ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿ ಗರ್ಭವತಿ ಮಾಡಿದ ನೀಚ ತಂದೆ

ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿ ವ್ಯಕ್ತಿಯೊಬ್ಬ ಆಕೆಯನ್ನು ಗರ್ಭವತಿ ಮಾಡಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಆಕೆ ಫೆಬ್ರವರಿ 5 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆಕೆ ವೈದ್ಯರ ಬಳಿ ಘಟನೆಯನ್ನು ಹೇಳಿಕೊಂಡಿದ್ದು, ದಿನಗೂಲಿ ಕಾರ್ಮಿಕನಾಗಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಮೇ 21, 2010ರಂದು ಜನಿಸಿದ ಹೆಣ್ಣುಮಗುವಿನ ಮೇಲೆ ಆತ ಪದೇ ಪದೇ ಅತ್ಯಾಚಾರವೆಸಗುತ್ತಿದ್ದ.

ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿ ಗರ್ಭವತಿ ಮಾಡಿದ ನೀಚ ತಂದೆ
ತಂದೆ-ಮಗಳು ಸಾಂದರ್ಭಿಕ ಚಿತ್ರ
Image Credit source: Shutterstock

Updated on: Feb 07, 2025 | 11:13 AM

ನೀಚ ತಂದೆಯೊಬ್ಬ ಮಗಳ ಮೇಲೆ ನಿರಂತರ ಅತ್ಯಾಚಾರವೆಸಗಿ ಗರ್ಭವತಿ ಮಾಡಿರುವ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ. 14 ವರ್ಷದ ಮಗಳ ಮೇಲೆ ತಂದೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ, ಆಕೆ ಫೆಬ್ರವರಿ 5 ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆಕೆ ವೈದ್ಯರ ಬಳಿ ಘಟನೆಯನ್ನು ಹೇಳಿಕೊಂಡಿದ್ದು, ದಿನಗೂಲಿ ಕಾರ್ಮಿಕನಾಗಿರುವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮೇ 21, 2010ರಂದು ಜನಿಸಿದ ಹೆಣ್ಣುಮಗುವಿನ ಮೇಲೆ ಆತ ಪದೇ ಪದೇ ಅತ್ಯಾಚಾರವೆಸಗುತ್ತಿದ್ದ. ಆಕೆ ಹೊಟ್ಟೆನೋವಿನಿಂದ ಬಳಲುತ್ತಿದ್ದಾಗ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಅಂತಿಮವಾಗಿ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ.

ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಮತ್ತು ಪೋಕ್ಸೊ ಕಾಯ್ದೆಯ ಹಲವು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆರು ಮಕ್ಕಳನ್ನು ಹೊಂದಿರುವ ಆರೋಪಿಯು ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದು, ಬೆದರಿಕೆ ಹಾಕಿದ್ದ ಎನ್ನಲಾಗಿದೆ.

ಮತ್ತಷ್ಟು ಓದಿ: ಅತ್ಯಾಚಾರ ಸಂತ್ರಸ್ತೆ ರಾತ್ರೋ ರಾತ್ರಿ ಪೊಲೀಸ್​ ಠಾಣೆಗೆ ಬಂದು ದೂರು ನೀಡಬೇಕೆಂದು ಅಪೇಕ್ಷಿಸುವುದು ತಪ್ಪು: ಕೋರ್ಟ್​

ಉತ್ತರ ಪ್ರದೇಶದಲ್ಲಿ 16 ವರ್ಷದ ಬಾಲಕಿಯ ಮೇಲೆ ಆಕೆಯ ತಂದೆ ಹಲವು ಬಾರಿ ಅತ್ಯಾಚಾರ ಎಸಗಿದ ಆರೋಪದ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ಸಾಗರ್ ಜೈನ್ ಮಾತನಾಡಿ, ಸಂತ್ರಸ್ತೆಯ ತಾಯಿ ಹತ್ತು ವರ್ಷಗಳ ಹಿಂದೆ ನಿಧನರಾಗಿದ್ದರು, ಇದಾದ ಬಳಿಕ ಆತ ತನ್ನ ಮಗಳನ್ನೇ ಬಳಸಿಕೊಂಡಿದ್ದಾನೆಂದು ಹೇಳಿದ್ದಾರೆ.

ಆಕೆಯ ದೂರಿನ ಆಧಾರದ ಮೇಲೆ, ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿ ತಂದೆಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಜೈನ್ ದೃಢಪಡಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ