AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರು ಬ್ರಾಹ್ಮಣರು, ಸಂಸ್ಕಾರವಂತರು: ಬಿಲ್ಕಿಸ್ ಬಾನು ಅತ್ಯಾಚಾರಿಗಳ ಬಿಡುಗಡೆ ಸಮರ್ಥಿಸಿಕೊಂಡ ಬಿಜೆಪಿ ಶಾಸಕ

Bilkis Bano case ಅಂದಹಾಗೆ ಅವರು (ಬಿಡುಗಡೆಯಾದ ಅಪರಾಧಿಗಳು) ಅರರಾಧ ಮಾಡಿದ್ದಾರೆಯೇ ಎಂಬುದು ತಿಳಿದಿಲ್ಲ . ಆದರೆ ಹಾಗೆ ಮಾಡಲು ಯಾವುದಾದರೂ ಉದ್ದೇಶವಿದ್ದಿರಬಹುದು. ಅವರೆಲ್ಲರೂ ಬ್ರಾಹ್ಮಣರೇ. ಬ್ರಾಹ್ಮಣರು ಸಂಸ್ಕಾರವಂತರು

ಅವರು ಬ್ರಾಹ್ಮಣರು, ಸಂಸ್ಕಾರವಂತರು: ಬಿಲ್ಕಿಸ್ ಬಾನು ಅತ್ಯಾಚಾರಿಗಳ ಬಿಡುಗಡೆ ಸಮರ್ಥಿಸಿಕೊಂಡ ಬಿಜೆಪಿ ಶಾಸಕ
ಬಿಲ್ಕಿಸ್ ಬಾನು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 19, 2022 | 5:28 PM

Share

ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ (Bilkis Bano case)ಪ್ರಕರಣದಲ್ಲಿ ಅಪರಾಧಿಗಳಾಗಿದ್ದ 11 ಮಂದಿಯನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಗುಜರಾತಿನ ಬಿಜೆಪಿ ಶಾಸಕ ಸಿ.ಕೆ ರವುಲಜಿ(CK Raulji), ಅವರೆಲ್ಲರೂ ಬ್ರಾಹ್ಮಣರು (Brahmins), ಅವರು ಉತ್ತಮ ಸಂಸ್ಕಾರವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. 15 ವರ್ಷಗಳ ಜೈಲು ಶಿಕ್ಷೆ ನಂತರ ಸನ್ನಡತೆ ಆಧಾರ ಮೇಲೆ ಗುಜರಾತ್ ಸರ್ಕಾರ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಸ್ವಾತಂತ್ರ್ಯ ದಿನದಂದು ಬಿಡುಗಡೆ ಮಾಡಿತ್ತು. ಅಪರಾಧಿಗಳಿಗೆ ಕ್ಷಮಾಪಣೆ ನೀಡಿದ ಪರಿಶೀಲನಾ ಸಮಿತಿಯಲ್ಲಿದ್ದ ಇಬ್ಬರು ಬಿಜೆಪಿ ನಾಯಕರ ಪೈಕಿ ಬಿಜೆಪಿ ಶಾಸಕ ರವುಲಜಿ ಕೂಡಾ ಒಬ್ಬರು. ಈ ದುಷ್ಕೃತ್ಯದಲ್ಲಿ ಅಪರಾಧಿಗಳು ಭಾಗಿಯಾಗಿದ್ದಾರೆಯೇ ಎಂಬುದು ನನಗೆ ಗೊತ್ತಿಲ್ಲ ಎಂದಿದ್ದಾರೆ ರವುಲಜಿ. ಮಾರ್ಚ್ 3, 2002ರಂದು ಗುಜರಾತಿವ ದಹೋದ್ ಜಿಲ್ಲೆಯಲ್ಲಿರುವ ಲಿಮ್ಖೇದಾ ತಾಲೂಕಿನ ರಾಂಧಿಪುರ್ ಗ್ರಾಮದಲ್ಲಿ ಬಿಲ್ಕಿಸ್ ಬಾನು ಕುಟುಂಬದ ಮೇಲೆ ಗುಂಪೊಂದು ದಾಳಿ ನಡೆಸಿತ್ತು. ಆ ಹೊತ್ತಲ್ಲಿ ಬಿಲ್ಕಿಸ್ 5 ತಿಂಗಳ ಗರ್ಭಿಣಿಯಾಗಿದ್ದಳು. ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಯಿತು. ಆಕೆಯ ಕುಟುಂಬದ 7 ಮಂದಿಯನ್ನು ಗುಂಪು ದಾಳಿ ನಡೆಸಿದ್ದ ಕಿಡಿಗೇಡಿಗಳು ಹತ್ಯೆ ಮಾಡಿದ್ದರು. ಅಂದಹಾಗೆ ಅವರು (ಬಿಡುಗಡೆಯಾದ ಅಪರಾಧಿಗಳು) ಅರರಾಧ ಮಾಡಿದ್ದಾರೆಯೇ ಎಂಬುದು ತಿಳಿದಿಲ್ಲ . ಆದರೆ ಹಾಗೆ ಮಾಡಲು ಯಾವುದಾದರೂ ಉದ್ದೇಶವಿದ್ದಿರಬಹುದು. ಅವರೆಲ್ಲರೂ ಬ್ರಾಹ್ಮಣರೇ. ಬ್ರಾಹ್ಮಣರು ಸಂಸ್ಕಾರವಂತರು. ಅವರನ್ನು ಮೂಲೆಗುಂಪು ಮಾಡುವುದು ಮತ್ತು ಶಿಕ್ಷಿಸುವುದು ಯಾರಾದ್ದಾದರೂ ಕೆಟ್ಟ ಉದ್ದೇಶವಾಗಿರಬಹುದು, ”ಎಂದು ಮೊಜೊ ಸ್ಟೋರಿಗೆ ನೀಡಿದ ಸಂದರ್ಶನದಲ್ಲಿ ರವುಲಜಿ ಹೇಳಿದ್ದಾರೆ.

ಸುಪ್ರೀಂಕೋರ್ಟ್ ಆದೇಶದ ಆಧಾರದ ಮೇಲೆ ನಾವು ಈ ನಿರ್ಧಾರ ಕೈಗೊಂಡಿದ್ದೇವೆ. ಅಪರಾಧಿಗಳ ಸ್ವಭಾವವನ್ನು ನೋಡಿ ಅವರನ್ನು ಬಿಡುಗಡೆಮಾಡಬಹುದೇ ಎಂಬುದನ್ನು ನಿರ್ಧರಿಸಿ ಎಂದು ನಮಗೆ ಹೇಳಲಾಗಿತ್ತು ಎಂದಿದ್ದಾರೆ ರವುಲಜಿ.

ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವಿಡಿಯೊ ತುಣುಕನ್ನು ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ನಾಯಕ ವೈ ಸತೀಶ್ ರೆಡ್ಡಿ ಹಂಚಿಕೊಂಡಿದ್ದಾರೆ. “ಬಿಜೆಪಿ ಈಗ ಅತ್ಯಾಚಾರಿಗಳನ್ನು ‘ಉತ್ತಮ ಸಂಸ್ಕಾರದ ಪುರುಷರು’ ಎಂದು ಕರೆಯುತ್ತದೆ. ಪಕ್ಷ ಅಷ್ಟೊಂದು ಕೀಳುಮಟ್ಟಕ್ಕೆ ಇಳಿದಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
Bilkis Bano: ಇನ್ನು ನಾನು ಅಸಹಾಯಕಿ; ಅಪರಾಧಿಗಳ ಬಿಡುಗಡೆ ಬಗ್ಗೆ ಅತ್ಯಾಚಾರ ಸಂತ್ರಸ್ತೆ ಬಿಲ್ಕಿಸ್ ಬಾನೊ ಪ್ರತಿಕ್ರಿಯೆ
Image
Bilkis Bano case ನಾರಿ ಶಕ್ತಿಯನ್ನು ಹೊಗಳಿದ ಪ್ರಧಾನಿಗೆ ತಮ್ಮ ಮಾತಿನಲ್ಲಿ ನಂಬಿಕೆ ಇದೆಯೇ?: ಕಾಂಗ್ರೆಸ್ ತರಾಟೆ
Image
Bilkis Bano case ಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣ: ಜೀವಾವಧಿ ಶಿಕ್ಷೆಗೊಳಗಾಗಿದ್ದ 11 ಅಪರಾಧಿಗಳ ಬಿಡುಗಡೆ

ಗೋದ್ರಾ ಕೋಮು ಗಲಭೆಯ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಅವರ ಮೇಲೆ ಅತ್ಯಾಚಾರ ಮತ್ತು ಅವರ ಕುಟುಂಬದ ಏಳು ಸದಸ್ಯರ ಹತ್ಯೆಗೆ ಸಂಬಂಧಿಸಿದಂತೆ 2002ಗಲ್ಲಿ ದಾಖಲಾದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಎಲ್ಲಾ 11 ಅಪರಾಧಿಗಳು ಗುಜರಾತ್‌ನ ಬಿಜೆಪಿ ಸರ್ಕಾರವು ಅವರನ್ನು ಬಿಡುಗಡೆ ಮಾಡಲು ಅನುಮತಿಸಿದ ನಂತರ ಈ ಅಪರಾಧಿಗಳು ಗೋದ್ರಾ ಸಬ್ ಜೈಲಿನಿಂದ 2022 ಆಗಸ್ಟ್ 15ರಂದು ಬಂಧಮುಕ್ತರಾಗಿದ್ದರು.

ಸ್ವಾತಂತ್ರ್ಯದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಿಂದ ಮಾಡಿದ ಭಾಷಣದಲ್ಲಿ ಮಹಿಳಾ ಸಬಲೀಕರಣದ ಕುರಿತು ಮಾತನಾಡಿದ ಕೆಲವೇ ಗಂಟೆಗಳ ನಂತರ ಈ ಅಪರಾಧಿಗಳ ಬಿಡುಗಡೆಯಾಗಿದೆ. ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯವು ಜನವರಿ 21, 2008 ರಂದು ಗಲಭೆಯಲ್ಲಿ ಬದುಕುಳಿದ ಬಿಲ್ಕಿಸ್ ಬಾವನ ಅವರ ಕುಟುಂಬದ ಏಳು ಸದಸ್ಯರನ್ನು ಹತ್ಯೆಗೈದ ಮತ್ತು ಆಕೆ ಮೇಲೆ ಸಾಮೂಹಿಕ ಅತ್ಯಾಚಾರದ ಪ್ರಕರಣದ ಎಲ್ಲಾ 11 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿತು. ನಂತರ ಅವರ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿ ಹಿಡಿಯಿತು.

ಈ ಅಪರಾಧಿಗಳು 15 ವರ್ಷಗಳಿಗಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದರು, ನಂತರ ಅವರಲ್ಲಿ ಒಬ್ಬರು ತನ್ನ ಅಕಾಲಿಕ ಬಿಡುಗಡೆಗಾಗಿ ಮನವಿಯೊಂದಿಗೆ ಸುಪ್ರೀಂಕೋರ್ಟ್ ಅನ್ನು ಸಂಪರ್ಕಿಸಿದರು. 1992ರ ನೀತಿಯಂತೆ ಆತನಿಗೆ ಶಿಕ್ಷೆ ವಿಧಿಸಿದ ದಿನಾಂಕದ ಆಧಾರದ ಮೇಲೆ ಆತನ ಶಿಕ್ಷೆಯ ವಿನಾಯತಿ ವಿಚಾರವನ್ನು ಪರಿಶೀಲಿಸುವಂತೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ಸೂಚಿಸಿತ್ತು. ಅದರ ನಂತರ, ಸರ್ಕಾರವು ಸಮಿತಿಯನ್ನು ರಚಿಸಿತು, ಅದು ಎಲ್ಲಾ ಅಪರಾಧಿಗಳ ಬಿಡುಗಡೆಗೆ ಅವಕಾಶ ನೀಡುವ ನಿರ್ಧಾರವನ್ನು ತೆಗೆದುಕೊಂಡಿತು.

ಗುಜರಾತ್ ಸರ್ಕಾರದ ನಿರ್ಧಾರವು ಕೇಂದ್ರದ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ವಿಪಕ್ಷಗಳು ಟೀಕಿಸಿವೆ.

Published On - 5:27 pm, Fri, 19 August 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!