ಶ್ರೀರಾಮ ಆರಾಧ್ಯ ದೈವ, ಕಾಂಗ್ರೆಸ್​ ಇಂತಹ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು: ಕಾಂಗ್ರೆಸ್​ ನಾಯಕ ಅರ್ಜುನ್ ಮೊಧ್ವಾಡಿಯಾ

ಶ್ರೀರಾಮ ಎಲ್ಲರ ಆರಾಧ್ಯ ದೈವ, ಕಾಂಗ್ರೆಸ್​ ಇಂತಹ ರಾಜಕೀಯ ನಿರ್ಧಾರಗಳನ್ನು ಎಂದೂ ತೆಗೆದುಕೊಳ್ಳಬಾರದು ಎಂದು ಕಾಂಗ್ರೆಸ್​ ನಾಯಕ ಅರ್ಜುನ್ ಮೊದ್ವಾಡಿಯಾ ಹೇಳಿದ್ದಾರೆ. ಶ್ರೀರಾಮ ಮಂದಿರದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀರಾಮ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಿಂದ ಹಲವು ಕಾಂಗ್ರೆಸ್​ ನಾಯಕರು ಹಿಂದೆ ಸರಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜುನ್ ಈ ಹೇಳಿಕೆ ನೀಡಿದ್ದಾರೆ.

ಶ್ರೀರಾಮ ಆರಾಧ್ಯ ದೈವ, ಕಾಂಗ್ರೆಸ್​ ಇಂತಹ ರಾಜಕೀಯ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು: ಕಾಂಗ್ರೆಸ್​ ನಾಯಕ ಅರ್ಜುನ್ ಮೊಧ್ವಾಡಿಯಾ
ಅರ್ಜುನ್ ಮೊಧ್ವಾಡಿಯಾ
Follow us
ನಯನಾ ರಾಜೀವ್
|

Updated on: Jan 11, 2024 | 9:30 AM

ಶ್ರೀರಾಮ ಎಲ್ಲರ ಆರಾಧ್ಯ ದೈವ, ಕಾಂಗ್ರೆಸ್​ ಇಂತಹ ರಾಜಕೀಯ ನಿರ್ಧಾರಗಳನ್ನು ಎಂದೂ ತೆಗೆದುಕೊಳ್ಳಬಾರದು ಎಂದು ಕಾಂಗ್ರೆಸ್​ ನಾಯಕ ಅರ್ಜುನ್ ಮೊಧ್ವಾಡಿಯಾ(Arjun Modhwadia) ಹೇಳಿದ್ದಾರೆ. ಶ್ರೀರಾಮ ಮಂದಿರ(Ram Mandir)ದಲ್ಲಿ ಜನವರಿ 22ರಂದು ನಡೆಯಲಿರುವ ಶ್ರೀರಾಮ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಿಂದ ಹಲವು ಕಾಂಗ್ರೆಸ್​ ನಾಯಕರು ಹಿಂದೆ ಸರಿದಿದ್ದಾರೆ. ಈ ಹಿನ್ನೆಲೆಯಲ್ಲಿ ಅರ್ಜುನ್ ಈ ಹೇಳಿಕೆ ನೀಡಿದ್ದಾರೆ.

ರಾಮಮಂದಿರದ ಬಗ್ಗೆ ಕಾಂಗ್ರೆಸ್ ತೆಗೆದುಕೊಂಡಿರುವ ನಿಲುವಿನ ಬಗ್ಗೆ ಅಸಮ್ಮತಿ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಅರ್ಜುನ್ ಮೊಧ್ವಾಡಿಯಾ ಅವರು ಗುಜರಾತ್‌ನಲ್ಲಿ ಪಕ್ಷದ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಪ್ರಸ್ತುತ ಅವರು ಪೋರಬಂದರ್‌ನ ಶಾಸಕರೂ ಆಗಿದ್ದಾರೆ.

ಕಾಂಗ್ರೆಸ್ ನೀಡಿರುವ ಹೇಳಿಕೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಅವರು, ಇಂತಹ ರಾಜಕೀಯ ನಿರ್ಧಾರಗಳಿಂದ ದೂರವಿರಿ ಎಂದು ಕಾಂಗ್ರೆಸ್‌ಗೆ ಸಲಹೆ ನೀಡಿದ್ದಾರೆ.

ಮತ್ತಷ್ಟು ಓದಿ: ಅಯೋಧ್ಯೆ ರಾಮ ಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಎಲ್​ಕೆ ಅಡ್ವಾಣಿ

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಿಂದ ಅಂತರ ಕಾಯ್ದುಕೊಳ್ಳುವುದಾಗಿ ಘೋಷಿಸಿದ್ದರು.

ಕಾಂಗ್ರೆಸ್‌ನ ಈ ನಿರ್ಧಾರದಿಂದ ಬಿಜೆಪಿ ದಾಳಿ ನಡೆಸುತ್ತಿದೆ. ಇದಾದ ಬಳಿಕ ಕಾಂಗ್ರೆಸ್ ನಾಯಕರೂ ಪಕ್ಷದ ಈ ನಿರ್ಧಾರಕ್ಕೆ ಅಸಮ್ಮತಿ ವ್ಯಕ್ತಪಡಿಸುತ್ತಿದ್ದಾರೆ. ಕೋಟ್ಯಂತರ ಭಾರತೀಯರು ರಾಮನನ್ನು ಪೂಜಿಸುತ್ತಾರೆ, ಧರ್ಮವು ಮನುಷ್ಯನ ವೈಯಕ್ತಿಕ ವಿಷಯವಾಗಿದೆ, ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ರಾಮಮಂದಿರವನ್ನು ವರ್ಷಗಳಿಂದ ರಾಜಕೀಯ ವಿಷಯವನ್ನಾಗಿ ಮಾಡಿದೆ.

ಅರ್ಧದಷ್ಟು ನಿರ್ಮಾಣವಾಗಿರುವ ಮಂದಿರವನ್ನು ಉದ್ಘಾಟನೆ ಮಾಡುತ್ತಿರುವುದು ಸ್ಪಷ್ಟವಾಗಿದೆ ಎಂದು ಕಾಂಗ್ರೆಸ್ ಹೇಳಿಕೆಯಲ್ಲಿ ತಿಳಿಸಿದೆ. ಕೇವಲ ಚುನಾವಣಾ ಲಾಭ ಪಡೆಯಲು ರಾಮಮಂದಿರ ಕಾರ್ಯಕ್ರಮ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಕಾರ್ಯಕ್ರಮ ಎಂದು ಈ ಸಮಾರಂಭದಲ್ಲಿ ಭಾಗವಹಿಸುತ್ತಿಲ್ಲ ಎಂದು ಕಾಂಗ್ರೆಸ್‌ ವಾದಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು