ಗುಜರಾತ್: ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಪತ್ನಿ ಕೊಂದು ಸಾಕ್ಷ್ಯನಾಶ ಮಾಡಿದ್ದ ವ್ಯಕ್ತಿಯ ಬಂಧನ

ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಲೆ ಮಾಡಿ ಸ್ನೇಹಿತನ ಸಹಾಯದಿಂದ ಸಾಕ್ಷ್ಯನಾಶ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗಂಡನಿಗೆ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧವಿದೆ ಎಂದು ಇದೇ ವಿಚಾರವನ್ನಿಟ್ಟುಕೊಂಡು ಪದೇ ಪದೇ ಜಗಳವಾಡುತ್ತಿದ್ದಳು. ಈ ಕಾರಣಕ್ಕೆ ಆತ ಪತ್ನಿಯನ್ನು ಕೊಲ್ಲಲು ಬಯಸಿದ್ದ. ಬಳಿಕ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ.

ಗುಜರಾತ್: ಅಕ್ರಮ ಸಂಬಂಧದ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ಪತ್ನಿ ಕೊಂದು ಸಾಕ್ಷ್ಯನಾಶ ಮಾಡಿದ್ದ ವ್ಯಕ್ತಿಯ ಬಂಧನ
ಕ್ರೈಂ

Updated on: Oct 24, 2025 | 12:08 PM

ಅಹಮದಾಬಾದ್, ಅಕ್ಟೋಬರ್ 24: ಅಕ್ರಮ ಸಂಬಂಧದ ಬಗ್ಗೆ ಪ್ರಶ್ನಿಸಿದ್ದಕ್ಕೆ ಪತ್ನಿಯನ್ನು ಕೊಲೆ(Murder) ಮಾಡಿ ಸ್ನೇಹಿತನ ಸಹಾಯದಿಂದ ಸಾಕ್ಷ್ಯನಾಶ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಗುಜರಾತ್​ನಲ್ಲಿ ನಡೆದಿದೆ. ಗಂಡನಿಗೆ ಬೇರೊಬ್ಬ ಮಹಿಳೆಯೊಂದಿಗೆ ಸಂಬಂಧವಿದೆ ಎನ್ನುವ  ವಿಚಾರವನ್ನಿಟ್ಟುಕೊಂಡು ಪದೇ ಪದೇ ಜಗಳವಾಡುತ್ತಿದ್ದಳು. ಈ ಕಾರಣಕ್ಕೆ ಆತ ಪತ್ನಿಯನ್ನು ಕೊಲ್ಲಲು ಬಯಸಿದ್ದ. ಬಳಿಕ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದ.

ಈ ಘಟನೆ ಸರ್ದಾರ್ಪುರ್ ಗ್ರಾಮದಲ್ಲಿ ನಡೆದಿದ್ದು, ಗ್ರಾಮದ ಹೊರವಲಯದಲ್ಲಿ ಕೃಷಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆರೋಪಿಯನ್ನು ನಾನಿಯಾ ಸಾಸ್ತೆ ಎಂದು ಅಧಿಕಾರಿಗಳು ಗುರುತಿಸಿದ್ದಾರೆ. ಬೇರೆ ಮಹಿಳೆಯೊಂದಿಗಿನ ಸಂಬಂಧದ ಬಗ್ಗೆ ಪತ್ನಿ ನಿಯತಿ ಜೊತೆ ಆಗಾಗ ಜಗಳವಾಡುತ್ತಿದ್ದ ಮತ್ತು ತನ್ನ ಪ್ರೇಯಸಿಯೊಂದಿಗೆ ಇರಲು ಪತ್ನಿಯನ್ನು ಬಿಟ್ಟು ಹೋಗಲು ನಿರ್ಧರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್ 18 ರಂದು, ರಾತ್ರಿ 8 ಗಂಟೆ ಸುಮಾರಿಗೆ, ನಾನಿಯಾ ಸಾಸ್ಟೆ ಜಮೀನಿನಲ್ಲಿ ನಿಯತಿಯೊಂದಿಗೆ ಮತ್ತೆ ಜಗಳವಾಡಿದ್ದಾನೆ, ಇದು ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಈ ಜಗಳದಲ್ಲಿ, ಆತ ಪತ್ನಿಯ ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಆರೋಪಿಸಲಾಗಿದೆ.

ಮತ್ತಷ್ಟು ಓದಿ: ಕೋಲ್ಕತ್ತಾದ ಆರ್​​ಜಿಕರ್ ಅತ್ಯಾಚಾರ-ಕೊಲೆ ಪ್ರಕರಣದ ಅಪರಾಧಿಯ ಅಪ್ರಾಪ್ತ ಸೋದರಸೊಸೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

 

ಕೊಲೆಯ ನಂತರ, ಅಪರಾಧದ ಸಾಕ್ಷ್ಯಗಳನ್ನು ನಾಶಪಡಿಸಲು ನಾನಿಯಾ ಸಾಸ್ತೆ ತನ್ನ ಸ್ನೇಹಿತ ಜೇನು ಸೋಲಂಕಿಯಿಂದ ಸಹಾಯ ಕೋರಿದ್ದಾನೆ ಎಂದು ಹೇಳಲಾಗುತ್ತದೆ. ಮಧ್ಯಪ್ರದೇಶದಲ್ಲಿ ಕ್ರಿಮಿನಲ್ ದಾಖಲೆ ಹೊಂದಿರುವ ಸೋಲಂಕಿಯನ್ನೂ ಬಂಧಿಸಲಾಯಿತು. ಇಬ್ಬರೂ ಶಂಕಿತರನ್ನು ವಶಕ್ಕೆ ಪಡೆದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಪೊಲೀಸರು ಪ್ರಕರಣದ ತನಿಖೆ ಮುಂದುವರೆಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ