AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gujarat Election 2022: ಏಕರೂಪ ನಾಗರಿಕ ಸಂಹಿತೆ, 20 ಲಕ್ಷ ಉದ್ಯೋಗ ಸೃಷ್ಟಿ; ಗುಜರಾತ್​ನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಗುಜರಾತ್​ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿಆರ್ ಪಾಟೀಲ್ ಶನಿವಾರ ಬಿಡುಗಡೆ ಮಾಡಿದರು.

Gujarat Election 2022: ಏಕರೂಪ ನಾಗರಿಕ ಸಂಹಿತೆ, 20 ಲಕ್ಷ ಉದ್ಯೋಗ ಸೃಷ್ಟಿ; ಗುಜರಾತ್​ನಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿಆರ್ ಪಾಟೀಲ್ ಶನಿವಾರ ಪ್ರಣಾಳಿಕೆ ಬಿಡುಗಡೆ ಮಾಡಿದರು. (ಚಿತ್ರ ಕೃಪೆ: ಬಿಜೆಪಿ ಟ್ವಿಟರ್​ ಖಾತೆ)
TV9 Web
| Edited By: |

Updated on: Nov 26, 2022 | 3:29 PM

Share

ಅಹಮದಾಬಾದ್: ಗುಜರಾತ್​ನಲ್ಲಿ ಮುಂಬರುವ ಚುನಾವಣೆಯಲ್ಲಿ (Gujarat Election) ಪಕ್ಷವನ್ನು ಗೆಲ್ಲಿಸಿದರೆ ಏಕರೂಪ ನಾಗರಿಕ ಸಂಹಿತೆ (Uniform Civil Code) ಅನುಷ್ಠಾನಗೊಳಿಸುವುದು, 20 ಲಕ್ಷ ಉದ್ಯೋಗ ಸೃಷ್ಟಿಸುವುದು ಸೇರಿದಂತೆ ಹಲವು ಭರವಸೆಗಳನ್ನು ಮತದಾರರಿಗೆ ಬಿಜೆಪಿ (BJP) ನೀಡಿದೆ. ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸಿಆರ್ ಪಾಟೀಲ್ ಶನಿವಾರ ಬಿಡುಗಡೆ ಮಾಡಿದರು. ‘ಸಂಕಲ್ಪ ಪಾತ್ರ’ ಯೋಜನೆಯಡಿ ಮುಂದಿನ 5 ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಟಿಸಲಾಗುವುದು. ಗುಜರಾತನ್ನು 1 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡಲಾಗುವುದು ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಸ್ಕೂಲ್ಸ್ ಆಫ್ ಎಕ್ಸಲೆನ್ಸ್ ಪ್ರಾಜೆಕ್ಟ್ ಅನುಷ್ಠಾನ, ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ ನೀಡಲಾಗುವ ಮೊತ್ತವನ್ನು 5 ಲಕ್ಷ ರೂ.ನಿಂದ 10 ಲಕ್ಷ ರೂ.ಗೆ ಹೆಚ್ಚಿಸುವ ಭರವಸೆಯನ್ನೂ ನೀಡಲಾಗಿದೆ. ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಮಾಡಿದವರಿಂದಲೇ ನಷ್ಟ ವಸೂಲಿ ಮಾಡುವ ಕಾನೂನು ಅನುಷ್ಠಾನಗೊಳಿಸುವುದಾಗಿಯೂ ಬಿಜೆಪಿ ಬರವಸೆ ನೀಡಿದೆ.

ಹೇಳಿದ್ದನ್ನು ಮಾಡಿಯೇ ಸಿದ್ಧ; ನಡ್ಡಾ

ನಾವು ಏನು ಭರವಸೆ ನೀಡಿದ್ದೇವೆಯೋ ಅದನ್ನು ಈಡೇರಿಸಿಯೇ ಸಿದ್ಧ. ಇದುವೇ ನಮ್ಮ ವಿಶೇಷತೆ ಎಂದು ಪ್ರಣಾಳಿಕೆ ಬಿಡುಗಡೆ ಬಳಿಕ ನಡ್ಡಾ ಹೇಳಿದ್ದಾರೆ. ರಾಜ್ಯದಲ್ಲಿ ವಿಶ್ವ ದರ್ಜೆಯ ಒಲಿಂಪಿಕ್ಸ್ ಮೂಲಸೌಕರ್ಯ ಒದಗಿಸಲು ಬಿಜೆಪಿ ಶ್ರಮಿಸಲಿದೆ. 2036ರ ಒಲಿಂಪಿಕ್ಸ್ ಅನ್ನು ರಾಜ್ಯದಲ್ಲಿ ಆಯೋಜಿಸುವ ಗುರಿ ಹೊಂದಲಾಗಿದೆ ಎಂದು ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ. 2,000 ಸರ್ಕಾರಿ ಶಾಲೆಗಳನ್ನು ಮುಂದಿನ 5 ವರ್ಷಗಳಲ್ಲಿ ಸ್ಕೂಲ್ಸ್ ಆಫ್ ಎಕ್ಸಲೆನ್ಸ್ ಆಗಿ ಪರಿವರ್ತಿಸಲಾಗುವುದು. ಇದಕ್ಕೆ ಬಜೆಟ್​ನಲ್ಲಿ 10,000 ಕೋಟಿ ರೂ. ಅನುದಾನ ಒದಗಿಸಲಾಗುವುದು ಎಂದು ಬಿಜೆಪಿ ತಿಳಿಸಿದೆ.

ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ

ಕೆಜಿ ತರಗತಿಯಿಂದ ಪಿಜಿ ತರಗತಿವರೆಗೆ ಎಲ್ಲ ವಿದ್ಯಾರ್ಥಿನಿಯರಿಗೆ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡಲಾಗುವುದು ಎಂದೂ ನಡ್ಡಾ ತಿಳಿಸಿದ್ದಾರೆ. ರಕ್ಷಣೆ ಮತ್ತು ವಿಮಾನಯಾನ ಕ್ಷೇತ್ರದಲ್ಲಿ ಗುಜರಾತ್​ನ ಅಭಿವೃದ್ಧಿಗೆ 5 ಲಕ್ಷ ಕೋಟಿ ರೂ. ಮೀಸಲಿಡಲಾಗುವುದು ಎಂದು ಅವರು ಪ್ರಣಾಳಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ.

ನೀರಾವರಿ ಸೇರಿದಂತೆ ಕೃಷಿ ಮೂಲಸೌಕರ್ಯ ವೃದ್ಧಿ, ಮೀನುಗಾರಿಕಾ ಪಾರ್ಕ್ ನಿರ್ಮಾಣ, ಎಪಿಎಂಸಿಗಳ ವಿಸ್ತರಣೆ, ಸಬ್ಸಿಡಿಯೊಂದಿಗೆ ಖಾದ್ಯ ತೈಲ ವಿತರಣೆ ಸೇರಿದಂತೆ ಇನ್ನೂ ಅನೇಕ ಯೋಜನೆಗಳನ್ನು ಜಾರಿಗೆ ತರುವುದಾಗಿ ಪ್ರಣಾಳಿಕೆಯಲ್ಲಿ ಬಿಜೆಪಿ ಭರವಸೆ ನೀಡಿದೆ.

ಮೂಲಭೂತವಾದ ನಿಗ್ರಹ ಸೆಲ್ ಸ್ಥಾಪನೆಯ ಭರವಸೆ

ದೇಶದದ್ರೋಹಿ ಮತ್ತು ಉಗ್ರಗಾಮಿ ಚಟುವಟಿಕೆಗಳು, ಮೂಲಭೂತವಾದ ತಡೆಗೆ ಗುಜರಾತ್​ನಲ್ಲಿ ‘ಮೂಲಭೂತವಾದ ನಿಗ್ರಹ ಸೆಲ್’ ಸ್ಥಾಪಿಸಲಾಗುವುದು ಎಂದೂ ಬಿಜೆಪಿ ಪ್ರಣಾಳಿಕೆಯಲ್ಲಿ ತಿಳಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು