ಕೆಲಸದಿಂದ ತಪ್ಪಿಸಿಕೊಳ್ಳಲು ತಮ್ಮ ಕೈನ 4 ಬೆರಳುಗಳನ್ನು ಕತ್ತರಿಸಿಕೊಂಡ ವ್ಯಕ್ತಿ!

ಗುಜರಾತ್​ನ ಸೂರತ್‌ನಲ್ಲಿ ಸಂಬಂಧಿಕರ ಸಂಸ್ಥೆಯಲ್ಲಿ ಕೆಲಸದಿಂದ ತಪ್ಪಿಸಿಕೊಳ್ಳಲು ವ್ಯಕ್ತಿ ತನ್ನ ನಾಲ್ಕು ಬೆರಳುಗಳನ್ನು ಕತ್ತರಿಸಿಕೊಂಡಿದ್ದಾನೆ. ಸೂರತ್‌ನಲ್ಲಿ ನಡೆದ ವಿಲಕ್ಷಣ ಘಟನೆಯೊಂದರಲ್ಲಿ 32 ವರ್ಷದ ವ್ಯಕ್ತಿಯೊಬ್ಬ ತನ್ನ ಕುಟುಂಬ ನಡೆಸುವ ಡೈಮಂಡ್​ ಫರ್ಮ್​ನಲ್ಲಿ ತನ್ನ ಕೆಲಸದಿಂದ ಬಚಾವಾಗಲು ಚಾಕುವಿನಿಂದ ತನ್ನ ಎಡಗೈಯ 4 ಬೆರಳುಗಳನ್ನು ಕತ್ತರಿಸಿಕೊಂಡಿದ್ದಾನೆ.

ಕೆಲಸದಿಂದ ತಪ್ಪಿಸಿಕೊಳ್ಳಲು ತಮ್ಮ ಕೈನ 4 ಬೆರಳುಗಳನ್ನು ಕತ್ತರಿಸಿಕೊಂಡ ವ್ಯಕ್ತಿ!
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Dec 14, 2024 | 9:50 PM

ಸೂರತ್: ಗುಜರಾತ್‌ನ ಸೂರತ್‌ನಲ್ಲಿ ನಡೆದ ವಿಚಿತ್ರ ಘಟನೆಯೊಂದರಲ್ಲಿ ಮಯೂರ್ ತಾರಾಪರಾ ಎಂಬ 32 ವರ್ಷದ ವ್ಯಕ್ತಿ ತಾನು ಕೆಲಸ ಮಾಡುತ್ತಿದ್ದ ಡೈಮಂಡ್ ಫರ್ಮ್ ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡಲು ಇಷ್ಟವಿಲ್ಲದೆ ಹರಿತವಾದ ಚಾಕುವಿನಿಂದ ತನ್ನ ಎಡಗೈಯ ನಾಲ್ಕು ಬೆರಳುಗಳನ್ನು ಕತ್ತರಿಸಿಕೊಂಡಿದ್ದಾನೆ. ಇದರಿಂದಾಗಿ ಅವರು ತನ್ನನ್ನು ಕೆಲಸದಲ್ಲಿರುವಂತೆ ಒತ್ತಾಯಿಸುವುದಿಲ್ಲ ಎಂಬ ಅಭಿಪ್ರಾಯ ಅವರದಾಗಿತ್ತು.

ವರಚಾ ಮಿನಿ ಬಜಾರ್‌ನಲ್ಲಿರುವ ಅನಭ್ ಜೆಮ್ಸ್ ಎಂಬ ಡೈಮಂಡ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ತಾರಾಪರಾ ಅವರು ರಸ್ತೆಯ ಬದಿಯಲ್ಲಿ ಪ್ರಜ್ಞಾಹೀನರಾಗಿ ಬಿದ್ದು ತನ್ನ ಬೆರಳುಗಳನ್ನು ಕಳೆದುಕೊಂಡಿರುವುದಾಗಿ ಆರಂಭದಲ್ಲಿ ಹೇಳಿಕೊಂಡಿದ್ದರು. ಆದರೆ, ಸಂಪೂರ್ಣ ತನಿಖೆಯ ನಂತರ, ಸೂರತ್ ಕ್ರೈಂ ಬ್ರಾಂಚ್ ಈ ಗಾಯವು ಸ್ವಯಂ ಪ್ರೇರಿತವಾಗಿದೆ ಎಂದು ಕಂಡುಹಿಡಿದಿದೆ.

ಇದನ್ನೂ ಓದಿ: ಟಾಯ್ಲೆಟ್​ನಲ್ಲಿ ಫ್ಲಶ್ ಮಾಡಿಲ್ಲವೆಂದು ಶುರುವಾದ ಮನೆ ಬಾಡಿಗೆದಾರರ ಜಗಳ ಕೊಲೆಯಲ್ಲಿ ಅಂತ್ಯ!

ಪೊಲೀಸರ ಪ್ರಕಾರ, ಕಂಪ್ಯೂಟರ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ತಾರಾಪರಾ ಅವರಿಗೆ ಅಲ್ಲಿ ಕೆಲಸ ಮುಂದುವರಿಸಲು ಇಷ್ಟವಿರಲಿಲ್ಲ. ಈ ಬಗ್ಗೆ ಸಂಬಂಧಿಕರಾದ ತಮ್ಮ ಬಾಸ್​ಗೆ ತಿಳಿಸಲು ಹೆಣಗಾಡುತ್ತಿದ್ದರು. ಅದರಿಂದ ತಪ್ಪಿಸಿಕೊಳ್ಳುವ ಹತಾಶ ಪ್ರಯತ್ನದಲ್ಲಿ ಅವರು ಕೆಲಸಕ್ಕೆ ಅನರ್ಹನಾಗಲು ತನ್ನ ಬೆರಳುಗಳನ್ನು ಕತ್ತರಿಸಿಕೊಳ್ಳಲು ನಿರ್ಧರಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Bigg Boss: ರಜತ್ ಮಾಡಿದ ತಪ್ಪಿಗೆ ಶಿಕ್ಷೆ ವಿಧಿಸಿದ ಕಿಚ್ಚ ಸುದೀಪ್
Bigg Boss: ರಜತ್ ಮಾಡಿದ ತಪ್ಪಿಗೆ ಶಿಕ್ಷೆ ವಿಧಿಸಿದ ಕಿಚ್ಚ ಸುದೀಪ್
ಬ್ರ್ಯಾಂಡ್ ಬೆಂಗಳೂರು ಸಿಗುತ್ತಿಲ್ಲ, ರಸ್ತೆಗುಂಡಿಗಳಲ್ಲಿ ದಫನ್ ಆಯಿತೇ?
ಬ್ರ್ಯಾಂಡ್ ಬೆಂಗಳೂರು ಸಿಗುತ್ತಿಲ್ಲ, ರಸ್ತೆಗುಂಡಿಗಳಲ್ಲಿ ದಫನ್ ಆಯಿತೇ?
ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ:ಶಾಸಕ
ಒಂದು ದೇಶ ಒಂದು ಚುನಾವಣೆ ಮಸೂದೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ವಿರುದ್ಧ:ಶಾಸಕ
ಪರಭಾಷಾ ಚಿತ್ರಗಳ ಹಾವಳಿ ಹೆಚ್ಚುತ್ತಿದೆ, ಕಡಿಮೆಯಾಗುತ್ತಿಲ್ಲ: ಗೋವಿಂದು
ಪರಭಾಷಾ ಚಿತ್ರಗಳ ಹಾವಳಿ ಹೆಚ್ಚುತ್ತಿದೆ, ಕಡಿಮೆಯಾಗುತ್ತಿಲ್ಲ: ಗೋವಿಂದು
ಧರಣಿಯಲ್ಲಿ ಪಾಲ್ಗೊಂಡ ಸಚಿವೆಯನ್ನು ಸಿಎಂ ಸಸ್ಪೆಂಡ್ ಮಾಡಲಿ: ಸ್ವಾಮೀಜಿ
ಧರಣಿಯಲ್ಲಿ ಪಾಲ್ಗೊಂಡ ಸಚಿವೆಯನ್ನು ಸಿಎಂ ಸಸ್ಪೆಂಡ್ ಮಾಡಲಿ: ಸ್ವಾಮೀಜಿ
ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ
ಗುರಿ ಕಳೆದುಕೊಂಡವರಿಗೆ, ಹಾದಿ ತಪ್ಪಿದವರಿಗೆ ಕಿಚ್ಚ ತೋರಲಿದ್ದಾರೆ ದಾರಿ
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ
ನಮ್ಮ ಹೋರಾಟಗಳನ್ನು ನಿಲ್ಲಿಸುವ ವ್ಯರ್ಥ ಪ್ರಯತ್ನ ಸರ್ಕಾರ ಮಾಡ್ತಿದೆ: ಅಶೋಕ
ಅಲ್ಲು ಅರ್ಜುನ್ ಬಂಧನದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ: ಗುಂಡೂರಾವ್
ಅಲ್ಲು ಅರ್ಜುನ್ ಬಂಧನದ ಬಗ್ಗೆ ಹೆಚ್ಚು ಮಾಹಿತಿ ಇಲ್ಲ: ಗುಂಡೂರಾವ್
ಶಿಕ್ಷೆ ಕೊಡಿಸಲು ಜೈಲಿಂದ ತಪ್ಪಿಸಿಕೊಂಡ ಚೈತ್ರಾ-ತ್ರಿವಿಕ್ರಂ
ಶಿಕ್ಷೆ ಕೊಡಿಸಲು ಜೈಲಿಂದ ತಪ್ಪಿಸಿಕೊಂಡ ಚೈತ್ರಾ-ತ್ರಿವಿಕ್ರಂ
ಸತತ 33 ಗಂಟೆ 33 ನಿಮಿಷ ಹನುಮಾನ್ ಚಾಲಿಸ್ ಪಾರಾಯಣ: ಗಿನ್ನಿಸ್​ ದಾಖಲೆ
ಸತತ 33 ಗಂಟೆ 33 ನಿಮಿಷ ಹನುಮಾನ್ ಚಾಲಿಸ್ ಪಾರಾಯಣ: ಗಿನ್ನಿಸ್​ ದಾಖಲೆ