70 ವರ್ಷದ ವ್ಯಕ್ತಿಯಿಂದ ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ

ಸಂಬಂಧಗಳ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಘಟನೆಯೊಂದು ಜಿಲ್ಲೆಯ ಲುನಾವಾಡ ಪಟ್ಟಣದಲ್ಲಿ ವರದಿಯಾಗಿದೆ. 26 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಆಕೆಯ 70 ವರ್ಷದ ಸಂಬಂಧಿಕನೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿಯು ಸಂತ್ರಸ್ತೆಯ ನೆರೆಮನೆಯವನಾಗಿದ್ದು, ಸಂಬಂಧದಲ್ಲಿ ಚಿಕ್ಕಪ್ಪ ಅಥವಾ ದೊಡ್ಡಪ್ಪನಾಗಬೇಕಿತ್ತು.

70 ವರ್ಷದ ವ್ಯಕ್ತಿಯಿಂದ  ಮಾನಸಿಕ ಅಸ್ವಸ್ಥೆಯ ಮೇಲೆ ಅತ್ಯಾಚಾರ
ಕ್ರೈಂ
Image Credit source: Shutterstock

Updated on: Apr 26, 2026 | 8:25 AM

ಮಹಿಸಾಗರ್, ಏಪ್ರಿಲ್ 26: ಸಂಬಂಧಗಳ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಘಟನೆಯೊಂದು ಜಿಲ್ಲೆಯ ಲುನಾವಾಡ ಪಟ್ಟಣದಲ್ಲಿ ವರದಿಯಾಗಿದೆ. 26 ವರ್ಷದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಆಕೆಯ 70 ವರ್ಷದ ಸಂಬಂಧಿಕನೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಆತನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಪೊಲೀಸರ ಮಾಹಿತಿಯ ಪ್ರಕಾರ, ಆರೋಪಿಯು ಸಂತ್ರಸ್ತೆಯ ನೆರೆಮನೆಯವನಾಗಿದ್ದು, ಸಂಬಂಧದಲ್ಲಿ ಚಿಕ್ಕಪ್ಪ ಅಥವಾ ದೊಡ್ಡಪ್ಪನಾಗಬೇಕಿತ್ತು. ಘಟನೆ ನಡೆದ ದಿನ ಮಹಿಳೆ ಮನೆಯಲ್ಲಿ ಒಬ್ಬಂಟಿಯಾಗಿರುವುದನ್ನು ಗಮನಿಸಿದ ಆರೋಪಿ, ತನ್ನ ಪತ್ನಿಯನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾನೆ. ನಂತರ ಆಕೆಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆತಂದು, ಬಾಗಿಲು ಲಾಕ್ ಮಾಡಿ ಮೃಗೀಯವಾಗಿ ವರ್ತಿಸಿದ್ದಾನೆ.

ದೌರ್ಜನ್ಯದ ನಂತರ ಈ ವಿಷಯವನ್ನು ಯಾರಿಗೂ ತಿಳಿಸದಂತೆ ಆರೋಪಿ ಸಂತ್ರಸ್ತೆಗೆ ಜೀವ ಬೆದರಿಕೆ ಹಾಕಿದ್ದಾನೆ. ಆದರೆ, ಸಂತ್ರಸ್ತ ಮಹಿಳೆ ಧೈರ್ಯಗುಂದದೆ ನಡೆದ ಅನ್ಯಾಯವನ್ನು ತನ್ನ ತಾಯಿಗೆ ತಿಳಿಸಿದ್ದಾರೆ. ಮಗಳ ಸ್ಥಿತಿಯನ್ನು ಕಂಡು ಮರುಗಿದ ತಾಯಿ ಕೂಡಲೇ ಲುನಾವಾಡ ಪೊಲೀಸ್ ಠಾಣೆಗೆ ಧಾವಿಸಿ ದೂರು ದಾಖಲಿಸಿದ್ದಾರೆ.

ಮತ್ತಷ್ಟು ಓದಿ: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ: ಪ್ರಕರಣ ಮುಚ್ಚಿ ಹಾಕಲು ನಡೆದಿತ್ತಾ ಸಂಚು?

ದೂರು ದಾಖಲಾದ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, 70 ವರ್ಷದ ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಅಂಗವಿಕಲ ವ್ಯಕ್ತಿಗಳ ಮೇಲಿನ ಅಪರಾಧಗಳು ಮತ್ತು ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಕಠಿಣ ಕಾನೂನು ವಿಭಾಗಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಮನೆಯ ಹತ್ತಿರವೇ ಇರುವ ವಯಸ್ಸಾದ ಸಂಬಂಧಿಯೇ ಇಂತಹ ವಿಕೃತ ಕೃತ್ಯವೆಸಗಿರುವುದು ಸ್ಥಳೀಯ ಸಮುದಾಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. “ವಯಸ್ಸಾದವರು ಮಕ್ಕಳಿಗೆ ಮತ್ತು ಅಬಲರಿಗೆ ರಕ್ಷಣೆ ನೀಡಬೇಕು, ಆದರೆ ಇಲ್ಲಿ ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ” ಎಂದು ಜನರು ಕಿಡಿಕಾರಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us