ಗುಜರಾತ್​​ ಅಪಘಾತದಲ್ಲಿ 9 ಜನ ಸಾವು; ಪ್ರಧಾನಿ ಸಚಿವಾಲಯದಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ

ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡುವುದಾಗಿ ತಿಳಿಸಿದೆ.

ಗುಜರಾತ್​​ ಅಪಘಾತದಲ್ಲಿ 9 ಜನ ಸಾವು; ಪ್ರಧಾನಿ ಸಚಿವಾಲಯದಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಘೋಷಣೆ
ಪ್ರಧಾನಿ ನರೇಂದ್ರ ಮೋದಿ (ಎಎನ್​ಐ ಚಿತ್ರ)Image Credit source: ANI
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 31, 2022 | 3:01 PM

ಅಹಮದಾಬಾದ್: ಗುಜರಾತ್‌ನ ನವಸಾರಿಯಲ್ಲಿ (Navasari Accident) ಇಂದು ಬೆಳಗಿನ ಜಾವ ಬಸ್ ಮತ್ತು ಫಾರ್ಚುನರ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ದುರಂತದಲ್ಲಿ 9 ಜನರು ಸಾವನ್ನಪ್ಪಿ, 32 ಮಂದಿ ಗಾಯಗೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ನವಸಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ (Road Accident) ಸಂಭವಿಸಿದ ಅಪಘಾತಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ 32 ಮಂದಿಯಲ್ಲಿ 17 ಜನರನ್ನು ವಲ್ಸಾದ್‌ನ ಆಸ್ಪತ್ರೆಗೆ, 14 ಮಂದಿಯನ್ನು ನವಸಾರಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಘಟನೆಯಲ್ಲಿ ಗಾಯಗೊಂಡ ಇನ್ನೊಬ್ಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಸೂರತ್‌ಗೆ ಕರೆದೊಯ್ಯಲಾಗಿತ್ತು.

ಇದನ್ನೂ ಓದಿ: ಗುಜರಾತ್​​ನ ನವಸಾರಿಯಲ್ಲಿ ಭೀಕರ ಅಪಘಾತ; 9 ಜನ ಸಾವು, 32 ಮಂದಿಗೆ ಗಾಯ

ಎಸ್‌ಯುವಿ (ಫಾರ್ಚುನರ್) ಅಂಕಲೇಶ್ವರದ ಸಂಸ್ಥೆಯೊಂದರ ಉದ್ಯೋಗಿಗಳಾಗಿರುವ 9 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಇನ್ನೊಂದು ದಿಕ್ಕಿನಿಂದ ಬರುತ್ತಿದ್ದ ಬಸ್ ಅಹಮದಾಬಾದ್‌ನಿಂದ ವಲ್ಸಾದ್‌ಗೆ ಜನರನ್ನು ಕರೆದುಕೊಂಡು ಹೋಗುತ್ತಿತ್ತು. ಈ ವೇಳೆ ಎರಡೂ ವಾಹನಗಳ ನಡುವೆ ಅಪಘಾತ ಸಂಭವಿಸಿತ್ತು.

ಅಪಘಾತದಲ್ಲಿ ಸಾವನ್ನಪ್ಪಿದವರ ಕುಟುಂಬಕ್ಕೆ ಪ್ರಧಾನ ಮಂತ್ರಿ ಕಚೇರಿ (ಪಿಎಂಒ) 2 ಲಕ್ಷ ರೂ. ಪರಿಹಾರ ಘೋಷಿಸಿದೆ. ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡುವುದಾಗಿ ತಿಳಿಸಿದೆ. “ನವಸಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯಿಂದ ನೋವಾಗಿದೆ. ನನ್ನ ಆಲೋಚನೆಗಳು ದುಃಖಿತ ಕುಟುಂಬಗಳೊಂದಿಗೆ ಇವೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. PMNRFನಿಂದ ಮೃತರ ಸಂಬಂಧಿಕರಿಗೆ 2 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುತ್ತದೆ. ಗಾಯಗೊಂಡವರಿಗೆ 50,000 ರೂ. ನೀಡಲಾಗುವುದು ಎಂದು ಪಿಎಂಒ ಟ್ವೀಟ್‌ನಲ್ಲಿ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ