GST Council Meet: ಪೆಟ್ರೋಲ್, ಡೀಸೆಲ್ ಕೂಡ ಜಿಎಸ್‌ಟಿ ವ್ಯಾಪ್ತಿಗೆ ಬರುತ್ತಾ?; ನಿರ್ಮಲಾ ಸೀತಾರಾಮನ್ ಉತ್ತರ ಇಲ್ಲಿದೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 7ನೇ ಬಾರಿಗೆ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ಸೃಷ್ಟಿಸಲಿದ್ದಾರೆ. 2024-25ರ ಪೂರ್ಣ ಪ್ರಮಾಣದ ಬಜೆಟ್ ಅನ್ನು ಜುಲೈ ತಿಂಗಳ ದ್ವಿತೀಯಾರ್ಧದಲ್ಲಿ ಸಂಸತ್ತಿನಲ್ಲಿ ಮಂಡಿಸುವ ನಿರೀಕ್ಷೆಯಿದೆ. ಕೇಂದ್ರ ಬಜೆಟ್ ಮಂಡನೆಗಾಗಿ ಸಂಸತ್ತಿನ ಎರಡೂ ಸದನಗಳು ಜುಲೈ ಮೂರನೇ ವಾರದಲ್ಲಿ ಮತ್ತೆ ಸಭೆ ನಡೆಸುವ ನಿರೀಕ್ಷೆಯಿದೆ.
ನವದೆಹಲಿ: ಇಂದು ಜಿಎಸ್‌ಟಿ ಕೌನ್ಸಿಲ್ ಸಭೆ (GST Council Meeting) ನಡೆದಿದ್ದು, ಈ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮಾಹಿತಿ ನೀಡಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ಪೆಟ್ರೋಲ್ (Petrol Price), ಡೀಸೆಲ್ ಬೆಲೆ (Diesel Price) ಅಧಿಕವಾಗಿದೆ. ಈ ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಕೂಡ ಜಿಎಸ್ಟಿ (GST) ಅಡಿಯಲ್ಲಿ ಬರಲಿದೆಯೇ? ಎಂಬ ಪ್ರಶ್ನೆಗೆ ನಿರ್ಮಲಾ ಸೀತಾರಾಮನ್ ನೀಡಿರುವ ಉತ್ತರ ಇಲ್ಲಿದೆ.
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯಾಪ್ತಿಯೊಳಗೆ ಸೇರಿಸಲು ಕೇಂದ್ರ ಸರ್ಕಾರ ಬಯಸಿದೆ. ಆದರೆ, ಅದನ್ನು ನಿರ್ಧರಿಸುವುದು ರಾಜ್ಯಗಳಿಗೆ ಬಿಟ್ಟಿದ್ದು. ಪೆಟ್ರೋಲ್ ಮತ್ತು ಡೀಸೆಲ್‌ಗೆ ಇನ್ನೂ ತೆರಿಗೆ ವಿಧಿಸಲಾಗಿಲ್ಲ. ಅದರ ಬದಲಾಗಿ, ನೈಸರ್ಗಿಕ ಅನಿಲ, ಎಟಿಎಫ್ ಜೊತೆಗೆ ಈ ಇಂಧನಗಳು ವ್ಯಾಟ್, ಕೇಂದ್ರ ಅಬಕಾರಿ ಸುಂಕ, ಕೇಂದ್ರ ಮಾರಾಟ ತೆರಿಗೆಗೆ ಒಳಪಟ್ಟಿರುತ್ತವೆ ಎಂದಿದ್ದಾರೆ.
#WATCH | On being asked about bringing fuel under GST, Union Finance Minister Nirmala Sitharaman says “…At the moment, the intention of the GST as it was brought in by former Finance Minister Arun Jaitley is to have the petrol and diesel in GST. It is up to the states to decide… pic.twitter.com/SoKpm3hlbI
— ANI (@ANI) June 22, 2024
ಇದನ್ನೂ ಓದಿ: Union Budget 2024: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ಜಿಎಸ್ಟಿ ಕೌನ್ಸಿಲ್ ಸಭೆ
ನಾವು ಸಭೆಯಲ್ಲಿ ಪೆಟ್ರೋಲ್, ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ಒಳಪಡಿಸುವ ಬಗ್ಗೆ ಚರ್ಚಿಸಲಿಲ್ಲ. ಆದರೆ, ಪೆಟ್ರೋಲ್ ಮತ್ತು ಡೀಸೆಲ್, ಜಿಎಸ್‌ಟಿ ಜಾರಿಯಾದಾಗಲೂ ಈ ಹಿಂದಿನ ಹಣಕಾಸು ಸಚಿವ ಅರುಣ್ ಜೇಟ್ಲಿ ಅದರ ಬಗ್ಗೆ ಮಾತನಾಡಿದ್ದು ನನಗೆ ನೆನಪಿದೆ. ರಾಜ್ಯಗಳು ಒಪ್ಪಿಗೆ ನೀಡಿದ ನಂತರ, ಅವರು ಕೌನ್ಸಿಲ್ನಲ್ಲಿ ತೆರಿಗೆ ದರವನ್ನು ನಿರ್ಧರಿಸಬೇಕು. ಆ ನಿರ್ಧಾರವನ್ನು ತೆಗೆದುಕೊಂಡ ನಂತರ ಅದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಸಭೆಯ ನಂತರದ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.
#WATCH | On the 53rd GST Council Meeting, Union Finance Minister Nirmala Sitharaman says, “Council recommended to prescribe a uniform rate of 12% on all milk cans meaning steel, iron, aluminum which are irrespective of the use. They are called milk cans but wherever they are used… pic.twitter.com/csf4Nmx2n3
— ANI (@ANI) June 22, 2024
ಕೇಂದ್ರ ಸರ್ಕಾರದ ಉದ್ದೇಶವು ಸ್ಪಷ್ಟವಾಗಿದೆ, ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ಸೇರಿಸಬೇಕೆಂದು ನಾವು ಬಯಸುತ್ತೇವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಜಿಎಸ್‌ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ಗೆ ಇನ್ನೂ ತೆರಿಗೆ ವಿಧಿಸಲಾಗಿಲ್ಲ. ಬದಲಾಗಿ, ನೈಸರ್ಗಿಕ ಅನಿಲ ಮತ್ತು ಎಟಿಎಫ್ ಜೊತೆಗೆ ಈ ಇಂಧನಗಳು ವ್ಯಾಟ್, ಕೇಂದ್ರ ಅಬಕಾರಿ ಸುಂಕ ಮತ್ತು ಕೇಂದ್ರ ಮಾರಾಟ ತೆರಿಗೆಗೆ ಒಳಪಟ್ಟಿರುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ ಎಂದಿದ್ದಾರೆ.
#WATCH | On the 53rd GST Council Meeting, Union Finance Minister Nirmala Sitharaman says, “There is going to be a rolling out of biometric-based Aadhaar authentication on an all-India basis. This will help us to combat fraudulent input tax credit claims made through fake invoices… pic.twitter.com/D5jLpsiw0x
— ANI (@ANI) June 22, 2024
#WATCH | On the 53rd GST Council Meeting, Union Finance Minister Nirmala Sitharaman says “Today, the 53rd GST Council Meeting has taken a lot of decisions on trade facilitation, easing compliance burden and giving relief to tax taxpayers in terms of compliance easing out. So this… pic.twitter.com/reyLvTUa06
— ANI (@ANI) June 22, 2024
18ನೇ ಲೋಕಸಭೆಯ ಮೊದಲ ಅಧಿವೇಶನವು ಜೂನ್ 24ರಂದು ಪ್ರಾರಂಭವಾಗಲಿದ್ದು, ಈ ಸಮಯದಲ್ಲಿ ಕೆಳಮನೆಯ ಹೊಸ ಸದಸ್ಯರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸ್ಪೀಕರ್ ಆಯ್ಕೆಯಾಗುತ್ತಾರೆ. ಅಧಿವೇಶನದ ಮೊದಲ 3 ದಿನಗಳಲ್ಲಿ ಹೊಸದಾಗಿ ಆಯ್ಕೆಯಾದ ನಾಯಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ ಮತ್ತು ಸದನದ ಸ್ಪೀಕರ್ ಅವರನ್ನು ಆಯ್ಕೆ ಮಾಡುತ್ತಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಮುಂದಿನ 5 ವರ್ಷಗಳ ಹೊಸ ಸರ್ಕಾರದ ಮಾರ್ಗಸೂಚಿಯನ್ನು ರೂಪಿಸುವ ಸಾಧ್ಯತೆಯಿದೆ. ಜುಲೈ 3ರಂದು ಅಧಿವೇಶನ ಮುಕ್ತಾಯವಾಗಲಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ