AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕಿತ್ಸೆಗೆ ಸ್ಪಂದಿಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌: ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ‌ ಕಮಾಂಡ್ ಆಸ್ಪತ್ರೆಗೆ ರವಾನೆ ಸಾಧ್ಯತೆ

Group Captain Varun Singh: ಹೆಚ್ಚಿನ ಚಿಕಿತ್ಸೆಗಾಗಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಬೆಂಗಳೂರಿನ‌ ಆಸ್ಪತ್ರೆಗೆ ರವಾನೆ ಮಾಡುವ ಸಾಧ್ಯತೆಯಿದೆ. ಸದ್ಯಕ್ಕೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ಗೆ ದುರಂತ ನಡೆದಿರುವ ಸ್ಥಳಕ್ಕೆ ಸಮೀಪದಲ್ಲಿರುವ ವೆಲ್ಲಿಂಗ್ಟನ್‌ನ​​ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.

ಚಿಕಿತ್ಸೆಗೆ ಸ್ಪಂದಿಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌: ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ‌ ಕಮಾಂಡ್ ಆಸ್ಪತ್ರೆಗೆ ರವಾನೆ ಸಾಧ್ಯತೆ
ಚಿಕಿತ್ಸೆಗೆ ಸ್ಪಂದಿಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌: ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ‌ ಆಸ್ಪತ್ರೆಗೆ ರವಾನೆ ಸಾಧ್ಯತೆ
TV9 Web
| Edited By: |

Updated on:Dec 09, 2021 | 12:22 PM

Share

ದೆಹಲಿ: ದುರ್ವಿಧಿಯ ಅಟ್ಟಹಾಸದಲ್ಲಿ ದೇಶದ ರಕ್ಷಣಾ ವ್ಯವಸ್ಥೆಯ 13 ಮಂದಿಯನ್ನು ಬಲಿ ತೆಗೆದುಕೊಂಡ ಸೇನಾ ಅಪಘಾತದ ದುರಂತದಲ್ಲಿ (Army helicopter Crash) ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಒಬ್ಬರು (Group Captain Varun Singh) ಮಾತ್ರ ಸುಟ್ಟ ಗಾಯಗಳೊಂದಿಗೆ ಬದುಕುಳಿದಿದ್ದಾರೆ. ಅವರನ್ನು ಹೇಗಾದರೂ ಮಾಡಿ ಜೀವಂತ ಉಳಿಸಿಕೊಳ್ಳಬೇಕೆಂದು ಪಣ ತೊಟ್ಟಿರುವ ವೈದ್ಯರು ಸಕಾಲದಲ್ಲಿ ಸಮರ್ಥ ಚಿಕಿತ್ಸೆ ನೀಡುತ್ತಿದ್ದಾರೆ. ಈ ಮಧ್ಯೆ ಹೆಚ್ಚಿನ ಚಿಕಿತ್ಸೆಗಾಗಿ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಬೆಂಗಳೂರಿನ‌ ಆಸ್ಪತ್ರೆಗೆ ರವಾನೆ ಮಾಡುವ ಸಾಧ್ಯತೆಯಿದೆ. ಸದ್ಯಕ್ಕೆ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ಗೆ ದುರಂತ ನಡೆದಿರುವ ಸ್ಥಳಕ್ಕೆ ಸಮೀಪದಲ್ಲಿರುವ ವೆಲ್ಲಿಂಗ್ಟನ್‌ನ​​ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಪೈಲಟ್ ವರುಣ್ ಅವರು ಶೇ. 45ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್‌ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ‌ಲ್ಲಿರುವ ಏರ್​​ಫೋರ್ಸ್ ಕಮಾಂಡ್ ಆಸ್ಪತ್ರೆಗೆ (Bangalore Air Force Command Hospital ) ಶಿಫ್ಟ್​ ಮಾಡುವ ಬಗ್ಗೆ ಚರ್ಚೆಗಳು ತೀವ್ರವಾಗಿ ನಡೆಯುತ್ತಿವೆ.

ತಮಿಳುನಾಡಿನ ಕೂನೂರಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ 14 ಜನರ ಪೈಕಿ CDS ಬಿಪಿನ್ ರಾವತ್ ಸೇರಿ 13 ಜನ ಮೃತಪಟ್ಟಿದ್ರು. ಮೃತರ ಹೆಸರುಗಳು:

1. ಸಿಡಿಎಸ್ ಬಿಪಿನ್ ರಾವತ್ 2. ಸಿಡಿಎಸ್ ಬಿಪಿನ್ ರಾವತ್ ಪತ್ನಿ ಮಧುಲಿಕಾ ರಾವತ್ 3. ಬ್ರಿಗೇಡಿಯರ್ ಎಲ್.ಎಸ್.ಲಿಡ್ಡರ್ 4. ಲೆಫ್ಟಿನೆಂಟ್ ಕರ್ನಲ್ ಹರ್ಜಿಂದರ್ ಸಿಂಗ್ 5. ವಿಂಗ್ ಕಮಾಂಡರ್ ಪಿ.ಎಸ್.ಚೌಹಾಣ್

6. ಸ್ಕ್ವಾಡ್ರನ್ ಲೀಡರ್ ಕೆ.ಸಿಂಗ್ 7. ಜೂನಿಯರ್ ವಾರಂಟ್ ಆಫೀಸರ್ ದಾಸ್ 8. ಜೂನಿಯರ್ ವಾರಂಟ್ ಆಫೀಸರ್ ಪ್ರದೀಪ್ ಎ. 9. ಹವಾಲ್ದಾರ್ ಸತ್ಪಾಲ್ ರೈ, 10. ನಾಯಕ್ ಗುರುಸೇವಕ್ ಸಿಂಗ್

11. ನಾಯಕ್ ಜಿತೇಂದರ್ ಕುಮಾರ್ 12. ಲ್ಯಾನ್ಸ್ ನಾಯಕ್ ವಿವೇಕ್ ಕುಮಾರ್ ಮತ್ತು 13. ಲ್ಯಾನ್ಸ್ ನಾಯಕ್ ಸಾಯಿತೇಜಾ ದುರ್ಮರಣ

ಇದನ್ನೂ ಓದಿ ತಮಿಳುನಾಡು ಪೊಲೀಸರಿಂದ ರಸ್ತೆ ಮಾರ್ಗ ವ್ಯವಸ್ಥೆಯಾಗಿತ್ತು, ಆದರೆ ರಾವತ್ ಪ್ಲ್ಯಾನ್ ಪ್ರಕಾರ ಹೆಲಿಕಾಪ್ಟರ್​​ನಲ್ಲಿ​​ ಪ್ರಯಾಣ

Published On - 11:47 am, Thu, 9 December 21

ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ