ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ ಅರ್ಜಿ ನ್ಯಾಯಾಲಯದಲ್ಲಿ ಬಾಕಿ, ಮಗುವಿಗೆ ಜನ್ಮಕೊಟ್ಟ 15ರ ಬಾಲಕಿ

ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ(Abortion) ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿ ಇನ್ನೂ ಬಾಕಿ ಇರುವಾಗಲೇ 15ರ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಈ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗುಜರಾತ್ ಹೈಕೋರ್ಟ್‌ನಲ್ಲಿ 35 ವಾರಗಳ ಗರ್ಭವನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಮಯದಲ್ಲಿ ಅತ್ಯಾಚಾರ ಸಂತ್ರಸ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ ಅರ್ಜಿ ನ್ಯಾಯಾಲಯದಲ್ಲಿ ಬಾಕಿ, ಮಗುವಿಗೆ ಜನ್ಮಕೊಟ್ಟ 15ರ ಬಾಲಕಿ
ಗರ್ಭಿಣಿ
Image Credit source: Google

Updated on: Oct 30, 2025 | 7:47 AM

ಅಹಮದಾಬಾದ್, ಅಕ್ಟೋಬರ್ 30: ಅತ್ಯಾಚಾರ ಸಂತ್ರಸ್ತೆಯ ಗರ್ಭಪಾತ(Abortion) ಅರ್ಜಿ ವಿಚಾರಣೆ ನ್ಯಾಯಾಲಯದಲ್ಲಿ ಇನ್ನೂ ಬಾಕಿ ಇರುವಾಗಲೇ 15 ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಘಟನೆ ಗುಜರಾತ್ನಲ್ಲಿ ನಡೆದಿದೆ. ಗುಜರಾತ್ ಹೈಕೋರ್ಟ್‌ನಲ್ಲಿ 35 ವಾರಗಳ ಗರ್ಭವನ್ನು ಅಂತ್ಯಗೊಳಿಸಲು ಅನುಮತಿ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಮಯದಲ್ಲಿ ಅತ್ಯಾಚಾರ ಸಂತ್ರಸ್ತೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ.

ಹೆರಿಗೆ ವೆಚ್ಚ ಸೇರಿದಂತೆ ಆರು ತಿಂಗಳವರೆಗೆ ಎಲ್ಲಾ ವೆಚ್ಚಗಳನ್ನು ಭರಿಸುವಂತೆ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಅಹಮದಾಬಾದ್‌ನ 15 ವರ್ಷದ ಅತ್ಯಾಚಾರ ಸಂತ್ರಸ್ತೆಯ ತಂದೆ ಆಕೆಯ ಗರ್ಭಪಾತ ಕೋರಿ ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 24 ರಂದು ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ದೂರು ದಾಖಲಿಸಿದ್ದರು.

ಅರ್ಜಿಯ ಬಳಿಕ ಹೈಕೋರ್ಟ್ ಅಹಮದಾಬಾದ್‌ನ ಸೋಲಾ ಸಿವಿಲ್ ಆಸ್ಪತ್ರೆಗೆ ಬಾಲಕಿಯ ವೈದ್ಯಕೀಯ ಪರೀಕ್ಷೆ ನಡೆಸುವಂತೆ ನಿರ್ದೇಶಿಸಿತ್ತು. ಆಸ್ಪತ್ರೆ ತನ್ನ ವರದಿಯನ್ನು ಸಲ್ಲಿಸುವ ಮೊದಲು, ಅಕ್ಟೋಬರ್ 28 ರ ಮಧ್ಯಾಹ್ನ ಬಾಲಕಿ 2.2 ಕೆಜಿ ತೂಕದ ಮಗುವಿಗೆ ಜನ್ಮ ನೀಡಿದ್ದಳು. ವೈದ್ಯಕೀಯ ವರದಿಯ ಪ್ರಕಾರ, ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ.

ಹೆರಿಗೆ ಈಗಾಗಲೇ ನಡೆದಿರುವುದರಿಂದ ಈ ಅರ್ಜಿಗೆ ಯಾವುದೇ ಮಹತ್ವವಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ. ಅಪ್ರಾಪ್ತ ತಾಯಿ ಮತ್ತು ನವಜಾತ ಶಿಶುವಿನ ಪುನರ್ವಸತಿಯನ್ನು ಖಚಿತಪಡಿಸಿಕೊಳ್ಳುವಂತೆ ಅಹಮದಾಬಾದ್ ಜಿಲ್ಲೆಯ ತನಿಖಾಧಿಕಾರಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ (DLSA) ಹೈಕೋರ್ಟ್ ಸೂಚಿಸಿದೆ.

ಮತ್ತಷ್ಟು ಓದಿ:  ಗರ್ಭಪಾತ ಆದವರು ಯಾವ ರೀತಿಯ ಆಹಾರ ಸೇವನೆ ಮಾಡಬೇಕು? ತ್ವರಿತ ಪರಿಹಾರ ಸಿಗಲು ಇಲ್ಲಿದೆ ಸಲಹೆ

ಬಾಲಕಿಯ ಇಚ್ಛೆಯಂತೆ ಮಗುವನ್ನು ಅಹಮದಾಬಾದ್‌ನಲ್ಲಿರುವ ವಿಶೇಷ ದತ್ತು ಸಂಸ್ಥೆಗೆ ಹಸ್ತಾಂತರಿಸುವಂತೆ ನ್ಯಾಯಾಲಯವು ನಿರ್ದೇಶಿಸಿದೆ. ತಾಯಿ ಮತ್ತು ಮಗು ಇಬ್ಬರಿಗೂ ಆರೋಗ್ಯ ತಪಾಸಣೆ ನಡೆಸುವಂತೆ ಆದೇಶಿಸಲಾಯಿತು, ಮತ್ತು ಅವರ ಯೋಗಕ್ಷೇಮವನ್ನು ಮೇಲ್ವಿಚಾರಣೆ ಮಾಡುವ ಕಾರ್ಯವನ್ನು ಮಕ್ಕಳ ಕಲ್ಯಾಣ ಸಮಿತಿಗೆ ವಹಿಸಲಾಯಿತು.

ಬಾಲಕಿ ತನ್ನ ಕುಟುಂಬದೊಂದಿಗೆ ಇರಲು ಬಯಸದಿದ್ದರೆ, ಆಕೆಯನ್ನು ಅಹಮದಾಬಾದ್‌ನಲ್ಲಿರುವ ಮಹಿಳಾ ಆಶ್ರಯದಲ್ಲಿ ಇರಿಸಲಾಗುವುದು, ಅಲ್ಲಿ ಆಕೆಯ ಶಿಕ್ಷಣ ಮತ್ತು ವೃತ್ತಿಪರ ತರಬೇತಿಗೆ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ