AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ಗೆ ಮರುನಾಮಕರಣ; ಇನ್ಮುಂದೆ ಈ ಹಣ್ಣು ‘ಕಮಲಂ’ ಎಂದ ಮುಖ್ಯಮಂತ್ರಿ

ಡ್ರ್ಯಾಗನ್​ ಫ್ರೂಟ್ ದುಬಾರಿಯಾದರೂ ಆರೋಗ್ಯಕ್ಕೆ ಸಂಬಂಧಪಟ್ಟ ಅನೇಕ ಉಪಯೋಗಗಳಿವೆ. ಈ ದಿನಗಳಲ್ಲಿ ಇದು ಮಾರುಕಟ್ಟೆಯಲ್ಲಿ ಸಿಗುತ್ತಿದೆ. ಆದರೆ ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ನ ಹೆಸರು ಬದಲಾವಣೆಯಾದ ಬಗ್ಗೆ ಇನ್ನೂ ಎಲ್ಲರಿಗೂ ಮಾಹಿತಿ ತಲುಪಿಲ್ಲ.

ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ಗೆ ಮರುನಾಮಕರಣ; ಇನ್ಮುಂದೆ ಈ ಹಣ್ಣು ‘ಕಮಲಂ’ ಎಂದ ಮುಖ್ಯಮಂತ್ರಿ
ಡ್ರ್ಯಾಗನ್ ಫ್ರೂಟ್​
Lakshmi Hegde
| Edited By: |

Updated on: Jan 20, 2021 | 4:54 PM

Share

ಗಾಂಧಿನಗರ: ಇಷ್ಟು ದಿನ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ನಗರಗಳ ಹೆಸರನ್ನು ಬದಲಿಸುವುದನ್ನು ಕೇಳಿದ್ದೀರಿ. ಆದರೆ ಗುಜರಾತ್​ ಮುಖ್ಯಮಂತ್ರಿ ವಿಜಯ್​ ರೂಪಾಣಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹಣ್ಣೊಂದರ ಹೆಸರನ್ನು ಬದಲಿಸಿದ್ದಾರೆ.

ಗುಜರಾತ್​ನ ಕಛ್​, ನವ್​ಸಾರಿ ಹಾಗೂ ಸೌರಾಷ್ಟ್ರದ ವಿವಿಧ ಭಾಗಗಳಲ್ಲಿ ಅತ್ಯಂತ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುವ ಡ್ರ್ಯಾಗನ್ ಫ್ರೂಟ್​ಗೆ ‘ಕಮಲಂ’ ಮರುನಾಮಕರಣ ಮಾಡಿದ್ದಾರೆ. ಈ ಬಗ್ಗೆ ಮಂಗಳವಾರ ಮಾಧ್ಯಮಗಳಿಗೆ ರೂಪಾಣಿ ಮಾಹಿತಿ ನೀಡಿದ್ದಾರೆ. ಈ ಹಣ್ಣಿಗೆ ಡ್ರ್ಯಾಗನ್​ ಎಂಬ ಹೆಸರು ಸೂಕ್ತವೆನಿಸುತ್ತಿಲ್ಲ. ಇದರ ಹೆಸರಿನ ಕಾರಣಕ್ಕೆ ಇದು ಚೀನಾದ್ದೇ ಇರಬಹುದಾ ಎನಿಸುತ್ತದೆ. ಹಾಗಾಗಿ ಕಮಲಂ ಎಂದು ಮರುನಾಮಕರಣ ಮಾಡಿದ್ದಾಗಿ ತಿಳಿಸಿದ್ದಾರೆ.

ಕಮಲಂ ಯಾಕೆ? ಆದರೆ ಕಮಲಂ ಎಂಬ ಹೆಸರೇ ಯಾಕೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರೂಪಾಣಿ, ಈ ಹಣ್ಣು ಕಮಲದ ಹೂವಿನಂತೆ ಇದೆ ಎಂದು ಇದನ್ನು ಬೆಳೆಯುವ ಅದೆಷ್ಟೋ ರೈತರು ಹೇಳಿದ್ದಾರೆ. ಹಾಗಾಗಿ ಕಮಲಂ ಎಂದೇ ಹೆಸರಿಟ್ಟಿದ್ದೇವೆಯೇ ಹೊರತು ಇದರಲ್ಲಿ ರಾಜಕೀಯ ಕಾರಣವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇನ್ನು ಬಿಜೆಪಿಯ ಸಿಂಬಲ್ ಕಮಲವಾಗಿದ್ದು, ಗುಜರಾತ್​ನಲ್ಲಿ ಪಕ್ಷದ ಪ್ರಧಾನ ಕಚೇರಿಯ ಹೆಸರೂ ಶ್ರೀ ಕಮಲಂ ಎಂದೇ ಆಗಿದೆ.

ಡ್ರ್ಯಾಗನ್​ ಫ್ರೂಟ್ ದುಬಾರಿಯಾದರೂ ಆರೋಗ್ಯಕ್ಕೆ ಸಂಬಂಧಪಟ್ಟ ಅನೇಕ ಉಪಯೋಗಗಳಿವೆ. ಈ ದಿನಗಳಲ್ಲಿ ಇದು ಮಾರುಕಟ್ಟೆಯಲ್ಲಿ ಸಿಗುತ್ತಿದೆ. ಆದರೆ ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ನ ಹೆಸರು ಬದಲಾವಣೆಯಾದ ಬಗ್ಗೆ ಇನ್ನೂ ಎಲ್ಲರಿಗೂ ಮಾಹಿತಿ ತಲುಪಿಲ್ಲ.

ಇದು ರೈತರ ಪ್ರತಿಭಟನೆಯಲ್ಲ, ಕಾಂಗ್ರೆಸ್ ಪ್ರತಿಭಟನೆ: ಸಿ.ಟಿ.ರವಿ ವಾಗ್ದಾಳಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ