ಗುಜರಾತಿನ ಮೊರ್ಬಿ ಸೇತುವೆ ಕುಸಿತ ದೇವರ ಇಚ್ಛೆ ಆಗಿತ್ತು: ನ್ಯಾಯಾಲಯದಲ್ಲಿ ಒರೆವಾ ಕಂಪನಿಯ ಮ್ಯಾನೇಜರ್

150 ವರ್ಷಗಳಷ್ಟು ಹಳೆಯದಾದ ಸೇತುವೆಯ ನಿರ್ವಹಣೆಯ ಹೊಣೆ ಹೊತ್ತಿರುವ ಒರೆವಾ ಕಂಪನಿಯ ಮ್ಯಾನೇಜರ್ ದೀಪಕ್ ಪರೇಖ್ ಈ ಹೇಳಿಕೆ ನೀಡಿದ್ದಾರೆ.

ಗುಜರಾತಿನ ಮೊರ್ಬಿ ಸೇತುವೆ ಕುಸಿತ ದೇವರ ಇಚ್ಛೆ ಆಗಿತ್ತು: ನ್ಯಾಯಾಲಯದಲ್ಲಿ ಒರೆವಾ ಕಂಪನಿಯ ಮ್ಯಾನೇಜರ್
Deepak Parekh
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Nov 02, 2022 | 4:27 PM

ಮೊರ್ಬಿ: ಗುಜರಾತಿನ ಮೊರ್ಬಿ ಸೇತುವೆ ಕುಸಿತ (Gujarat Bridge Collapse) ದುರಂತದಲ್ಲಿ 135 ಜನರ ಸಾವಿಗೆ ಕಾರಣವಾದ ಆರೋಪಿಗಳಲ್ಲಿ ಒಬ್ಬರು ಈ ಘಟನೆ ನಡೆದಿರುವುದು “ದೇವರ ಇಚ್ಛೆ” ಎಂದು ನ್ಯಾಯಾಲಯದಲ್ಲಿ ಹೇಳಿದ್ದಾರೆ. 150 ವರ್ಷಗಳಷ್ಟು ಹಳೆಯದಾದ ಸೇತುವೆಯ ನಿರ್ವಹಣೆಯ ಹೊಣೆ ಹೊತ್ತಿರುವ ಒರೆವಾ ಕಂಪನಿಯ(Oreva company) ಮ್ಯಾನೇಜರ್ ದೀಪಕ್ ಪರೇಖ್ ಈ ಹೇಳಿಕೆ ನೀಡಿದ್ದಾರೆ. ಭಾನುವಾರ ಗುಜರಾತಿನಲ್ಲಿ ತೂಗು ಸೇತುವೆ ದುರಂತದನಂತರ ಬಂಧಿಸಲಾದ ಒಂಬತ್ತು ಜನರಲ್ಲಿ ಪರೇಖ್ ಕೂಡ ಒಬ್ಬರು. “ಭಗವಾನ್ ಕಿ ಇಚ್ಚಾ (ದೇವರ ಇಚ್ಛೆ) ಯಿಂದಾಗಿ ದುರದೃಷ್ಟಕರ ಘಟನೆ ಸಂಭವಿಸಿದೆ” ಎಂದು ಅವರು ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಎಂಜೆ ಖಾನ್ ಅವರಲ್ಲಿ ಹೇಳಿದ್ದಾರೆ.ಸೇತುವೆಯ ಕೇಬಲ್ ತುಕ್ಕು ಹಿಡಿದಿದ್ದು,ಸೇತುವೆಯ ನವೀಕರಣ ಕಾರ್ಯ ಕೈಗೆತ್ತಿಕೊಂಡ ಕಂಪನಿಯು ಅದನ್ನು ಬದಲಾಯಿಸಿಲ್ಲ ಎಂದು ಮೊರ್ಬಿ ಉಪ ಪೊಲೀಸ್ ವರಿಷ್ಠಾಧಿಕಾರಿ ಪಿಎ ಝಲಾ ನ್ಯಾಯಾಲಯಕ್ಕೆ ತಿಳಿಸಿದರು. ಅಕ್ಟೋಬರ್ 26 ರಂದು ಸರ್ಕಾರದ ಅನುಮೋದನೆ ಅಥವಾ ಗುಣಮಟ್ಟ ಪರೀಕ್ಷೆ ಇಲ್ಲದೆ ಸೇತುವೆಯನ್ನು ಸಾರ್ವಜನಿಕರಿಗೆ ತೆರೆಯಲಾಯಿತು. “ನಿರ್ವಹಣೆ ಮತ್ತು ದುರಸ್ತಿ ಭಾಗವಾಗಿ, ಪ್ಲಾಟ್‌ಫಾರ್ಮ್ ಅನ್ನು ಮಾತ್ರ ಬದಲಾಯಿಸಲಾಗಿದೆ, ಸೇತುವೆಯು ಕೇಬಲ್‌ನಲ್ಲಿದೆ ಮತ್ತು ಕೇಬಲ್‌ಗೆ ಎಣ್ಣೆ ಹಾಕುವುದು ಅಥವಾ ಗ್ರೀಸ್ ಹಾಕುವ ಯಾವುದೇ ಕೆಲಸ ಮಾಡಿಲ್ಲ.ಕೇಬಲ್ ತುಂಡಾಗಿದ, ತುಕ್ಕು ಹಿಡಿದಿದೆ.ಕೇಬಲ್ ದುರಸ್ತಿ ಮಾಡಿದ್ದರೆ ಈ ಘಟನೆ ಸಂಭವಿಸುತ್ತಿರಲಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದರು.

ಸೇತುವೆ ದುರಸ್ತಿ ಮಾಡಿದ ಗುತ್ತಿಗೆದಾರರು ಸಾರ್ವಜನಿಕ ಮೂಲಸೌಕರ್ಯ ನಿರ್ವಹಣೆಗೆ ಅರ್ಹರಲ್ಲ ಎಂದು ಪ್ರಾಸಿಕ್ಯೂಟರ್ ನ್ಯಾಯಾಧೀಶರಿಗೆ ತಿಳಿಸಿದರು.ಅದರ ಹೊರತಾಗಿಯೂ, ಈ ಗುತ್ತಿಗೆದಾರರಿಗೆ 2007 ರಲ್ಲಿ ಮತ್ತು ನಂತರ 2022 ರಲ್ಲಿ ಸೇತುವೆಯ ದುರಸ್ತಿ ಕಾರ್ಯವನ್ನು ನೀಡಲಾಯಿತು ಎಂದು ಪ್ರಾಸಿಕ್ಯೂಟರ್ ಹೇಳಿದರು. ಕೇಬಲ್‌ಗಳನ್ನು ಬದಲಾಯಿಸದ ಕಾರಣ, ಹೊಸ ಫ್ಲೋರಿಂಗ್‌ನ ತೂಕವನ್ನು ತೆಗೆದುಕೊಳ್ಳಲು ಸಾಧ್ಯವಾಗದೆ ಅವು ಕಿತ್ತುಹೋಗಿವೆ. ನಾಲ್ಕು ಪದರಗಳ ಅಲ್ಯೂಮಿನಿಯಂ ಶೀಟ್‌ಗಳನ್ನು ಫ್ಲೋರಿಂಗ್‌ನಲ್ಲಿ ಬಳಸಿದ್ದರಿಂದ ಸೇತುವೆಯ ತೂಕ ಹೆಚ್ಚಾಗಿದೆ.

ನವೀಕೃತ ಸೇತುವೆಯು ಕನಿಷ್ಠ ಎಂಟರಿಂದ ಹತ್ತು ವರ್ಷಗಳ ಕಾಲ ಉಳಿಯುತ್ತದೆ ಎಂದು ಸಾರ್ವಜನಿಕವಾಗಿ ಹೇಳಿಕೊಂಡಿದ್ದ ಒರೆವಾದ ವ್ಯವಸ್ಥಾಪಕ ನಿರ್ದೇಶಕ ಜಯಸುಖಭಾಯಿ ಪಟೇಲ್ ದುರಂತದ ನಂತರ ಕಾಣಿಸಿಕೊಂಡಿಲ್ಲ ಎಂದು ಸ್ಥಳೀಯರು ಎನ್‌ಡಿಟಿವಿಗೆ ತಿಳಿಸಿದ್ದಾರೆ. ಪಟೇಲ್ ಅವರು ತಮ್ಮ ಕುಟುಂಬದೊಂದಿಗೆ ಸೇತುವೆಯ ಪುನರಾರಂಭ ಸಮಯದಲ್ಲಿ ಕೊನೆಯ ಬಾರಿಗೆ ಕಾಣಿಸಿಕೊಂಡರು. ಅಹಮದಾಬಾದ್‌ನಲ್ಲಿರುವ ಒರೆವಾ ಕಂಪನಿಯ ಫಾರ್ಮ್‌ಹೌಸ್‌ಗೆ ಬೀಗ ಹಾಕಲಾಗಿದೆ. ಪೊಲೀಸ್ ಎಫ್‌ಐಆರ್‌ನಲ್ಲಿ ಒರೆವಾದ ಉನ್ನತ ಮೇಲಧಿಕಾರಿಗಳು ಅಥವಾ ಕಂಪನಿಗೆ ಗುತ್ತಿಗೆ ನೀಡಿದ ಮೊರ್ಬಿ ಪುರಸಭೆಯ ಅಧಿಕಾರಿಗಳನ್ನು ಉಲ್ಲೇಖಿಸಿಲ್ಲ.

ಒರೆವಾ ಗ್ರೂಪ್‌ನ ಮತ್ತೊಬ್ಬ ಮ್ಯಾನೇಜರ್ ದೀಪಕ್ ಪರೇಖ್ ಮತ್ತು ಸೇತುವೆಯನ್ನು ದುರಸ್ತಿ ಮಾಡಿದ ಇಬ್ಬರು ಉಪ ಗುತ್ತಿಗೆದಾರರನ್ನು ಶನಿವಾರದವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ಭದ್ರತಾ ಸಿಬ್ಬಂದಿ ಮತ್ತು ಟಿಕೆಟ್ ಬುಕ್ಕಿಂಗ್ ಕ್ಲರ್ಕ್ ಸೇರಿದಂತೆ ಐವರು ಬಂಧಿತರು ನ್ಯಾಯಾಂಗ ಬಂಧನದಲ್ಲಿದ್ದಾರೆ.

Published On - 4:15 pm, Wed, 2 November 22

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ