Gujarat Bridge Collapse Case: 9 ಜನರನ್ನು ಬಂಧಿಸಿದ ಮೊರ್ಬಿ ಪೊಲೀಸರು
ಗುಜರಾತ್ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರನ್ನು ಬಂಧಿಸಲಾಗಿದೆ, ಘಟನೆಗೆ ಸಂಬಂಧಿಸಿದಂತೆ ಹೊಣೆಗಾರರ ವಿರುದ್ಧ ತಕ್ಷಣದಿಂದ ಜಾರಿಗೆ ಬರುವಂತೆ ಪ್ರಕರಣ ದಾಖಲಿಸಲಾಗಿದೆ
ಮೊರ್ಬಿ: ಗುಜರಾತ್ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರನ್ನು ಬಂಧಿಸಲಾಗಿದೆ, ಘಟನೆಗೆ ಸಂಬಂಧಿಸಿದಂತೆ ಹೊಣೆಗಾರರ ವಿರುದ್ಧ ತಕ್ಷಣದಿಂದ ಜಾರಿಗೆ ಬರುವಂತೆ ಪ್ರಕರಣ ದಾಖಲಿಸಲಾಗಿದೆ ಎಂದು ಮೊರ್ಬಿ ಪೊಲೀಸರು ತಿಳಿಸಿದ್ದಾರೆ.
ಗುಜರಾತ್‌ನ ಮೊರ್ಬಿ (Morbi) ಯದಲ್ಲಿ ಸಂಭವಿಸಿದ ಕೇಬಲ್ ಸೇತುವೆ ಕುಸಿತ (Cable bridge collapse) ದುರಂತದಲ್ಲಿ ಸಾವು-ನೋವಿನ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಮೃತರ ಸಂಖ್ಯೆ 90ರಿಂದ 141ಕ್ಕೆ ಏರಿಕೆಯಾಗಿದೆ. ಇನ್ನೂ ಹಲವರು ನದಿಯಲ್ಲಿ ಸಿಲುಕಿರುವ ಅನುಮಾನ ವ್ಯಕ್ತವಾಗಿದ್ದು, ಇವರ ಶೋಧಕಾರ್ಯ ಹಾಗೂ ರಕ್ಷಣಾ ಕಾರ್ಯ ಮುಂದುವರಿದೆ. ಸ್ಥಳದಲ್ಲಿ ಸೇನೆ, ಎಸ್ಡಿಆರ್ಎಫ್, ಎನ್ಡಿಆರ್ಎಫ್ ಬೀಡುಬಿಟ್ಟಿದೆ.
ಗುಜರಾತ್‌ನ ಮೊರ್ಬಿ ಜಿಲ್ಲೆಯ ಮಚ್ಚು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ತೂಗು ಸೇತುವೆ ಭಾನುವಾರ ಕುಸಿದು ಬಿದ್ದು ದೊಡ್ಡ ದುರಂತ ಸಂಭವಿಸಿದೆ. ಸೇತುವೆ ಮೇಲಿದ್ದ ಹಲವರು ನದಿಗೆ ಬಿದ್ದಿದ್ದಾರೆ. ವರದಿಗಳ ಪ್ರಕಾರ ಗುಜರಾತ್ ಸೇತುವೆ ದುರಂತದಲ್ಲಿ ಈವರೆಗೆ ಬಂದ ಮಾಹಿತಿ ಪ್ರಕಾರ 30 ಮಕ್ಕಳು ಸೇರಿದಂತೆ 90 ಜನರು ಸಾವನ್ನಪ್ಪಿದ್ದರು. ಇದೀಗ ಸಾವಿನ ಸಂಖ್ಯೆ 150ರ ಸಮೀಪ ತಲುಪಿದೆ.
ಮೋರ್ಬಿಯಲ್ಲಿರುವ ಕೇಬಲ್ ಸೇತುವೆಯು ಐತಿಹಾಸಿಕವಾದದ್ದು. ಕಳೆದ ವಾರ ಅದನ್ನು ನವೀಕರಿಸಲಾಗಿತ್ತು. ನವೀಕರಣದ ನಂತರ, ಅಕ್ಟೋಬರ್ 26 ರಂದು ಗುಜರಾತಿ ಹೊಸ ವರ್ಷದ ದಿನದಂದು ಅದನ್ನು ಸಾರ್ವಜನಿಕರ ಉಪಯೋಗಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಅಕ್ಟೋಬರ್ 30ರಂದು ಸಂಜೆ ಛಾತ್ ಪೂಜೆಯ ನಿಮಿತ್ತ ಕೆಲವು ವಿಧಿವಿಧಾನಗಳನ್ನು ನೆರವೇರಿಸಲು ಸೇತುವೆ ಮೇಲೆ ಬಹಳಷ್ಟು ಜನರು ಜಮಾಯಿಸಿದ್ದರು. ಕುಸಿದಾಗ ಸೇತುವೆ ಮೇಲೆ ಸುಮಾರು 500 ಜನರು ಇದ್ದರು ಎನ್ನಲಾಗಿದ್ದು, ಭಾರ ಹೆಚ್ಚಾಗಿದ್ದಕ್ಕೆ ಸೇತುವೆ ಕುಸಿದಿದೆ ಎಂದು ತಿಳಿದುಬಂದಿದೆ. ಅದಾಗ್ಯೂ ಘಟನೆಗೆ ನಿಖರ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನರನ್ನು ಬಂಧಿಸಿಲಾಗಿದೆ.
#GujaratBridgeCollapse | 9 people detained, case registered with immediate effect against those responsible in connection with the incident: Morbi Police pic.twitter.com/bFqTE9O8x2
— ANI (@ANI) October 31, 2022
Published On - 6:45 pm, Mon, 31 October 22