AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾಗೆ ಮೋದಿ ಸರ್ಕಾರದ ಉಡುಗೊರೆ; ನೂತನ ಜಿಎಸ್​ಟಿಯಿಂದ ಈ ವಸ್ತುಗಳ ಬೆಲೆ ಇಳಿಕೆ

ಇಂದು ರಾತ್ರಿ ನಡೆದ ಜಿಎಸ್​ಟಿ ಕೌನ್ಸಿಲ್ ಸಭೆಯ ಬಳಿಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಹತ್ವದ ಘೋಷಣೆ ಮಾಡಿದ್ದಾರೆ. ಸದ್ಯಕ್ಕೆ ಅಸ್ತಿತ್ವದಲ್ಲಿರುವ 4 ಜಿಎಸ್​ಟಿ ಸ್ಲ್ಯಾಬ್​ಗಳಲ್ಲಿ ಎರಡನ್ನು ರದ್ದು ಮಾಡಿ ಎರಡೇ ಸ್ಲ್ಯಾಬ್​ ಜಾರಿಗೆ ತರಲು ಜಿಎಸ್​ಟಿ ಮಂಡಳಿ ಅನುಮೋದನೆ ನೀಡಿದೆ. ಹೀಗಾಗಿ, ದಸರಾ ಹಬ್ಬಕ್ಕೂ ಮುನ್ನ ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ.

ದಸರಾಗೆ ಮೋದಿ ಸರ್ಕಾರದ ಉಡುಗೊರೆ; ನೂತನ ಜಿಎಸ್​ಟಿಯಿಂದ ಈ ವಸ್ತುಗಳ ಬೆಲೆ ಇಳಿಕೆ
Gst
ಸುಷ್ಮಾ ಚಕ್ರೆ
|

Updated on:Sep 03, 2025 | 11:23 PM

Share

ನವದೆಹಲಿ, ಸೆಪ್ಟೆಂಬರ್ 3: ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿಎಸ್​ಟಿ ಮಂಡಳಿ (GST Council), ಕೇಂದ್ರ ಸರ್ಕಾರವು ಸಲ್ಲಿಸಿದ ಜಿಎಸ್‌ಟಿ ಕಡಿತ ಮತ್ತು ಸುಧಾರಣೆಗಳ ಪ್ರಸ್ತಾವನೆಗಳನ್ನು ಸರ್ವಾನುಮತದಿಂದ ಅನುಮೋದಿಸಿದೆ. ಇದು ಸಾಮಾನ್ಯ ಜನರು, ರೈತರು, ಎಂಎಸ್‌ಎಂಇಗಳು, ಮಧ್ಯಮ ವರ್ಗ, ಮಹಿಳೆಯರು ಮತ್ತು ಯುವಕರಿಗೆ ಪ್ರಯೋಜನವನ್ನು ನೀಡುತ್ತದೆ. 56ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಸುದ್ದಿಗೋಷ್ಠಿ ನಡೆಸಿದ್ದು, ಮಧ್ಯಮ ವರ್ಗ ಮತ್ತು ಸಾಮಾನ್ಯ ಜನರ ಬಳಕೆಯ ವಸ್ತುಗಳ ಮೇಲಿನ ಜಿಎಸ್‌ಟಿ ದರವನ್ನು ಸಂಪೂರ್ಣವಾಗಿ ಕಡಿಮೆ ಮಾಡಲಾಗಿದೆ ಎಂದಿದ್ದಾರೆ. ಹಾಗಾದರೆ, ನೂತನ ಜಿಎಸ್​ಟಿ ನೀತಿಯಿಂದ ಯಾವ ವಸ್ತುಗಳಿಗೆ ಜಿಎಸ್‌ಟಿ ಕಡಿಮೆಯಾಗಿದೆ? ಎಂಬುದರ ಮಾಹಿತಿ ಇಲ್ಲಿದೆ.

12% ಅಥವಾ 18%ನಿಂದ 5%ಗೆ ಇಳಿದಿರುವ ವಸ್ತುಗಳು:

* ಕೇಶ ತೈಲ (ಹೇರ್ ಆಯಿಲ್)

* ಟಾಯ್ಲೆಟ್ ಸೋಪ್, ಸೋಪ್ ಬಾರ್‌ಗಳು

* ಶಾಂಪೂ

* ಶೇವಿಂಗ್ ಕ್ರೀಮ್

* ಟೂತ್‌ಬ್ರಶ್, ಟೂತ್‌ಪೇಸ್ಟ್

* ಸೈಕಲ್

* ಟೇಬಲ್ ವೇರ್, ಕಿಚನ್ ವೇರ್ ಮತ್ತು ಇತರೆ ಮನೆಯ ಉಪಕರಣಗಳು

* ಬೆಣ್ಣೆ, ತುಪ್ಪ, ಚೀಸ್ ಮತ್ತು ಡೈರಿ ಸ್ಪ್ರೆಡ್‌ಗಳು, ನಾಮ್‌ಕೀನ್‌ಗಳು, ಪಾತ್ರೆಗಳು

*ಫೀಡಿಂಗ್ ಬಾಟಲಿಗಳು, ಶಿಶುಗಳಿಗೆ ನ್ಯಾಪ್‌ಕಿನ್‌ಗಳು ಮತ್ತು ಕ್ಲಿನಿಕಲ್ ಡೈಪರ್‌ಗಳು

* ಹೊಲಿಗೆ ಯಂತ್ರಗಳು

ಇದನ್ನೂ ಓದಿ: ಸೆಪ್ಟೆಂಬರ್ 22ರಿಂದ ನೂತನ ಜಿಎಸ್​ಟಿ ಜಾರಿ; 4ರ ಬದಲಿಗೆ 2 ಸ್ಲ್ಯಾಬ್ ದರಗಳಿಗೆ ಕೇಂದ್ರ ಸರ್ಕಾರ ಅನುಮೋದನೆ

ಶೂನ್ಯಕ್ಕೆ ಇಳಿದಿರುವ ವಸ್ತುಗಳು (0%):

* ಅಲ್ಟ್ರಾ-ಹೈ ಟೆಂಪರೇಚರ್ ಹಾಲು

* ಪನೀರ್

* ರೊಟ್ಟಿ, ಪರೋಟಾ

* 33 ಜೀವರಕ್ಷಕ ಔಷಧಗಳು, ಕ್ಯಾನ್ಸರ್ ಔಷಧಿಗಳು, ಅಪರೂಪದ ಕಾಯಿಲೆಗಳಿಗೆ ಔಷಧಿಗಳು

* ವೈಯಕ್ತಿಕ ಜೀವ ವಿಮೆ, ಆರೋಗ್ಯ ಪಾಲಿಸಿಗಳು

28%ನಿಂದ 18%ಗೆ ಇಳಿದಿರುವ ವಸ್ತುಗಳು:

* ಹವಾನಿಯಂತ್ರಣ ಯಂತ್ರಗಳು (ಎಸಿ)

* 32 ಇಂಚುಗಳಿಗಿಂತ ದೊಡ್ಡದಾದ ಟಿವಿಗಳು (ಎಲ್ಲಾ ಟಿವಿಗಳು ಈಗ 18% ಜಿಎಸ್‌ಟಿ ವ್ಯಾಪ್ತಿಗೆ)

* ಡಿಶ್‌ವಾಷಿಂಗ್ ಯಂತ್ರಗಳು

* ಸಣ್ಣ ಕಾರುಗಳು

* 350 ಸಿಸಿ ಅಥವಾ ಅದಕ್ಕಿಂತ ಕಡಿಮೆ ಸಾಮರ್ಥ್ಯದ ಬೈಕ್​ಗಳು

* ಬಸ್‌ಗಳು, ಟ್ರಕ್‌ಗಳು, ಆಂಬ್ಯುಲೆನ್ಸ್‌ಗಳು

* ಎಲ್ಲಾ ಆಟೋ ಭಾಗಗಳು

* ತ್ರಿಚಕ್ರ ವಾಹನಗಳು

* ಸಿಮೆಂಟ್

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 11:21 pm, Wed, 3 September 25

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ