GST ಮಂಡಳಿ ಸಭೆ ಇಂದು; ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್​ಟಿ ವ್ಯಾಪ್ತಿಗೆ ಸೇರಿಸುವ ಕುರಿತು ನಿರ್ಧಾರದ ಸಾಧ್ಯತೆ

| Updated By: shivaprasad.hs

Updated on: Sep 17, 2021 | 12:38 PM

Nirmala Sitharaman: ಇಂದು ಉತ್ತರ ಪ್ರದೇಶದ ಲಕ್ನೋದಲ್ಲಿ ಜಿಎಸ್​ಟಿ ಮಂಡಳಿ ಸಭೆ ನಡೆಯಲಿದೆ. ಈ ವೇಳೆ ಹಲವು ಮಹತ್ವದ ವಿಚಾರಗಳು ಚರ್ಚೆಯಾಗುವ ಸಾಧ್ಯತೆಗಳಿವೆ.

GST ಮಂಡಳಿ ಸಭೆ ಇಂದು; ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್​ಟಿ ವ್ಯಾಪ್ತಿಗೆ ಸೇರಿಸುವ ಕುರಿತು ನಿರ್ಧಾರದ ಸಾಧ್ಯತೆ
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
Follow us on

ಇಂದು (ಸೆಪ್ಟೆಂಬರ್ 17) ಬೆಳಗ್ಗೆ 11 ಗಂಟೆಗೆ ಉತ್ತರಪ್ರದೇಶದ ಲಖನೌನಲ್ಲಿ 45ನೇ GST ಮಂಡಳಿ ಸಭೆ ನಡೆಯಲಿದೆ. ಸಭೆಯಲ್ಲಿ ಎಲ್ಲಾ ರಾಜ್ಯಗಳ ಹಣಕಾಸು ಸಚಿವರು ಭಾಗಿಯಾಗಲಿದ್ದಾರೆ. ಈ ವೇಳೆ ರೆಸ್ಟೋರೆಂಟ್‌ಗಳ ತೆರಿಗೆ ವಂಚನೆಯಿಂದ ಸುಮಾರು ₹2,000 ಕೋಟಿ ನಷ್ಟವಾಗುತ್ತಿದ್ದು, ಇದನ್ನು ತಪ್ಪಿಸಲು ಜಿಎಸ್‌ಟಿ ವಿಧಿಸುವಂತೆ ಕೇಂದ್ರ, ರಾಜ್ಯ ಹಣಕಾಸು ಇಲಾಖೆಯ ಅಧಿಕಾರಿಗಳ ಸಮಿತಿ ಶಿಫಾರಸು ಮಾಡಲಿದೆ. ಹಾಗೆಯೇ 1 ಲೀಟರ್‌ಗಿಂತ ಕಡಿಮೆ ತೆಂಗಿನ ಎಣ್ಣೆಗೆ ಶೇ.18ರಷ್ಟು GST, ಲೀಟರ್‌ಗಿಂತ ಅಧಿಕ ತೆಂಗಿನ ಎಣ್ಣೆಗೆ ಬಾಟಲ್‌ಗೆ ಶೇ.5ರಷ್ಟು GST ವಿಧಿಸಲು ಶಿಫಾರಸು ಮಾಡಲಾಗುವುದು. ಸೋಲಾರ್ ಪ್ಯಾನಲ್ ಮೇಲಿನ ಜಿಎಸ್‌ಟಿಯನ್ನು ಶೇಕಡಾ 5ರಿಂದ ಶೇಕಡಾ 18ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಪೆಟ್ರೋಲ್, ಡೀಸೆಲ್​ಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಬಗ್ಗೆ ಮಂಡಳಿಯಲ್ಲಿ ಚರ್ಚೆ ನಡೆಸಲಾಗುವುದು. ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತರುವ ವಿಚಾರಕ್ಕೆ ಸಂಬಂಧಪಟ್ಟಂತೆ ತೀರ್ಮಾನ ಕೈಗೊಳ್ಳಲು ಕೇರಳ ಹೈಕೋರ್ಟ್ ಜೂನ್ ತಿಂಗಳಲ್ಲಿ ಸೂಚನೆ ನೀಡಿತ್ತು. ಹೀಗಾಗಿ ಇಂದಿನ ಸಭೆಯಲ್ಲಿ ಈ ಬಗ್ಗೆ ಮಹತ್ವದ ಮಾತುಕತೆ ನಡೆಯಲಿದೆ. ಒಂದು ವೇಳೆ ಪೆಟ್ರೋಲ್, ಡೀಸೆಲ್ ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಲಭ್ಯವಾಗುವ ಆದಾಯದಲ್ಲಿ ನಷ್ಟವಾಗಲಿದೆ.

GST ವ್ಯಾಪ್ತಿಗೆ ತಂದರೆ 50:50 ಅನುಪಾತದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳ ನಡುವೆ ಆದಾಯ ಹಂಚಿಕೆಯಾಗಲಿದೆ. ಜೊತೆಗೆ ಪೆಟ್ರೋಲ್ ಜಿಎಸ್‌ಟಿ ವ್ಯಾಪ್ತಿಗೆ ತಂದರೆ ಬೆಲೆ ಇಳಿಕೆಯಾಗುವ ಸಾಧ್ಯತೆಗಳಿದ್ದು, ಲೀಟರ್ ಪೆಟ್ರೋಲ್ ಬೆಲೆ 59 ರೂಪಾಯಿಗೆ ಇಳಿಕೆಯಾಗಲಿದೆ ಎನ್ನಲಾಗಿದೆ. ಡೀಸೆಲ್ GST ವ್ಯಾಪ್ತಿಗೆ ತಂದಲ್ಲಿ ಪ್ರತಿ ಲೀಟರ್​​ಗೆ 50 ರೂ ದರದಲ್ಲಿ ಸಿಗುವ ಸಾಧ್ಯತೆ ಇದೆ. ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಾದಲ್ಲಿ ಗ್ರಾಹಕರಿಗೆ ಅನುಕೂಲವಾಗಲಿದ್ದು, ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಕೂಡ ಇಳಿಕೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ಇಂದಿನ ಸಭೆ ಮಹತ್ವ ಪಡೆದಿದೆ.

ಇದನ್ನೂ ಓದಿ:

SCO Summit: ಇಂದು ಶಾಂಘೈ ಸಹಕಾರ ಸಂಘಟನೆ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಮಾತು; ಎಸ್​.ಜೈಶಂಕರ್​ ಭಾಗಿ

Onion Diseases: ಬೆಲೆ ಕುಸಿತದ ನಡುವೆ ಈರುಳ್ಳಿ ಬೆಳೆಗೆ ಕೊಳೆ ರೋಗ ಕಾಟ, ರೈತರು ಕಂಗಾಲು

(GST Council Meet is Today and council may take decisions on Petrol and diesel under GST)

Published On - 10:44 am, Fri, 17 September 21