ಇಂದು (ಅಕ್ಟೋಬರ್ 18, ಸೋಮವಾರ) ಬೆಳಿಗ್ಗೆ ಗುಜರಾತಿನ ಸೂರತ್ ಜಿಲ್ಲೆಯ ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇದರ ಪರಿಣಾಮ ಒಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ ಜತೆಗೆ 125 ಮಂದಿಗೆ ಗಾಯಗಳಾಗಿವೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ಬೆಂಕಿಯು, ಪ್ಯಾಕ್ಟರಿಯ ಮೊದಲನೇ ಮಹಡಿಯಲ್ಲಿ ಕಾಣಿಸಿಕೊಂಡಿದೆ, ಬಳಿಕ ಇತರ ಮಹಡಿಗಳಿಗೆ ಹರಡಿದೆ. ಕಟ್ಟಡದೊಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರನ್ನು ರಕ್ಷಿಸಲು ಕ್ರೇನ್ಗಳನ್ನು ಬಳಸಲಾಗಿದೆ ಎಂದು ಪೊಲೀಸರು ಮಾಹಿತಿ ಹಂಚಿಕೊಂಡಿದ್ದಾರೆ.
ಪ್ಯಾಕೇಜಿಂಗ್ ಫ್ಯಾಕ್ಟರಿ ಸೂರತ್ನ ಕಡೋದರದ ವರೇಲಿ ಎಂಬಲ್ಲಿದೆ. ಇಂದು ಬೆಳಗಿನ ಜಾವ ಘಟನೆ ಸಂಭವಿಸಿದ್ದು, ಅಗ್ನಿ ಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದಾರೆ. ಇದುವರೆಗೆ 125 ಮಂದಿಯನ್ನು ರಕ್ಷಣೆ ಮಾಡಲಾಗಿದೆ, ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂಬ ಮಾಹಿತಿ ತಿಳಿದು ಬಂದಿದೆ. ಕಾರ್ಯಾಚರಣೆ ಮುಂದುವರೆದಿದ್ದು, ಪ್ಯಾಕೇಜಿಂಗ್ ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನೆಂಬುದು ಇನ್ನು ತಿಳಿದು ಬಂದಿಲ್ಲ.
Surat | Two persons dead, 125 people rescued after a fire broke out at a packaging factory in Vareli, Kadodara early morning today: Rupal Solanki, DySP, Bardoli Division#Gujarat pic.twitter.com/8Z9NXinYn4
— ANI (@ANI) October 18, 2021
ಇದನ್ನೂ ಓದಿ:
ಬೆಂಗಳೂರಲ್ಲಿ ಬೆಂಕಿ ಅವಘಡ: ಸೊಳ್ಳೆ ಪರದೆ ತಯಾರಿಕೆ ಕಾರ್ಖಾನೆಯಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳಿಗೆ ಹಾನಿ
Published On - 10:25 am, Mon, 18 October 21