ಗುಜರಾತ್: ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಎರಡು ಬಾರಿ ಸಾಮೂಹಿಕ ಅತ್ಯಾಚಾರ

ತನ್ನ ಹಳ್ಳಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು 24 ಗಂಟೆಗಳಲ್ಲಿ ಎರಡು ಬಾರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಗುಜರಾತ್​ನ ಗಿರ್ ಸೋಮನಾಥ್ ಜಿಲ್ಲೆಯ ಉನಾದಲ್ಲಿ ನಡೆದಿದೆ. ನಂತರ, ಮೂವರು ಶಂಕಿತರನ್ನು ಬಂಧಿಸಲಾಗಿದೆ ಎಲ್ಲರೂ ಮೀನುಗಾರರು ಎಂದು ಪೊಲೀಸರು ತಿಳಿಸಿದ್ದಾರೆ.

ಗುಜರಾತ್: ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಎರಡು ಬಾರಿ ಸಾಮೂಹಿಕ ಅತ್ಯಾಚಾರ
ಕ್ರೈಂ

Updated on: Oct 09, 2025 | 11:56 AM

ಗುಜರಾತ್, ಅಕ್ಟೋಬರ್ 09: ತನ್ನ ಹಳ್ಳಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಡ್ರಾಪ್ ಕೊಡುವ ನೆಪದಲ್ಲಿ ಕರೆದೊಯ್ದು 24 ಗಂಟೆಗಳಲ್ಲಿ ಎರಡು ಬಾರಿ ಸಾಮೂಹಿಕ ಅತ್ಯಾಚಾರ(Rape)ವೆಸಗಿರುವ ಘಟನೆ ಗುಜರಾತ್​ನ ಗಿರ್ ಸೋಮನಾಥ್ ಜಿಲ್ಲೆಯ ಉನಾದಲ್ಲಿ ನಡೆದಿದೆ. ನಂತರ, ಮೂವರು ಶಂಕಿತರ ಬಂಧಿಸಲಾಗಿದ್ದು ಎಲ್ಲರೂ ಮೀನುಗಾರರು ಎಂದು ಪೊಲೀಸರು ತಿಳಿಸಿದ್ದಾರೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಮಹಿಳೆಯನ್ನು ಮಂಗಳವಾರ ಉನಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದಾಗ ಲೈಂಗಿಕ ದೌರ್ಜನ್ಯ ಬೆಳಕಿಗೆ ಬಂದಿತು. ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡ ನಂತರ ಆಕೆಯ ಕುಟುಂಬದವರು ಆಕೆಯನ್ನು ಚಿಕಿತ್ಸೆಗೆ ಕರೆದೊಯ್ದರು. ಅತ್ಯಾಚಾರದ ಘಟನೆಯನ್ನು ಆಕೆ ವೈದ್ಯರಿಗೆ ತಿಳಿಸಿದಾಗ, ಆಸ್ಪತ್ರೆಯು ಪೊಲೀಸರಿಗೆ ಮಾಹಿತಿ ನೀಡಿತು.

ಅತ್ಯಾಚಾರ ಸಂತ್ರಸ್ತೆ ನವಬಂದರ್ ಮೆರೈನ್ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ. ಮಹಿಳೆಯ ಪತಿ 10 ವರ್ಷಗಳ ಹಿಂದೆ ನಿಧನರಾಗಿದ್ದರು ಎಂದು ತಿಳಿದುಬಂದಿದೆ.
ಪೊಲೀಸರಿಗೆ ನೀಡಿದ ದೂರಿನಲ್ಲಿ ಮಹಿಳೆ, ಒಂದು ವಾರದ ಹಿಂದೆ ಮಾಂಡ್ವಿ ಚೆಕ್‌ಪೋಸ್ಟ್‌ನಿಂದ ತನ್ನ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದಾಗ ಎರಡು ಬೈಕ್‌ಗಳಲ್ಲಿ ಬಂದ ಮೂವರು ತನ್ನ ಬಳಿಗೆ ಬಂದರು. ಅವರು ಅವಳನ್ನು ಹಳ್ಳಿಗೆ ಬಿಡಲು ಮುಂದಾದರು ಮಹಿಳೆಗೆ ಅವರ ಪರಿಚಯವಿದ್ದಿದ್ದರಿಂದ ಅವರು ಒಪ್ಪಿಕೊಂಡಿದ್ದರು ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: ಆರೋಪಿ ಮನೆಗೆ ಅತ್ಯಾಚಾರ ಸಂತ್ರಸ್ತೆಯ ಕಳುಹಿಸಿದ ಅಧಿಕಾರಿಗಳು, ಮತ್ತೆ ಆಕೆಯ ಮೇಲೆ ಅತ್ಯಾಚಾರ

ಆದರೆ, ಸ್ವಲ್ಪ ದೂರ ಪ್ರಯಾಣಿಸಿದ ನಂತರ, ಅವರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸರದಿ ಪ್ರಕಾರ ಅತ್ಯಾಚಾರ ಮಾಡಿದ್ದಾರೆ ಎನ್ನಲಾಗಿದೆ. ಇದಾದ ನಂತರ, ಮೂವರು ಆರೋಪಿಗಳಲ್ಲಿ ಒಬ್ಬನ ಮನೆಗೆ ಆಕೆಯನ್ನು ಬಲವಂತವಾಗಿ ಕರೆದೊಯ್ದು, ಅಲ್ಲಿ ಮತ್ತೆ ಅತ್ಯಾಚಾರ ಎಸಗಿದ್ದಾರೆ.

ಆಕೆಗೆ ಮನೆಗೆ ಮರಳಲು ಅವಕಾಶ ಮಾಡಿಕೊಟ್ಟರು ಆದರೆ ಈ ಘಟನೆಯನ್ನು ಯಾರ ಬಳಿಯಾದರೂ ಹೇಳಿದರೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು ಎಂದು ಎಫ್‌ಐಆರ್‌ನಲ್ಲಿ ವಿವರಿಸಲಾಗಿದೆ. ಆರೋಪಿಗಳನ್ನು ಪತ್ತೆಹಚ್ಚಲು ಮತ್ತು ಬಂಧಿಸಲು ಪೊಲೀಸರು ಹಲವಾರು ತಂಡಗಳನ್ನು ರಚಿಸಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ