ನವೆಂಬರ್​ನಲ್ಲಿ ₹ 1.04 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ

ನವೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ಸುಂಕದ (Goods and Services Tax - GST) ವರಮಾನವು ₹ 1.04 ಲಕ್ಷ ಕೋಟಿ ಮುಟ್ಟಿದೆ. ಹಿಂದಿನ ತಿಂಗಳು, ಅಂದರೆ ಅಕ್ಟೋಬರ್ ತಿಂಗಳಲ್ಲಿ ಜಿಎಸ್​ಟಿ ವರಮಾನವು ₹ 1.05 ಲಕ್ಷ ಕೋಟಿ ಸಂಗ್ರಹವಾಗಿತ್ತು.

ನವೆಂಬರ್​ನಲ್ಲಿ ₹ 1.04 ಲಕ್ಷ ಕೋಟಿ ಜಿಎಸ್​ಟಿ ಸಂಗ್ರಹ
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Dec 01, 2020 | 4:44 PM

ದೆಹಲಿ: ನವೆಂಬರ್ ತಿಂಗಳಲ್ಲಿ ಸರಕು ಮತ್ತು ಸೇವಾ ಸುಂಕದ (Goods and Services Tax – GST) ವರಮಾನವು ₹ 1.04 ಲಕ್ಷ ಕೋಟಿ ಮುಟ್ಟಿದೆ. ಹಿಂದಿನ ತಿಂಗಳು, ಅಂದರೆ ಅಕ್ಟೋಬರ್ ತಿಂಗಳಲ್ಲಿ ಜಿಎಸ್​ಟಿ ವರಮಾನವು ₹ 1.05 ಲಕ್ಷ ಕೋಟಿ ಸಂಗ್ರಹವಾಗಿತ್ತು.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಳೆದ ಎರಡು ತಿಂಗಳಿನಿಂದ ಜಿಎಸ್​ಟಿ ವರಮಾನ ಸತತವಾಗಿ ₹ 1 ಲಕ್ಷ ಕೋಟಿ ದಾಟುತ್ತಿದೆ. ಕಳೆದ ವರ್ಷದ (2019) ನವೆಂಬರ್ ತಿಂಗಳಲ್ಲಿ ಸಂಗ್ರಹವಾಗಿದ್ದ ವರಮಾನಕ್ಕೆ ಹೋಲಿಸಿದರೆ ಇದು ಶೇ 1.4ರಷ್ಟು ಹೆಚ್ಚು.

ಈ ತಿಂಗಳಲ್ಲಿ ಸರಕುಗಳ ಆಮದಿನಿಂದ ಸಂಗ್ರಹಿಸಲಾದ ಸುಂಕವು ಕಳೆದ ವರ್ಷದ ಇದೇ ತಿಂಗಳಿಗೆ ಹೋಲಿಸಿದರೆ ಶೇ 4.9ರಷ್ಟು ಮತ್ತು ದೇಶೀಯ ವಹಿವಾಟಿನಿಂದ ಸಂಗ್ರಹಿಸಿದ ಸುಂಕವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 0.5ರಷ್ಟು ಜಾಸ್ತಿಯಿದೆ ಎಂದು ಹಣಕಾಸು ಸಚಿವಾಲಯವು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಕಳೆದ ಆರ್ಥಿಕ ವರ್ಷದ 12 ತಿಂಗಳಲ್ಲಿ 8 ತಿಂಗಳು ಜಿಎಸ್​ಟಿ ಸಂಗ್ರಹ ₹ 1 ಲಕ್ಷ ಕೋಟಿಗೂ ಹೆಚ್ಚಾಗಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಲಾಕ್​ಡೌನ್​ ಮತ್ತು ಆರ್ಥಿಕ ಹಿಂಜರಿತದ ಕಾರಣ ತೆರಿಗೆ ಸಂಗ್ರಹ ಕುಸಿದಿತ್ತು.

ಜಿಎಸ್​ಟಿ ಸಂಗ್ರಹ ವಿವರ: ಏಪ್ರಿಲ್: ₹ 32,172 ಕೋಟಿ, ಮೇ ₹ 62,151 ಕೋಟಿ, ಜೂನ್ ₹ 90,917 ಕೋಟಿ, ಜುಲೈ ₹ 87,422 ಕೋಟಿ, ಆಗಸ್ಟ್ ₹ 86,449 ಕೋಟಿ, ಸೆಪ್ಟೆಂಬರ್ ₹95,480 ಕೋಟಿ, ಅಕ್ಟೋಬರ್ ₹ 1,05,155 ಕೋಟಿ ಮತ್ತು ನವೆಂಬರ್​ ₹1,04,963 ಕೋಟಿ.

Published On - 4:43 pm, Tue, 1 December 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್