ಎರಡು ಬಸ್ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಗುಜರಾತ್ನ ಗಾಂಧಿನಗರದಲ್ಲಿ ನಡೆದಿದೆ. ಕಲೋಲ್ ಪಟ್ಟಣದಲ್ಲಿ ಬೆಳಗ್ಗೆ 7.30ರ ಸುಮಾರಿಗೆ ಕೆಲವು ಪ್ರಯಾಣಿಕರು ಬಸ್‌ಗಾಗಿ ಕಾಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಎಸ್‌ಟಿ ಬಸ್‌ಗೆ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಐಷಾರಾಮಿ ಬಸ್ ಡಿಕ್ಕಿ ಹೊಡೆದಿದೆ ಎಂದು ಕಲೋಲ್ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಐವರು ಸಾವನ್ನಪ್ಪಿದ್ದು, ಕನಿಷ್ಠ ಏಳು ಮಂದಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತದೇಹಗಳನ್ನೂ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ