Gujarat CM Resigns: ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ
Vijay Rupani resigned: ಮುಂದಿನ ವರ್ಷವೇ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಜಯ್ ರೂಪಾನಿ ನಡೆ ಅಚ್ಚರಿ ಮೂಡಿಸಿದೆ. ಬಿ.ಎಲ್.ಸಂತೋಷ್ ಗುಜರಾತ್ನ ರಾಜಭವನದಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಗಾಂಧಿನಗರ: ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ಘೋಷಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್ ರೂಪಾನಿ ದಿಢೀರ್ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಐದು ವರ್ಷ ಮುಖ್ಯಮಂತ್ರಿ ಆಗಿದ್ದ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದಾರೆ. ಮುಂದಿನ ವರ್ಷವೇ ಗುಜರಾತ್ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ವಿಜಯ್ ರೂಪಾನಿ ನಡೆ ಅಚ್ಚರಿ ಮೂಡಿಸಿದೆ. ಬಿ.ಎಲ್.ಸಂತೋಷ್ ಗುಜರಾತ್ನ ರಾಜಭವನದಲ್ಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ವಿಜಯ್ ರೂಪಾನಿ ರಾಜೀನಾಮೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈವರೆಗೆ ಅವಕಾಶ ನೀಡಿದ ಪ್ರಧಾನಿ ಮೋದಿಗೆ ಧನ್ಯವಾದ. ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸಲು ಬದ್ಧ. ಪಕ್ಷದ ನಿರ್ಧಾರದ ಕುರಿತು ಯಾವುದೇ ಗೊಂದಲವಿಲ್ಲ. ಮುಂದಿನ ಚುನಾವಣೆಯಲ್ಲಿ ಮೋದಿ ಹೆಸರಲ್ಲಿ ಮತಯಾಚನೆ ಮಾಡುತ್ತೇವೆ. ಮುಂದಿನ ಮುಖ್ಯಮಂತ್ರಿಯನ್ನ ಪಕ್ಷ ನಿರ್ಧಾರ ಮಾಡುತ್ತದೆ. ನನಗೆ ನೀಡಿದ್ದ ಜವಾಬ್ದಾರಿ ಸಮರ್ಥವಾಗಿ ನಿಭಾಯಿಸಿದ್ದೇನೆ. ನನ್ನ ರಾಜೀನಾಮೆಯಲ್ಲಿ ಯಾವುದೇ ರೀತಿ ಗೊಂದಲ ಇಲ್ಲ ಎಂದು ತಿಳಿಸಿದ್ದಾರೆ.
ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ಹಿನ್ನೆಲೆಯಲ್ಲಿ, ನಾಳೆ ಮಧ್ಯಾಹ್ನ ಗಾಂಧಿನಗರದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನಾಳೆಯೇ ನೂತನ ಸಿಎಂ ಆಯ್ಕೆ ಮಾಡಲು ಬಿಎಲ್ಪಿ ಸಭೆ ಎಂದು ಹೇಳಲಾಗುತ್ತಿದೆ. ಈ ಮಧ್ಯೆ, ಕರ್ನಾಟಕವೂ ಸಹಿತ ಹಲವು ರಾಜ್ಯಗಳಲ್ಲಿ ಬಿಜೆಪಿ ಅನುಸರಿಸಿರುವ ಮುಖ್ಯಮಂತ್ರಿ ಬದಲಾವಣೆ ತಂತ್ರ ಗುಜರಾತ್ನಲ್ಲೂ ನಡೆದಿದೆ ಎಂದು ಹೇಳಲಾಗುತ್ತಿದೆ. ವಿಧಾನಸಭಾ ಚುನಾವಣೆಗೆ ಇನ್ನು ಒಂದೇ ವರ್ಷ ಬಾಕಿ ಉಳಿದಿರುವಂತೆ ಮುಖ್ಯಮಂತ್ರಿ ಬದಲಾವಣೆಗೆ ಬಿಜೆಪಿ ಮುಂದಾಗಿದೆ.
ಉತ್ತರಾಖಂಡ್, ಕರ್ನಾಟಕದ ಬಳಿಕ ಗುಜರಾತ್ನಲ್ಲಿ ಇಂತಹ ಬೆಳವಣಿಗೆ ಕಂಡುಬಂದಿದೆ. ಬಿಜೆಪಿ ಹೈಕಮಾಂಡ್ ದಿಢೀರ್ ರಾಜಕೀಯ ಸಂಚಲನ ಸೃಷ್ಟಿಸುತ್ತಿದೆ. ಅವಧಿಗೆ ಮುನ್ನವೇ ಬಿಜೆಪಿ ವರಿಷ್ಠರು ವಿಜಯ್ ರೂಪಾನಿಯಿಂದ ರಾಜೀನಾಮೆ ಕೊಡಿಸಿದ್ದಾರೆ. ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ನೀಡಿದ್ದು, ಮುಂದೆ ಬಹುಸಂಖ್ಯಾತ ಪಾಟೀದಾರ್ ಸಮುದಾಯಕ್ಕೆ ಸಿಎಂ ಸ್ಥಾನ ಸಿಗಬಹುದು ಎಂದು ಹೇಳಲಾಗುತ್ತಿದೆ. ಪಾಟೀದಾರ್ ಸಮುದಾಯ ಓಲೈಸಲು ಬಿಜೆಪಿ ಮುಂದಾಗಿದೆ ಎನ್ನಲಾಗುತ್ತಿದೆ.
ಯಾರಾಗಲಿದ್ದಾರೆ ಮುಂದಿನ ಮುಖ್ಯಮಂತ್ರಿ? ಜಾತಿ ಲೆಕ್ಕಾಚಾರ, ಸಮುದಾಯದ ನಾಯಕತ್ವ ಅಥವಾ ಓಲೈಕೆ, ಚುನಾವಣೆ ಗೆಲ್ಲುವ ತಂತ್ರದ ಭಾಗವಾಗಿ ಈ ಮುಖ್ಯಮಂತ್ರಿ ಬದಲಾವಣೆ ನಡೆದಿದೆ ಎಂದೇ ಅಭಿಪ್ರಾಯಗಳು ಕೇಳಿಬರುತ್ತಿವೆ. ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂದು ಕೂಡ ಹೆಸರುಗಳು ಮುನ್ನೆಲೆಗೆ ಬಂದಿದೆ. ಗುಜರಾತ್ ಸಿಎಂ ವಿಜಯ್ ರೂಪಾನಿ ರಾಜೀನಾಮೆ ನೀಡಿರುವ ಬೆನ್ನಲ್ಲಿ ಗುಜರಾತ್ ಸಿಎಂ ರೇಸ್ನಲ್ಲಿ ಎರಡು ಹೆಸರು ಮುಂಚೂಣಿಗೆ ಬಂದಿದೆ. ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯಾ, ಪುರುಷೋತ್ತಮ್ ರೂಪಾಲ ಹಾಗೂ ಆರ್ಸಿ ಫಾಲ್ಡು ಹೆಸರುಗಳು ಗುಜರಾತ್ ಸಿಎಂ ರೇಸ್ನಲ್ಲಿ ಕೇಳಿಬಂದಿದೆ.
ಇದನ್ನೂ ಓದಿ: Vijay Rupani: ವೇದಿಕೆ ಮೇಲೆ ಭಾಷಣ ಮಾಡುವ ವೇಳೆ ಕುಸಿದುಬಿದ್ದ ಗುಜರಾತ್ ಸಿಎಂ ವಿಜಯ್ ರೂಪಾನಿ
ಇದನ್ನೂ ಓದಿ: ‘ಹಿಂದು ಹುಡುಗಿಯರ ತಂಟೆಗೆ ಬರುವವರನ್ನು ಸುಮ್ಮನೆ ಬಿಡೋದಿಲ್ಲ’-ಗುಜರಾತ್ ಸಿಎಂ ಎಚ್ಚರಿಕೆ
Published On - 3:20 pm, Sat, 11 September 21