ವಿಡಿಯೋ: ಬೈಕ್​ನಲ್ಲಿ ಸಿಂಹವನ್ನು ಬೆನ್ನಟ್ಟಿದ ಅರಣ್ಯ ಸಿಬ್ಬಂದಿ

ಗುಜರಾತ್ ಸಫಾರಿ ಪಾರ್ಕ್‌ನಲ್ಲಿ ಸಿಬ್ಬಂದಿ ಬೈಕ್‌ನಲ್ಲಿ ಸಿಂಹ ಬೆನ್ನಟ್ಟಿದ ವಿಡಿಯೋ ವೈರಲ್ ಆಗಿದೆ. ಪ್ರಾಣಿ ಸುರಕ್ಷತೆ ಬಗ್ಗೆ ಪ್ರಶ್ನೆ ಹುಟ್ಟುಹಾಕಿದ ಈ ಘಟನೆಗೆ ಮೂವರು ಗುತ್ತಿಗೆ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ. ಸಿಂಹವನ್ನು ಆವರಣಕ್ಕೆ ಮರಳಿಸಲು ಬೈಕ್ ಬಳಸಿದ್ದು ನಿಯಮ ಉಲ್ಲಂಘನೆಯಾಗಿದ್ದು, ಅರಣ್ಯ ಇಲಾಖೆ ತನಿಖೆ ನಡೆಸಿ ಕ್ರಮ ಕೈಗೊಂಡಿದೆ.

ವಿಡಿಯೋ: ಬೈಕ್​ನಲ್ಲಿ ಸಿಂಹವನ್ನು ಬೆನ್ನಟ್ಟಿದ ಅರಣ್ಯ ಸಿಬ್ಬಂದಿ
ಸಿಂಹ

Updated on: Nov 16, 2026 | 10:48 AM

ಅಹಮದಾಬಾದ್, ನವೆಂಬರ್ 16:ಗುಜರಾತ್​ನ ಸಫಾರಿ ಪಾರ್ಕ್​ನಲ್ಲಿ ಸಿಂಹವನ್ನು ಅರಣ್ಯ ಸಿಬ್ಬಂದಿ ಬೈಕ್​ನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಮೂವರು ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಪ್ರಾಣಿಗಳ ಸುರಕ್ಷತೆ ಮತ್ತು ಅರಣ್ಯ ಇಲಾಖೆಯ ಕಾರ್ಯವೈಖರಿ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಘಟನೆಗೆ ಸಂಬಂಧಿಸಿದಂತೆ ಮೂವರು ಹೊರಗುತ್ತಿಗೆ ಅರಣ್ಯ ಸಿಬ್ಬಂದಿಯನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ.

ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಧಾರಿ ಪ್ರದೇಶದಲ್ಲಿರುವ ಅಂಬಾರ್ಡಿ ಸಫಾರಿ ಪಾರ್ಕ್‌ನಲ್ಲಿ ಈ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಮೂವರು ವ್ಯಕ್ತಿಗಳು ಪ್ರತ್ಯೇಕ ಬೈಕ್‌ಗಳಲ್ಲಿ ಸಿಂಹವನ್ನು ಹಿಂಬಾಲಿಸುತ್ತಿರುವುದು ಕಂಡುಬಂದಿದೆ. ಸಿಂಹವು ಒಂದು ಕಡೆ ಓಡುತ್ತಿದ್ದರೆ, ಬೈಕ್‌ಗಳಲ್ಲಿದ್ದವರು ಅದರ ಹಿಂದೆ ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಕೊನೆಗೆ ಸಿಂಹವು ತಿರುಗಿ ಬೈಕ್‌ ಸವಾರರ ಕಡೆಗೆ ಓಡುತ್ತಿರುವುದೂ ವಿಡಿಯೋದಲ್ಲಿದೆ.

Loading...

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಅರಣ್ಯ ಇಲಾಖೆ ತನಿಖೆ ಆರಂಭಿಸಿತು. ದೀಪಾವಳಿ ಹಬ್ಬದ ರಜೆಯ ಸಂದರ್ಭದಲ್ಲಿ ಸಫಾರಿ ಪಾರ್ಕ್‌ಗೆ ವಿಐಪಿ ಅತಿಥಿಗಳು ಭೇಟಿ ನೀಡಿದ್ದ ವೇಳೆ, ಅವರಿಗೆ ಸಿಂಹವನ್ನು ಹತ್ತಿರದಿಂದ ತೋರಿಸಲು ಸಿಬ್ಬಂದಿ ಈ ರೀತಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆದರೆ ಈ ಆರೋಪವನ್ನು ಅಧಿಕಾರಿಗಳು ಅಧಿಕೃತವಾಗಿ ದೃಢಪಡಿಸಿಲ್ಲ.

ಇದನ್ನೂ ಓದಿ: ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಈ ಕುರಿತು ಪ್ರತಿಕ್ರಿಯಿಸಿರುವ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೈಪಾಲ್ ಸಿಂಗ್, ಸಫಾರಿ ಪಾರ್ಕ್‌ನಲ್ಲಿರುವ ಸಿಂಹವನ್ನು ಅದರ ನಿಗದಿತ ಆವರಣದ ಕಡೆಗೆ ಕರೆದೊಯ್ಯಲು ಕೆಲವು ಸಿಬ್ಬಂದಿ ಪ್ರಯತ್ನಿಸುತ್ತಿದ್ದರು ಎಂದು ತಿಳಿಸಿದ್ದಾರೆ. ಸಾಮಾನ್ಯವಾಗಿ ಈ ಕೆಲಸಕ್ಕೆ ಜೀಪ್ ಬಳಸಲಾಗುತ್ತದೆ. ಆದರೆ ಈ ಬಾರಿ ಕೆಲವು ಸಿಬ್ಬಂದಿ ಮೋಟಾರ್ ಸೈಕಲ್ ಬಳಸಿರುವುದು ಕಂಡುಬಂದಿದೆ ಎಂದು ಹೇಳಿದ್ದಾರೆ.

ವಿಡಿಯೋ

ಘಟನೆಗೆ ಸಂಬಂಧಿಸಿದಂತೆ ಸಿಬ್ಬಂದಿಗೆ ನೋಟಿಸ್ ನೀಡಲಾಗಿದ್ದು, ಮೂವರು ಹೊರಗುತ್ತಿಗೆ ನೌಕರರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಈ ಮೂಲಕ ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ. ಇನ್ನೊಂದೆಡೆ, ಸಫಾರಿ ಪಾರ್ಕ್‌ನ ಉಸ್ತುವಾರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಿತೇಶ್ ವಾನಿಯಾ, ಸಿಂಹಕ್ಕೆ ಕಿರುಕುಳ ನೀಡುವ ಉದ್ದೇಶದಿಂದ ಸಿಬ್ಬಂದಿ ವರ್ತಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿಂಹವು ತನ್ನ ನಿಗದಿತ ಆವರಣದಿಂದ ದೂರ ಹೋಗಿದ್ದರಿಂದ ಅದನ್ನು ಮರಳಿ ಕರೆತರಲು ಸಿಬ್ಬಂದಿ ಪ್ರಯತ್ನಿಸುತ್ತಿದ್ದರು ಎಂದು ಹೇಳಿದ್ದಾರೆ.

ಅವರ ಪ್ರಕಾರ, 300 ಹೆಕ್ಟೇರ್‌ಗೂ ಹೆಚ್ಚು ವಿಸ್ತೀರ್ಣ ಹೊಂದಿರುವ ಸಫಾರಿ ಪಾರ್ಕ್‌ನಲ್ಲಿ ಪ್ರತಿದಿನ ಸಂಜೆ 5 ಗಂಟೆಗೆ ಸಿಂಹಗಳಿಗೆ ಆಹಾರ ನೀಡಲಾಗುತ್ತದೆ. ಇದಕ್ಕಾಗಿ 100 ಮೀಟರ್ ಉದ್ದ ಮತ್ತು 100 ಮೀಟರ್ ಅಗಲದ ಬೇಲಿ ಹಾಕಿದ ಆವರಣವನ್ನು ನಿರ್ಮಿಸಲಾಗಿದೆ. ಈ ಆವರಣವನ್ನು ‘ಕ್ರಾಲ್’ ಎಂದು ಕರೆಯಲಾಗುತ್ತದೆ. ದೀಪಾವಳಿ ರಜೆಯ ಸಂದರ್ಭದಲ್ಲಿ ಸಫಾರಿ ಪಾರ್ಕ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡಿದ್ದರು. ಪ್ರವಾಸಿಗರ ನಿರ್ವಹಣೆಗಾಗಿ ಅರಣ್ಯ ಸಿಬ್ಬಂದಿ ಸತತ 12 ಗಂಟೆಗಳ ಕಾಲ ಕೆಲಸ ಮಾಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us