AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಿಯಲ್ ಹೀರೋ: 7ನೇ ಮಹಡಿಯ ಗ್ರಿಲ್ ಹತ್ತಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಪ್ರಾಣ ಉಳಿಸಿದ ಸೂರತ್ ಪೊಲೀಸ್

ಸೂರತ್‌ನಲ್ಲಿ ಮಾನಸಿಕ ಒತ್ತಡದಿಂದ 7ನೇ ಮಹಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸ್ ಕಾನ್‌ಸ್ಟೆಬಲ್ ಶೈಲೇಶ್ ಚುಡಾಸಮಾ ಗ್ರಿಲ್ ಹತ್ತಿ ಸಾಹಸಮಯವಾಗಿ ರಕ್ಷಿಸಿದ್ದಾರೆ. ತಕ್ಷಣದ ಪ್ರತಿಕ್ರಿಯೆ ಮತ್ತು ಅಪಾಯಕಾರಿ ಕಾರ್ಯಾಚರಣೆಯಿಂದ ವ್ಯಕ್ತಿಯ ಜೀವ ಉಳಿಸಲಾಗಿದೆ. ಈ ಘಟನೆ ಪೊಲೀಸರ ಧೈರ್ಯ ಮತ್ತು ಸಮಯಪ್ರಜ್ಞೆಗೆ ಉದಾಹರಣೆಯಾಗಿದ್ದು, ಗುಜರಾತ್ ಗೃಹ ಸಚಿವರು ಶ್ಲಾಘಿಸಿದ್ದಾರೆ.

Video: ರಿಯಲ್ ಹೀರೋ: 7ನೇ ಮಹಡಿಯ ಗ್ರಿಲ್ ಹತ್ತಿ ಹೋಗಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಪ್ರಾಣ ಉಳಿಸಿದ ಸೂರತ್ ಪೊಲೀಸ್
ಪೊಲೀಸ್ Image Credit source: Free Press Journal
ನಯನಾ ರಾಜೀವ್
|

Updated on: Jun 12, 2026 | 1:07 PM

Share

ಸೂರತ್, ಜೂನ್ 12: ಯಾರೋ ಒಬ್ಬರು ಕಷ್ಟದಲ್ಲಿದ್ದಾರೆ ಎಂದಾಗ ತಮ್ಮ ಜೀವವನ್ನೂ ಪಣಕ್ಕಿಟ್ಟು ಕಾಪಾಡುವವರನ್ನು ದೇವದೂತರು ಎಂದು ಕರೆಯಲಾಗುತ್ತದೆ. ಹಾಗೆಯೇ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಪೊಲೀಸ್(Police) ಅಧಿಕಾರಿಯೊಬ್ಬರು ದೇವರಂತೆ ಕಾಪಾಡಿರುವ ಘಟನೆ ಸೂರತ್​ನಲ್ಲಿ ನಡೆದಿದೆ. ಜೂನ್ 8ರಂದು ಈ ಘಟನೆ ನಡೆದಿದೆ.

ಸೂರತ್‌ನ ಲಸ್ಕಾನಾ ಪ್ರದೇಶದ ವಸತಿ ಕಟ್ಟಡವೊಂದರ 7ನೇ ಮಹಡಿಯ ಫ್ಲಾಟ್‌ನಲ್ಲಿ ವ್ಯಕ್ತಿಯೊಬ್ಬರು ತೀವ್ರ ಮಾನಸಿಕ ಒತ್ತಡದಿಂದಾಗಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರ ಪತ್ನಿ ಗಾಬರಿಯಿಂದ ತಕ್ಷಣವೇ ಪೊಲೀಸರ ತುರ್ತು ಸಂಖ್ಯೆ ‘ಡಯಲ್ 112’ ಗೆ ಕರೆ ಮಾಡಿ ಸಹಾಯ ಕೋರಿದ್ದರು.

ಮಾಹಿತಿ ಸಿಗುತ್ತಿದ್ದಂತೆಯೇ ಲಸ್ಕಾನಾ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದವು. ಆದರೆ ಅಪಾರ್ಟ್​​ಮೆಂಟ್​ನ ಮುಖ್ಯ ಬಾಗಿಲೇ ಒಳಗಿನಿಂದ ಲಾಕ್ ಆದ ಕಾರಣ ಯಾರಿಗೂ ಒಳಬರಲು ಸಾಧ್ಯವಾಗಲಿಲ್ಲ. ಪರಿಸ್ಥಿತಿಯ ಗಂಭೀರತೆ ಅರಿತ ಪೊಲೀಸ್ ಕಾನ್‌ಸ್ಟೆಬಲ್ ಶೈಲೇಶ್ ಚುಡಾಸಮಾ ಮತ್ತು ಚಾಲಕ ಕೃಪಾಲ್‌ಸಿನ್ಹ್ ಗೋಹಿಲ್ ತಕ್ಷಣವೇ ಒಂದು ಉಪಾಯ ಮಾಡಿದ್ದಾರೆ.

ಪಕ್ಕದ ಫ್ಲಾಟ್‌ನ ನಿವಾಸಿಗಳ ಸಹಾಯ ಪಡೆದ ಕಾನ್‌ಸ್ಟೆಬಲ್ ಶೈಲೇಶ್, 7ನೇ ಮಹಡಿಯ ಕಟ್ಟಡದ ಹೊರಭಾಗದಲ್ಲಿದ್ದ ಕಿರಿದಾದ ಸುರಕ್ಷತಾ ಗ್ರಿಲ್ (Safety Grill) ಅನ್ನು ಯಾವುದೇ ಸಪೋರ್ಟ್ ಇಲ್ಲದೆ ಅತ್ಯಂತ ಎಚ್ಚರಿಕೆಯಿಂದ ಹತ್ತಲಾರಂಭಿಸಿದರು.

ಮತ್ತಷ್ಟು ಓದಿ: ಹೃದಯಸ್ಪರ್ಶಿ ಘಟನೆ: ಮಳೆಯಲ್ಲಿ ರಸ್ತೆ ದಾಟಲು ಪರದಾಡುತ್ತಿದ್ದ ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್

ಸಣ್ಣ ತಪ್ಪು ಹೆಜ್ಜೆಯೂ ಪ್ರಾಣಕ್ಕೆ ಕುತ್ತು ತರಬಹುದಾಗಿದ್ದ ಆ ಎತ್ತರದಲ್ಲಿ ಧೈರ್ಯವಾಗಿ ಸಾಗಿದ ಅವರು, ಕಿಟಕಿಯ ಮೂಲಕ ಫ್ಲಾಟ್‌ನ ಒಳಗೆ ಪ್ರವೇಶಿಸುವಲ್ಲಿ ಯಶಸ್ವಿಯಾದರು. ನಾನು ಒಳಗೆ ಹೋದಾಗ ಆ ವ್ಯಕ್ತಿ ವಿಷ ಸೇವಿಸಿ ವಾಂತಿ ಮಾಡುತ್ತಿದ್ದ. ತಕ್ಷಣವೇ ಆತನ ಕೈಯಲ್ಲಿದ್ದ ಉಳಿದ ವಿಷದ ವಸ್ತುವನ್ನು ಕಿತ್ತುಕೊಂಡು, ಒಳಗಿನಿಂದ ಬಾಗಿಲು ತೆರೆದು ನಮ್ಮ ತಂಡವನ್ನು ಒಳಗೆ ಕರೆಸಿಕೊಂಡೆ ಎಂದು ಕಾನ್‌ಸ್ಟೆಬಲ್ ಶೈಲೇಶ್ ಆ ಕ್ಷಣವನ್ನು ನೆನಪಿಸಿಕೊಂಡಿದ್ದಾರೆ.

ವಿಡಿಯೋ

ಮಗುವನ್ನು ಎತ್ತಿಕೊಳ್ಳುವಂತೆ ಆ ವ್ಯಕ್ತಿಯನ್ನು ತಕ್ಷಣವೇ 7ನೇ ಮಹಡಿಯಿಂದ ಕೆಳಗೆ ಕರೆತಂದ ಪೊಲೀಸರು, ಆಂಬ್ಯುಲೆನ್ಸ್‌ಗಾಗಿ ಕಾಯುತ್ತಾ ಸಮಯ ವ್ಯರ್ಥ ಮಾಡದೆ ತಮ್ಮದೇ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅದೃಷ್ಟವಶಾತ್, ದಾರಿಯ ಮಧ್ಯದಲ್ಲೇ ಆಂಬ್ಯುಲೆನ್ಸ್ ಎದುರಾಗಿದ್ದರಿಂದ ತಕ್ಷಣವೇ ಆತನಿಗೆ ತುರ್ತು ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಆ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಗುತ್ತಿದ್ದಂತೆಯೇ, ಗುಜರಾತ್ ಗೃಹ ಸಚಿವ ಹರ್ಷ ಸಾಂಘವಿ ಅವರು ಪೊಲೀಸ್ ಅಧಿಕಾರಿಗಳ ಈ ಅಪ್ರತಿಮ ಸೇವೆ ಮತ್ತು ಧೈರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿ, ಅಧಿಕೃತವಾಗಿ ಅಭಿನಂದಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಪ್ರವಾಹ: ನೋಡ ನೋಡುತ್ತಿದ್ದಂತೆ ಕೊಚ್ಚಿ ಹೋದ ಅಂಗಡಿ ಮುಂಗಟ್ಟುಗಳು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ