Gujarat: 200 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶ, ಗುಜರಾತ್​ನಲ್ಲಿ 6 ಪಾಕಿಸ್ತಾನಿ ಪ್ರಜೆಗಳ ಬಂಧನ

ಇಂದು ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯಿಂದ 200 ಕೋಟಿ ರೂ. ಹೆಚ್ಚು ಮೌಲ್ಯದ 40 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದೆ

Gujarat: 200 ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶ, ಗುಜರಾತ್​ನಲ್ಲಿ 6 ಪಾಕಿಸ್ತಾನಿ ಪ್ರಜೆಗಳ ಬಂಧನ
Drugs worth more than 200 crore seized, 6 Pakistani nationals arrested in Gujarat
Edited By:

Updated on: Sep 14, 2022 | 4:16 PM

ಅಹಮದಾಬಾದ್: ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಭಾರತೀಯ ಕೋಸ್ಟ್ ಗಾರ್ಡ್ ಜೊತೆಗಿನ ಜಂಟಿ ಕಾರ್ಯಾಚರಣೆಯಲ್ಲಿ ಇಂದು ಗುಜರಾತ್ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯಿಂದ 200 ಕೋಟಿ ರೂ. ಹೆಚ್ಚು ಮೌಲ್ಯದ 40 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದೆ ಎಂದು ಹಿರಿಯ ಎಟಿಎಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೋಣಿಯಲ್ಲಿದ್ದ ಆರು ಪಾಕಿಸ್ತಾನಿಗಳನ್ನೂ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ . ಕಚ್ ಜಿಲ್ಲೆಯ ಜಖೌ ಬಂದರಿನ ಬಳಿ ಕೋಸ್ಟ್ ಗಾರ್ಡ್ ಮತ್ತು ಎಟಿಎಸ್‌ನ ಜಂಟಿ ತಂಡವು ಡ್ರಗ್ಸ್ ಸಾಗಿಸುತ್ತಿದ್ದ ಪಾಕಿಸ್ತಾನಿ ಮೀನುಗಾರಿಕಾ ದೋಣಿಯನ್ನು ಸಮುದ್ರದ ಮಧ್ಯದಲ್ಲಿ ತಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹೆರಾಯಿನ್​ನ್ನು ಗುಜರಾತ್ ಕರಾವಳಿಯಲ್ಲಿ ಇಳಿಸಿ ನಂತರ ರಸ್ತೆ ದಾರಿಯ ಮೂಲಕ ಪಂಜಾಬ್‌ಗೆ ಸಾಗಿಸಲು ಪ್ಲಾನ್ ಹಾಕಿದ್ದರು ಎಂದು ಹೇಳಲಾಗಿದೆ. ನಿರ್ದಿಷ್ಟ ಸುಳಿವು ಆಧರಿಸಿ, ನಾವು ಪಾಕಿಸ್ತಾನದಿಂದ ಹೊರಟಿದ್ದ ದೋಣಿಯನ್ನು ತಡೆದು, 40 ಕೆಜಿ ಹೆರಾಯಿನ್‌ನೊಂದಿಗೆ ಆರು ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಗುಜರಾತ್ ಎಟಿಎಸ್ ಮತ್ತು ಕೋಸ್ಟ್ ಗಾರ್ಡ್ ಈ ಹಿಂದೆಯೂ ಮಾದಕವಸ್ತು ಕಳ್ಳಸಾಗಣೆಯ ತಡೆಯಳಾಗಿತ್ತು. ಗುಜರಾತ್ ಕರಾವಳಿಯ ಮೂಲಕ ಭಾರತಕ್ಕೆ ಕಳ್ಳಸಾಗಣೆ ಮಾಡಲು ಯೋಜಿಸಿದ್ದ ಭಾರೀ ಪ್ರಮಾಣದ ಮಾದಕವಸ್ತುಗಳೊಂದಿಗೆ ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ.