Gujarat:’ಮೋದಿ ಹಠಾವೋ ದೇಶ್ ಬಚಾವೋ’ ಪೋಸ್ಟರ್‌: 8 ಮಂದಿಯ ಬಂಧನ

ಅಹಮದಾಬಾದ್ ನಗರದ ವಿವಿಧೆಡೆ 'ಮೋದಿ ಹಠಾವೋ ದೇಶ್ ಬಚಾವೋ' ಪೋಸ್ಟರ್‌ಗಳನ್ನು ಹಾಕಿದ್ದ ಎಂಟು ಮಂದಿಯನ್ನು ಬಂಧಿಸಲಾಗಿದೆ.

Gujarat:'ಮೋದಿ ಹಠಾವೋ ದೇಶ್ ಬಚಾವೋ' ಪೋಸ್ಟರ್‌: 8 ಮಂದಿಯ ಬಂಧನ
ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Mar 31, 2023 | 10:59 AM

ಅಹಮದಾಬಾದ್‌: ಗುಜರಾತ್‌(Gujarat) ಅಹಮದಾಬಾದ್‌ನಲ್ಲಿ ಪ್ರಧಾನಿ ಮೋದಿ ವಿರುದ್ಧ ಹಾಕಿದ್ದ ಪೋಸ್ಟರ್‌ಗಳಿಗೆ ಸಂಬಂಧಿಸಿದಂತೆ 8 ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿ ಸಂಸ್ಥೆ ANI ತಿಳಿಸಿದೆ. ಅಹಮದಾಬಾದ್ ನಗರದ ವಿವಿಧೆಡೆ ‘ಮೋದಿ ಹಠಾವೋ ದೇಶ್ ಬಚಾವೋ’ ಪೋಸ್ಟರ್‌ಗಳನ್ನು ಹಾಕಿದ್ದ ಎಂಟು ಮಂದಿಯನ್ನು ಬಂಧಿಸಲಾಗಿದೆ. ಆಮ್ ಆದ್ಮಿ ಪಕ್ಷ (ಎಎಪಿ) ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಷ್ಟ್ರವ್ಯಾಪಿ ಪೋಸ್ಟರ್ ಅಭಿಯಾನ ಆರಂಭಿಸಿದ ಕೇವಲ ಒಂದು ದಿನದ ನಂತರ ಈ ಬಂಧನಗಳು ನಡೆದಿವೆ. ಅಹಮದಾಬಾದ್ ಪೊಲೀಸರ ಪ್ರಕಾರ, ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಮತ್ತು ವಿಷಯದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಎಎಪಿಯ “ಮೋದಿ ಹಟಾವೋ, ದೇಶ್ ಬಚಾವೋ” ಅಭಿಯಾನವನ್ನು ದೇಶಾದ್ಯಂತ 11 ಭಾಷೆಗಳಲ್ಲಿ ಪ್ರಾರಂಭಿಸಲಾಯಿತು. ಇಂಗ್ಲಿಷ್, ಹಿಂದಿ ಮತ್ತು ಉರ್ದು ಜೊತೆಗೆ, ಗುಜರಾತಿ, ಪಂಜಾಬಿ, ತೆಲುಗು, ಬೆಂಗಾಲಿ, ಒರಿಯಾ, ಕನ್ನಡ, ಮಲಯಾಳಂ ಮತ್ತು ಮರಾಠಿಯಲ್ಲಿ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಾಗಿದೆ.

ಕಳೆದ ವಾರ, ಪ್ರಧಾನ ಮಂತ್ರಿ ಮೋದಿಯನ್ನು ಗುರಿಯಾಗಿಸಿಕೊಂಡು ಸಾವಿರಾರು ಪೋಸ್ಟರ್‌ಗಳು ರಾಷ್ಟ್ರ ರಾಜಧಾನಿಯಲ್ಲಿ ಗೋಡೆಗಳ ಮೇಲೆ ಕಾಣಿಸಿಕೊಂಡಿದೆ, ನಂತರ ಈ ಫೋಸ್ಟರ್​ ವಿರುದ್ಧ 49 ಎಫ್‌ಐಆರ್‌ಗಳನ್ನು ದಾಖಲಿಸಿ ಆರು ಜನರನ್ನು ಬಂಧಿಸಿದ್ದರು, ಇದನ್ನು ವಿರೋಧ ಪಕ್ಷಗಳು ಸರ್ಕಾರ ಮತ್ತು ಪೊಲೀಸರ ದಬ್ಬಾಳಿಕೆ ಎಂದು ಹೇಳಿದರು. ಬಂಧಿತರಲ್ಲಿ ಇಬ್ಬರು ಪ್ರಿಂಟಿಂಗ್ ಪ್ರೆಸ್ ಹೊಂದಿದ್ದರು.

ಇದನ್ನೂ ಓದಿ: ಮೋದಿ ಹಠಾವೋ ದೇಶ್ ಬಚಾವೋ’ ಪೋಸ್ಟರ್‌: 8 ಮಂದಿಯ ಬಂಧನ

ಸಾರ್ವಜನಿಕ ಆಸ್ತಿಯನ್ನು ವಿರೂಪಗೊಳಿಸಿದ್ದಕ್ಕಾಗಿ ಮತ್ತು ಕಾನೂನಿನ ಪ್ರಕಾರ ಪೋಸ್ಟರ್‌ಗಳು ಮುದ್ರಿಸಲಾದ ಮುದ್ರಣಾಲಯದ ಹೆಸರನ್ನು ಹೊಂದಿರದ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಬ್ರಿಟಿಷರು ತಮ್ಮ ವಿರುದ್ಧ ಪೋಸ್ಟರ್ ಹಾಕುವವರನ್ನು ಬಂಧಿಸಲಿಲ್ಲ.

ಸ್ವಾತಂತ್ರ್ಯದ ಮೊದಲು ಸ್ವಾತಂತ್ರ್ಯ ಹೋರಾಟಗಾರರು ಪೋಸ್ಟರ್‌ಗಳನ್ನು ಹಾಕುತ್ತಿದ್ದಾಗ, ಬ್ರಿಟಿಷರು ಅವರ ವಿರುದ್ಧ ಯಾವುದೇ ಎಫ್‌ಐಆರ್‌ಗಳು ಅಥವಾ ಕ್ರಮಗಳನ್ನು ಕೈಗೊಂಡಿರಲಿಲ್ಲ ಎಂದು ಕೇಜ್ರಿವಾಲ್ ಹೇಳಿದರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿತ್ತು. ಬ್ರಿಟಿಷರ ಆಳ್ವಿಕೆಯಲ್ಲಿ ಭಗತ್ ಸಿಂಗ್ ಸಾಕಷ್ಟು ಪೋಸ್ಟರ್‌ಗಳನ್ನು ಅಂಟಿಸಿದ್ದರು, ಅವರ ವಿರುದ್ಧ ಒಂದೇ ಒಂದು ಎಫ್‌ಐಆರ್ ದಾಖಲಾಗಿಲ್ಲ ಎಂದು ಗುಜರಾತ್​ ವಿರುದ್ಧ ಗುಡುಗಿದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 10:35 am, Fri, 31 March 23

ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?