ಗುಜರಾತ್‌ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಡಂಪರ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ ಬೆಳಗ್ಗೆ 6 ಗಂಟೆ ಸುಮಾರಿಗೆ ತ್ರಪಾಜ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಪಟೇಲ್ ತಿಳಿಸಿದ್ದಾರೆ.
ಬಸ್ ಹಿಂದಿನಿಂದ ಡಂಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಎಂಟರಿಂದ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಬಲಭಾಗದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರು-ಲಾರಿ ಮುಖಾಮುಖಿ ಡಿಕ್ಕಿ, 6 ಮಂದಿ ಸಾವು, 7 ಜನರಿಗೆ ಗಾಯ
ಛತ್ತೀಸ್‌ಗಢದ ಬಲೋದ್ ಜಿಲ್ಲೆಯಲ್ಲಿ ರಾಂಗ್ ಸೈಡ್‌ನಿಂದ ಬಂದ ಟ್ರಕ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ, 7 ಜನರು ಗಾಯಗೊಂಡಿದ್ದಾರೆ. ದೊಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಭಾನುಪ್ರತಾಪುರ-ದಳ್ಳಿರಾಜರ ರಸ್ತೆಯ ಚೌರಪವಾಡ ಬಳಿ ಮುಂಜಾನೆ ಅಪಘಾತ ಸಂಭವಿಸಿದೆ.
ಮಾಹಿತಿ ಪ್ರಕಾರ, ಎದುರಿನಿಂದ ಬರುತ್ತಿದ್ದ ಕಾರಿಗೆ ಟ್ರಕ್ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ರಾಜನಂದಗಾಂವ್ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಗಿದೆ. ಅಪಘಾತದ ಬಗ್ಗೆ ವಿವರಗಳನ್ನು ಒದಗಿಸಿದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅಶೋಕ್ ಜೋಶಿ, ಆರೋಪಿ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಮತ್ತು ಆತನ ಶೋಧ ಮುಂದುವರೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ತೀವ್ರವಾಗಿ ಜಖಂಗೊಂಡಿದೆ. ಅಪಘಾತ ಸಂಭವಿಸಿದ ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಸ್ಥಳೀಯರ ನೆರವಿನಿಂದ ಗಂಟೆಗಟ್ಟಲೆ ಪ್ರಯತ್ನದ ಬಳಿಕ ಕಾರಿನಲ್ಲಿ ಸಿಲುಕಿದ್ದವರನ್ನು ಹೊರ ತೆಗೆಯಲಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:40 pm, Tue, 17 December 24