ಗುಜರಾತ್​ನ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಕಾರ್ಮಿಕರು ಸಾವು, ಮೂವರಿಗೆ ಗಾಯ

ಗುಜರಾತ್​ನ ತಾಪಿ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿರ್ಪೋರ್ ಗ್ರಾಮದಲ್ಲಿರುವ ಹಣ್ಣಿನ ರಸ ಉತ್ಪಾದಿರುವ ಘಟಕದಲ್ಲಿ ಸಂಜೆ 4.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುಜರಾತ್​ನ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಕಾರ್ಮಿಕರು ಸಾವು, ಮೂವರಿಗೆ ಗಾಯ
ಸ್ಫೋಟ

Updated on: Sep 05, 2023 | 11:30 AM

ಗುಜರಾತ್​ನ ತಾಪಿ ಜಿಲ್ಲೆಯಲ್ಲಿ ಹೊಸದಾಗಿ ನಿರ್ಮಿಸಲಾಗಿರುವ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ವಿರ್ಪೋರ್ ಗ್ರಾಮದಲ್ಲಿರುವ ಹಣ್ಣಿನ ರಸ ಉತ್ಪಾದಿರುವ ಘಟಕದಲ್ಲಿ ಸಂಜೆ 4.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐವರು ಕಾರ್ಮಿಕರು ಕಾರ್ಖಾನೆಯಲ್ಲಿ ಯಂತ್ರೋಪಕರಣಗಳನ್ನು ಸ್ಥಾಪಿಸುತ್ತಿದ್ದಾಗ ಒಂದು ಭಾಗವು ಸ್ಫೋಟಗೊಂಡಿದೆ ಎಂದು ಅವರು ಹೇಳಿದರು.
ಸ್ಥಳೀಯ ಜನರ ಪ್ರಕಾರ, ಸ್ಫೋಟದ ತೀವ್ರತೆಗೆ ಯಂತ್ರದ ಭಾಗವು ಹಲವಾರು ಮೀಟರ್ ದೂರಕ್ಕೆ ಹಾರಿತು ಮತ್ತು ಅದು ರಸ್ತೆಗೆ ಅಡ್ಡಲಾಗಿ ಜಮೀನಿಗೆ ಬಿದ್ದಿತು.ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದರು, ಇತರ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಮತ್ತು ಆ್ಯಂಬುಲೆನ್ಸ್‌ನಲ್ಲಿ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಅಧಿಕಾರಿ ಹೇಳಿದರು.

ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರು ಸಾವು
ಪಶ್ಚಿಮ ಬಂಗಾಳ(West Bengal)ದ ಉತ್ತರ 24 ಪರಗಣ ಜಿಲ್ಲೆಯ ದತ್ತಪುಕೂರ್‌ನ ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳಗ್ಗೆ 10 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಸಮೀಪದ ಹಲವು ಮನೆಗಳಿಗೂ ಹಾನಿಯಾಗಿದೆ. ಘಟನೆ ಆಗಸ್ಟ್​ 27ರಂದು ಸಂಭವಿಸಿದೆ.

ಮತ್ತಷ್ಟು ಓದಿ: ಪಶ್ಚಿಮ ಬಂಗಾಳದ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ನಾಲ್ವರು ಸಾವು

ಕೆಲ ತಿಂಗಳಿಂದ ಕಾರ್ಖಾನೆ ಅಕ್ರಮ ನಡೆಸುತ್ತಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಪೊಲೀಸರು ಮತ್ತು ಸ್ಥಳೀಯ ರಾಜಕಾರಣಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ಸ್ಥಳಕ್ಕೆ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಆಡಳಿತವು ಇನ್ನೂ ಅಧಿಕೃತ ಸಾವಿನ ಸಂಖ್ಯೆಯನ್ನು ಬಿಡುಗಡೆ ಮಾಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us