Jammu And Kashmir: ಝಡ್​ಪ್ಲಸ್​ ಭದ್ರತೆ, ಪಂಚತಾರ ಹೋಟೆಲ್​ನಲ್ಲಿ ವಸತಿ, ಮನಬಂದಂತೆ ಟ್ರಿಪ್: ನಕಲಿ PMO ಅಧಿಕಾರಿ ಬಂಧನ

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿ ಎಂದು ಹೇಳಿಕೊಂಡು ತಿರುಗುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

Jammu And Kashmir: ಝಡ್​ಪ್ಲಸ್​ ಭದ್ರತೆ, ಪಂಚತಾರ ಹೋಟೆಲ್​ನಲ್ಲಿ ವಸತಿ, ಮನಬಂದಂತೆ ಟ್ರಿಪ್: ನಕಲಿ PMO ಅಧಿಕಾರಿ ಬಂಧನ
ಕಿರಣ್
Follow us
ನಯನಾ ರಾಜೀವ್
|

Updated on: Mar 17, 2023 | 9:36 AM

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿ ಎಂದು ಹೇಳಿಕೊಂಡು ತಿರುಗುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುಜರಾತ್​ನಲ್ಲಿ ನೆಲೆಸಿರುವ ಈ ವ್ಯಕ್ತಿಯ ಹೆಸರು ಕಿರಣ್ ಭಾಯ್ ಪಟೇಲ್ ಪಿಎಂಒ ಹೆಚ್ಚುವರಿ ನಿರ್ದೇಶಕ ಎಂದು ಹೇಳಿಕೊಂಡು ಜನರನ್ನು ಯಾಮಾರಿಸುತ್ತಿದ್ದರು. ಅಷ್ಟೇ ಅಲ್ಲ, ಝಡ್ ಪ್ಲಸ್ ಭದ್ರತೆ, ಬುಲೆಟ್ ಪ್ರೂಫ್ ಎಸ್ ಯುವಿ ಸೌಲಭ್ಯಗಳನ್ನೂ ಇವರು ಹೊಂದಿದ್ದರು. ಯಾವಾಗಲೂ ಪಂಚತಾರಾ ಹೋಟೆಲ್‌ಗಳಲ್ಲಿ ತಂಗುತ್ತಿದ್ದರು. ಅನುಮಾನಗೊಂಡು ಪೊಲೀಸರು ತನಿಖೆ ನಡೆಸಿದಾಗ ಆತ ನಕಲಿ ಅಧಿಕಾರಿ ಎಂದು ತಿಳಿದು ಬಂದಿದೆ. ಅವರನ್ನು 10 ದಿನಗಳ ಹಿಂದೆ ಬಂಧಿಸಲಾಗಿತ್ತು, ಆದರೆ ಅದನ್ನು ರಹಸ್ಯವಾಗಿಡಲಾಗಿತ್ತು. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಗುರುವಾರ ಬಂಧನವನ್ನು ಬಹಿರಂಗಪಡಿಸಿದ್ದಾರೆ.

ವರ್ಜೀನಿಯಾದ ಕಾಮನ್‌ವೆಲ್ತ್ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ, ಐಐಎಂ ತಿರುಚ್ಚಿಯಿಂದ ಎಂಬಿಎ, ಹಾಗೆಯೇ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಟೆಕ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್‌ನಲ್ಲಿ ಬಿಇ ಹೊಂದಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಆದರೆ, ಪೊಲೀಸರು ಅವರ ಪದವಿಯ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಕಿರಣ್ ಪಟೇಲ್ ಅವರು ಫೆಬ್ರವರಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ತಮ್ಮ ಮೊದಲ ಭೇಟಿ ನೀಡಿದರು.

ಮತ್ತಷ್ಟು ಓದಿ: ನೂತನ ಸಿಡಿಎಸ್ ಅನಿಲ್ ಚೌಹಾಣ್​​ಗೆ ಝೆಡ್ ಪ್ಲಸ್ ಭದ್ರತೆ

ಈ ಸಂದರ್ಭದಲ್ಲಿ ಅವರು ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡರು. ಜಮ್ಮು ಮತ್ತು ಕಾಶ್ಮೀರ ಪ್ರವಾಸದ ಹಲವು ವಿಡಿಯೋಗಳನ್ನು ತನ್ನ ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಅವರೊಂದಿಗೆ ಸಿಆರ್‌ಪಿಎಫ್‌ ಯೋಧರೂ ಇದ್ದಾರೆ. ಕಿರಣ್ ಪಟೇಲ್ ಗುಜರಾತ್‌ನಿಂದ ಹೆಚ್ಚಿನ ಪ್ರವಾಸಿಗರನ್ನು ಕರೆತರುವ ಮಾರ್ಗಗಳ ಕುರಿತು ಅಧಿಕಾರಿಗಳೊಂದಿಗೆ ಸಭೆಗಳನ್ನು ನಡೆಸಿದ್ದರು ಎಂದು ಎನ್‌ಡಿಟಿವಿ ವರದಿ ಮಾಡಿದೆ.

ದೂಧಪತ್ರಿಯನ್ನು ಪ್ರವಾಸೋದ್ಯಮ ತಾಣವನ್ನಾಗಿ ಮಾಡುವ ಬಗ್ಗೆಯೂ ಚರ್ಚಿಸಿದರು. ಮೂಲಗಳ ಪ್ರಕಾರ, ಗುಪ್ತಚರ ಸಂಸ್ಥೆಯಿಂದ ಜೆಕೆ ಪೊಲೀಸರಿಗೆ ಎಚ್ಚರಿಕೆ ನೀಡಲಾಗಿತ್ತು.

ಇದಾದ ನಂತರವೇ ಅವರ ಮೇಲೆ ಕಟ್ಟುನಿಟ್ಟಿನ ನಿಗಾ ಇಡಲಾಗಿತ್ತು. ಮತ್ತೆ ಜಮ್ಮು-ಕಾಶ್ಮೀರ ಪ್ರವಾಸಕ್ಕೆ ಹೋದ ಕೂಡಲೇ ಅವರನ್ನು ಬಂಧಿಸಲಾಯಿತು. ಕಿರಣ್ ಭಾಯ್ ಪಟೇಲ್ ವಿರುದ್ಧ ಐಪಿಸಿ ಸೆಕ್ಷನ್ 419, 420, 467, 468, 471 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಟ್ವಿಟ್ಟರ್ ಖಾತೆಯನ್ನು ಪರಿಶೀಲಿಸಿದಾಗ  ಬಿಜೆಪಿ ಗುಜರಾತ್ ಪ್ರಧಾನ ಕಾರ್ಯದರ್ಶಿ ಪ್ರದೇಶ ವಘೇಲಾ ಸೇರಿದಂತೆ ಸಾವಿರಕ್ಕೂ ಹೆಚ್ಚು ಫಾಲೋವರ್ಸ್​ಗಳನ್ನು ಹೊಂದಿದ್ದಾರೆ ಎಂದು ತಿಳಿದುಬಂದಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ