷ್ಟರಲ್ಲಿ ವರನೊಬ್ಬ ಮಂಟಪದಿಂದಲೇ ದಿಢೀರ್ ಓಡಿಹೋಗಿರುವ ವಿಚಿತ್ರ ಘಟನೆ ಹರಿಯಾಣದ ಕೈಥಾಲ್ ಜಿಲ್ಲೆಯಲ್ಲಿ ನಡೆದಿದೆ. ವರನ ಹಿಂದೆಯೇ ವಧು ಮತ್ತು ಆಕೆಯ ಕುಟುಂಬದವರು ಓಡುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ನಡೆದಿದ್ದೇನು? ಮದುವೆ ಸಮಾರಂಭ ಅತ್ಯಂತ ಸಂಭ್ರಮದಿಂದ ನಡೆಯುತ್ತಿತ್ತು. ವಧು-ವರರಿಬ್ಬರೂ ಮಂಟಪದಲ್ಲಿದ್ದರು. ಈ ವೇಳೆ ವರನ ಮೊಬೈಲ್‌ಗೆ ಅಪರಿಚಿತ ನಂಬರ್‌ನಿಂದ ಒಂದು ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ, ನೀನು ಮದುವೆಯಾಗುತ್ತಿರುವ ಹುಡುಗಿ ನನ್ನ ಹಳೆಯ ಗೆಳತಿ ಎಂದು ಹೇಳಿದ್ದಲ್ಲದೆ, ಅದಕ್ಕೆ ಸಾಕ್ಷಿಯಾಗಿ ಕೆಲವು ಫೋಟೋಗಳನ್ನು ವರನ ವಾಟ್ಸಾಪ್‌ಗೆ ಕಳುಹಿಸಿದ್ದಾನೆ.

ಮಂಟಪದಿಂದಲೇ ಕಾಲ್ಕಿತ್ತ ವರ ಮೊಬೈಲ್‌ನಲ್ಲಿ ಆ ಫೋಟೋಗಳನ್ನು ನೋಡುತ್ತಿದ್ದಂತೆ ವರನಿಗೆ ಶಾಕ್ ಆಗಿದೆ. ಆತ ಮರುಕ್ಷಣವೇ ಮದುವೆ ಬೇಡ ಎಂದು ಮಂಟಪದಿಂದ ಹೊರಗೆ ಓಡಲಾರಂಭಿಸಿದ್ದಾನೆ. ಇದನ್ನು ಕಂಡು ಗಾಬರಿಗೊಂಡ ವಧು, ಆಕೆಯ ಪೋಷಕರು ಮತ್ತು ಮದುವೆಗೆ ಬಂದಿದ್ದ ಅತಿಥಿಗಳು ವರನನ್ನು ತಡೆಯಲು ಆತನ ಹಿಂದೆಯೇ ರಸ್ತೆಯಲ್ಲಿ ಓಡಿದ್ದಾರೆ.

ವಿಡಿಯೋ

ಈ ಹೈಡ್ರಾಮಾದ ವಿಡಿಯೋ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದ್ದು, ನೆಟಿಜನ್‌ಗಳು ತರಹೇವಾರಿ ಕಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಸದ್ಯ ಈ ಕುರಿತು ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿದ್ದು, ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ