Gujarat Assembly Elections 2022: ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ ಅರೆಸೇನಾಪಡೆ ಯೋಧ

ಅಹಮದಾಬಾದ್: ಗುಜರಾತ್​ನಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಅರೆಸೇನಾಪಡೆ ಯೋಧರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ.

Gujarat Assembly Elections 2022: ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ ಅರೆಸೇನಾಪಡೆ ಯೋಧ
ParamilitaryImage Credit source: Zee News
Follow us
TV9 Web
| Updated By: ನಯನಾ ರಾಜೀವ್

Updated on: Nov 27, 2022 | 9:58 AM

ಅಹಮದಾಬಾದ್: ಗುಜರಾತ್​ನಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಅರೆಸೇನಾಪಡೆ ಯೋಧರ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ. ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಭಾರೀ ರಾಜಕೀಯ ಚಟುವಟಿಕೆ ನಡೆಯುತ್ತಿರುವ ಗುಜರಾತ್‌ನಲ್ಲಿ ಶನಿವಾರ ಪೋರಬಂದರ್‌ನಲ್ಲಿ ದೊಡ್ಡ ಘಟನೆಯೊಂದು ಮುನ್ನೆಲೆಗೆ ಬಂದಿದೆ.

ಪೋರಬಂದರ್‌ನಲ್ಲಿ, ಚುನಾವಣಾ ಕೆಲಸದಲ್ಲಿ ನಿರತರಾಗಿದ್ದ ಭಾರತೀಯ ರಿಸರ್ವ್ ಬೆಟಾಲಿಯನ್‌ನ ಸೈನಿಕರು ಪರಸ್ಪರ ಘರ್ಷಣೆ ಮಾಡಿಕೊಂಡರು ಇದರಲ್ಲಿ ಒಬ್ಬ ಯೋಧ AK-56 ನಿಂದ ಇಬ್ಬರು ಸೈನಿಕರಿಗೆ ಗುಂಡು ಹಾರಿಸಿದ್ದಾರೆ. ಇದರಲ್ಲಿ ಇಬ್ಬರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಘಟನೆ ಶನಿವಾರ ಸಂಜೆ ನಡೆದಿದೆ.

ಘಟನೆಯ ಮಾಹಿತಿ ಪಡೆದ ಪೊಲೀಸರು ಮೃತ ಯೋಧರ ಶವಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಅದೇ ವೇಳೆ ಗಾಯಗೊಂಡ ಯೋಧರನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದರಲ್ಲಿ ಒಬ್ಬರ ಹೊಟ್ಟೆಗೆ ಮತ್ತೊಬ್ಬರ ಕಾಲಿಗೆ ಗುಂಡು ತಗುಲಿದೆ.

ಗುಜರಾತ್‌ನಲ್ಲಿ ಚುನಾವಣಾ ಕರ್ತವ್ಯಕ್ಕೆ ಯೋಧರನ್ನು ನಿಯೋಜಿಸಲಾಗಿತ್ತು, ಪೋರಬಂದರ್ ಕಲೆಕ್ಟರ್ ಮತ್ತು ಜಿಲ್ಲಾ ಚುನಾವಣಾಧಿಕಾರಿ ಎಎಂ ಶರ್ಮಾ ಘಟನೆಯನ್ನು ಖಚಿತಪಡಿಸಿದ್ದಾರೆ ಮತ್ತು ಸಂಜೆ ವಾಗ್ವಾದ ನಡೆದಾಗ ಅವರು ಕರ್ತವ್ಯದಲ್ಲಿ ಇರಲಿಲ್ಲ ಎಂದು ತಿಳಿದುಬಂದಿದೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲಾದ ಘರ್ಷಣೆಯ ನಂತರ ಯೋಧನೊಬ್ಬ ತನ್ನ ಸಹಚರರ ಮೇಲೆ ಎಕೆ-56 ನಿಂದ ಗುಂಡು ಹಾರಿಸಿರುವುದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ.

ಈ ಘಟನೆ ನಡೆದಾಗ ಯಾವೊಬ್ಬ ಸೈನಿಕರೂ ಕರ್ತವ್ಯದಲ್ಲಿ ಇರಲಿಲ್ಲ. ಅವರು ಪೋರಬಂದರ್‌ನಿಂದ ಸುಮಾರು 25 ಕಿಮೀ ದೂರದಲ್ಲಿರುವ ತುಕ್ಡಾ ಗೋಸಾ ಗ್ರಾಮದ ಸೈಕ್ಲೋನ್ ಕೇಂದ್ರದಲ್ಲಿ ತಂಗಿದ್ದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಘರ್ಷಣೆಯಲ್ಲಿ ತೊಡಗಿದ್ದ ಯೋಧರು ಮಣಿಪುರದ ಭಾರತೀಯ ಮೀಸಲು ಬೆಟಾಲಿಯನ್ ಭಾಗವಾಗಿದ್ದು, ಗುಜರಾತ್​ಗೆ ಚುನಾವಣಾ ಕರ್ತವ್ಯಕ್ಕೆಂದು ನಿಯೋಜಿಸಲ್ಪಟ್ಟಿದ್ದರು. ಸದ್ಯ ಪೊಲೀಸರು ಸಂಪೂರ್ಣ ತನಿಖೆಯಲ್ಲಿ ತೊಡಗಿದ್ದಾರೆ. ವಿಷಯ ತಿಳಿದ ಕೂಡಲೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಘರ್ಷಣೆಗೆ ಕಾರಣವೇನು ಎಂಬುದರ ಕುರಿತು ಅಧಿಕಾರಿಗಳು ಮೃತ ಜವಾನರ ಸಹಚರರು ಮತ್ತು ಇತರ ಗುಂಪಿನ ಜವಾನರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಪೋರಬಂದರ್ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಡಿಸೆಂಬರ್ 1 ರಂದು ಮತದಾನ ನಡೆಯಲಿದ್ದು, ಎರಡನೇ ಹಂತದಲ್ಲಿ ಡಿಸೆಂಬರ್ 5 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 8 ರಂದು ಫಲಿತಾಂಶ ಹೊರಬರಲಿದೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್
ಮೊದಲ ಓವರ್​ನಲ್ಲೇ ಸ್ಟಾರ್ಕ್ ಬೆಂಡೆತ್ತಿ ದಾಖಲೆ ಬರೆದ ಯಶಸ್ವಿ ಜೈಸ್ವಾಲ್