AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟದ ಮಧ್ಯೆಯೂ ಡಿಸೆಂಬರ್​ನಲ್ಲಿ ಅತಿ ಹೆಚ್ಚು GST ಸಂಗ್ರಹ..! ಕೇಂದ್ರದ ಕೈಹಿಡಿದಿದ್ದು ಯಾವುದು ಗೊತ್ತಾ?

ಹಣಕಾಸು, ತೆರಿಗೆ ಸಂಗ್ರಹ ಪ್ರಕ್ರಿಯೆ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ನಾವು ತಂದಿದ್ದೇವೆ. ದೇಶದ ಆರ್ಥಿಕತೆ ಸರಿಯಾದ ಹಾದಿಯಲ್ಲಿದೆ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ, ಡಾ. ಅಜಯ್ ಭೂಷಣ್ ಪಾಂಡೆ ತಿಳಿಸಿದ್ದಾರೆ.

ಕೊರೊನಾ ಕಾಟದ ಮಧ್ಯೆಯೂ ಡಿಸೆಂಬರ್​ನಲ್ಲಿ ಅತಿ ಹೆಚ್ಚು GST ಸಂಗ್ರಹ..! ಕೇಂದ್ರದ ಕೈಹಿಡಿದಿದ್ದು ಯಾವುದು ಗೊತ್ತಾ?
ಡಾ. ಅಜಯ್ ಭೂಷಣ್ ಪಾಂಡೆ
TV9 Web
| Edited By: |

Updated on:Apr 06, 2022 | 11:01 PM

Share

ದೆಹಲಿ: ಕಳೆದೆರಡು ತಿಂಗಳ ಅವಧಿಯಲ್ಲಿ, ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಸಂಸ್ಥೆಗಳ 180  ವ್ಯವಸ್ಥಾಪಕ ನಿರ್ದೇಶಕರು ಹಾಗೂ ಲೆಕ್ಕ ಪರಿಶೋಧಕರನ್ನು ಬಂಧಿಸಲಾಗಿದೆ.  GST ತೆರಿಗೆ ವಂಚನೆ ಗಂಭೀರ ಆರ್ಥಿಕ ಅಪರಾಧವಾಗಿರುವ ಕಾರಣ ಬಂಧಿತರಿಗೆ ಜಾಮೀನು ಪಡೆಯಲು ಕೂಡ ಸಾಧ್ಯವಾಗುವುದಿಲ್ಲ ಎಂದು ಕೇಂದ್ರ ಹಣಕಾಸು ಕಾರ್ಯದರ್ಶಿ ಡಾ. ಅಜಯ್ ಭೂಷಣ್ ಪಾಂಡೆ ತಿಳಿಸಿದ್ದಾರೆ.

ಹಣಕಾಸು, ತೆರಿಗೆ ಸಂಗ್ರಹ ಪ್ರಕ್ರಿಯೆ ವ್ಯವಸ್ಥೆಯಲ್ಲಿ ಹಲವು ಬದಲಾವಣೆಗಳನ್ನು ನಾವು ತಂದಿದ್ದೇವೆ. ದೇಶದ ಆರ್ಥಿಕತೆ ಸರಿಯಾದ ಹಾದಿಯಲ್ಲಿದೆ. ತೆರಿಗೆಯ ವಿಚಾರದಲ್ಲಿ ಅಕ್ರಮ ಮತ್ತು ಅಸಮರ್ಪಕ ರೀತಿಯಲ್ಲಿ ವ್ಯವಹರಿಸುವವರ  ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತಿದ್ದೇವೆ. ಆದ್ದರಿಂದ, ಡಿಸೆಂಬರ್ ತಿಂಗಳಲ್ಲಿ ದಾಖಲೆಯ ಮೊತ್ತದ ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವಾಗಿದೆ. 1.15 ಲಕ್ಷ ರೂಪಾಯಿ ಅತಿ ಹೆಚ್ಚು ತೆರಿಗೆ ವಸೂಲಿಯಾಗಿದೆ ಎಂದು ಡಾ. ಅಜಯ್ ಭೂಷಣ್ ಪಾಂಡೆ  ಹೇಳಿದ್ದಾರೆ.

ಪ್ರಸ್ತುತ ತೆರಿಗೆ ವಂಚನೆ, ಅವ್ಯವಹಾರಗಳಲ್ಲಿ ತೊಡಗಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಲು ಸಾಫ್ಟ್​ವೇರ್ ಟೂಲ್ ಬಳಸಲಾಗುತ್ತಿದೆ. ಆ ಮೂಲಕವೇ 2017ರಿಂದ ತೆರಿಗೆ ವಂಚನೆಯಲ್ಲಿ ಭಾಗಿಯಾದ 180 ಮಂದಿಯನ್ನು ಬಂಧಿಸಿದ್ದೇವೆ. ಮೊದಲು ದೂರಿನ ಆಧಾರದಲ್ಲಿ ಹಣಕಾಸು ವಂಚನೆ ಪ್ರಕರಣಗಳನ್ನು ಗುರುತಿಸಲಾಗುತ್ತಿತ್ತು. ಆದರೆ ಈಗ, ತೆರಿಗೆ ವಂಚನೆಯ ಬಗ್ಗೆ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಕೃತಕ ಬುದ್ಧಿಮತ್ತೆ (Artificial Intelligence-AI) ಮೂಲಕ ಅವುಗಳನ್ನು ವಿಶ್ಲೇಷಿಸಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದೂ ಅವರು ವಿವರಿಸಿದ್ದಾರೆ.

ತೆರಿಗೆ ವಂಚನೆಯಲ್ಲಿ ಭಾಗಿಯಾದವರ ಮೇಲೆ ಕ್ರಮ ಕೈಗೊಳ್ಳುವಾಗ, ಪ್ರಾಮಾಣಿಕ ತೆರಿಗೆದಾರರಿಗೆ ಯಾವುದೇ ತೊಂದರೆಯಾಗಬಾರದು. ವ್ಯವಸ್ಥೆಯನ್ನು ದುರ್ಬಳಕೆ ಮಾಡುತ್ತಿರುವವರ ವಿರುದ್ಧ ಮಾತ್ರ ಕಾನೂನು ಕ್ರಮ ಜರುಗಬೇಕು. ಹಾಗಾಗಿ, ಡಾಟಾ ವಿಶ್ಲೇಷಣೆಯ ಮೂಲಕ ವ್ಯವಸ್ಥಿತ ರೂಪದಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಡಿಸೆಂಬರ್​ನಲ್ಲಿ ಅತಿ ಹೆಚ್ಚು ತೆರಿಗೆ ಸಂಗ್ರಹವಾಗಲು ಇದೂ ಕೂಡ ಕಾರಣವಾಗಿದೆ. ಸಮರ್ಪಕ ತೆರಿಗೆ ಪಾವತಿ ಅಥವಾ ತೆರಿಗೆ ಸಂಗ್ರಹವು ಮುಂದಿನ ತಿಂಗಳುಗಳಲ್ಲೂ ಮುಂದುವರಿಯಬೇಕು ಎಂದು ಡಾ. ಅಜಯ್ ಭೂಷಣ್ ಪಾಂಡೆ ಹೇಳಿದ್ದಾರೆ.

GST ಸಂಗ್ರಹದಲ್ಲಿ ಗಣನೀಯ ಹೆಚ್ಚಳ: ಡಿಸೆಂಬರ್​​ನಲ್ಲೇ ಹೆಚ್ಚು ತೆರಿಗೆ ಕಲೆಕ್ಟ್​ ಆಗಿರೋದು!

Published On - 11:43 am, Mon, 4 January 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್