AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಕಾರ್ಮಿಕರು ಸಾವು, ಮೂವರಿಗೆ ಗಾಯ

ಗುಜರಾತ್​ನ ತಾಪಿ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿರ್ಪೋರ್ ಗ್ರಾಮದಲ್ಲಿರುವ ಹಣ್ಣಿನ ರಸ ಉತ್ಪಾದಿರುವ ಘಟಕದಲ್ಲಿ ಸಂಜೆ 4.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್​ನ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಕಾರ್ಮಿಕರು ಸಾವು, ಮೂವರಿಗೆ ಗಾಯ
ಸ್ಫೋಟ
ನಯನಾ ರಾಜೀವ್
|

Updated on: Sep 05, 2023 | 11:30 AM

Share

ಗುಜರಾತ್​ನ ತಾಪಿ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿರ್ಪೋರ್ ಗ್ರಾಮದಲ್ಲಿರುವ ಹಣ್ಣಿನ ರಸ ಉತ್ಪಾದಿರುವ ಘಟಕದಲ್ಲಿ ಸಂಜೆ 4.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐವರು ಕಾರ್ಮಿಕರು ಕಾರ್ಖಾನೆಯಲ್ಲಿ ಯಂತ್ರೋಪಕರಣಗಳನ್ನು ಸ್ಥಾಪಿಸುತ್ತಿದ್ದಾಗ ಒಂದು ಭಾಗವು ಸ್ಫೋಟಗೊಂಡಿದೆ ಎಂದು ಅವರು ಹೇಳಿದರು. ಸ್ಥಳೀಯ ಜನರ ಪ್ರಕಾರ, ಸ್ಫೋಟದ ತೀವ್ರತೆಗೆ ಯಂತ್ರದ ಭಾಗವು ಹಲವಾರು ಮೀಟರ್ ದೂರಕ್ಕೆ ಹಾರಿತು ಮತ್ತು ಅದು ರಸ್ತೆಗೆ ಅಡ್ಡಲಾಗಿ ಜಮೀನಿಗೆ ಬಿದ್ದಿತು.ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದರು, ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಅಧಿಕಾರಿ ಹೇಳಿದರು.

ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರು ಸಾವು ಪಶ್ಚಿಮ ಬಂಗಾಳ(West Bengal)ದ ಉತ್ತರ 24 ಪರಗಣ ಜಿಲ್ಲೆಯ ದತ್ತಪುಕೂರ್‌ನ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸಮೀಪದ ಹಲವು ಮನೆಗಳಿಗೂ ಹಾನಿಯಾಗಿದೆ. ಘಟನೆ ಆಗಸ್ಟ್​ 27ರಂದು ಸಂಭವಿಸಿದೆ.

ಮತ್ತಷ್ಟು ಓದಿ: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರು ಸಾವು

ಕೆಲ ತಿಂಗಳಿಂದ ಕಾರ್ಖಾನೆ ಅಕ್ರಮ ನಡೆಸುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸರು ಮತ್ತು ಸ್ಥಳೀಯ ರಾಜಕಾರಣಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ಸ್ಥಳಕ್ಕೆ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆಡಳಿತವು ಇನ್ನೂ ಅಧಿಕೃತ ಸಾವಿನ ಸಂಖ್ಯೆಯನ್ನು ಬಿಡುಗಡೆ ಮಾಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ