Gujarat bridge: ‘ಬಳಕೆ ಯೋಗ್ಯ’ ಪ್ರಮಾಣಪತ್ರ ಪಡೆಯದೆ ಕೇಬಲ್ ಸೇತುವೆ ಮೇಲೆ ಸಾರ್ವಜನಿಕರ ಓಡಾಟಕ್ಕೆ ಅವಕಾಶ

ಶತಮಾನದಷ್ಟು ಹಳೆಯ ಕೇಬಲ್ ಸೇತುವೆ ನವೀಕರಣದ ನಂತರ ಬಳಕೆ ಯೋಗ್ಯ ಪ್ರಮಾಣಪತ್ರ ಪಡೆಯದೆ ನೇರವಾಗಿ ಸಾರ್ವಜನಿಕರ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿತ್ತು ಎಂಬ ವಿಚಾರ ತಿಳಿದುಬಂದಿದೆ.

Gujarat bridge: 'ಬಳಕೆ ಯೋಗ್ಯ' ಪ್ರಮಾಣಪತ್ರ ಪಡೆಯದೆ ಕೇಬಲ್ ಸೇತುವೆ ಮೇಲೆ ಸಾರ್ವಜನಿಕರ ಓಡಾಟಕ್ಕೆ ಅವಕಾಶ
ಗುಜರಾತ್: ಮೊರ್ಬಿ ಕೇಬಲ್ ಸೇತುವೆ ಕುಸಿತ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Oct 31, 2022 | 11:59 AM

ಗಾಂಧಿನಗರ: ಗುಜರಾತ್‌ನ ಮೊರ್ಬಿ ನಗರದಲ್ಲಿ ಕುಸಿದ ಶತಮಾನದಷ್ಟು ಹಳೆಯದಾದ ಸೇತುವೆಯ ನವೀಕರಣಕಾರರು ಮಾಡಿದ ಈ ಒಂದು ಎಡವಟ್ಟು ಜನರ ಪ್ರಾಣ ಹಿಂಡಿತೇ ಎಂಬ ಪ್ರಶ್ನೆ ಎದ್ದಿದೆ. ಸೇತುವೆ ನವೀಕರಣದ ನಂತರ ಸಾರ್ವಜನಿಕರ ಬಳಕೆಗೆ ಅವಕಾಶ ನೀಡುವ ಮುನ್ನ ಅದು ಬಳಕೆಗೆ ಯೋಗ್ಯವಾಗಿದೆಯೇ ಎಂಬುದನ್ನು ತಿಳಿದುಕೊಳ್ಳಬೇಕಿತ್ತು. ಈ ಬಗ್ಗೆ ಅಧಿಕಾರಿಗಳು ಪರೀಕ್ಷೆ ನಡೆಸಿ ಪ್ರಮಾಣಪತ್ರವನ್ನು ನೀಡುತ್ತಾರೆ. ಆದರೆ ಈ ಸೇತುವೆ ನವೀಕರಣದ ವಿಚಾರದಲ್ಲಿ ನವೀಕರಣ ಮಾಡಿದ ಖಾಸಗಿ ಸಂಸ್ಥೆ ಪರೀಕ್ಷೆಗೆ ಮುಂದಾಗಿಲ್ಲ. ಬದಲಾಗಿ ನವೀಕರಣದ ನಂತರ ಸಾರ್ವಜನಿಕರ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿತ್ತು ಎಂಬ ವಿಚಾರ ಇದೀಗ ತಿಳಿದುಬಂದಿದೆ. ನವೀಕರಣದ ನಂತರ ಸೇತುವೆಯನ್ನು ಪುನಃ ತೆರೆಯುವ ಮೊದಲು ಅಧಿಕಾರಿಗಳಿಂದ ಬಳಕೆಗೆ ಯೋಗ್ಯ ಪ್ರಮಾಣಪತ್ರವನ್ನು ತೆಗೆದುಕೊಂಡಿಲ್ಲ ಎಂದು ಸ್ಥಳೀಯ ಪುರಸಭೆಯ ಮುಖ್ಯಸ್ಥರು ಸುದ್ದಿಸಂಸ್ಥೆ ಎನ್‌ಡಿಟಿವಿಗೆ ತಿಳಿಸಿದ್ದಾರೆ. ಒರೆವಾ ಎಂಬ ಖಾಸಗಿ ಟ್ರಸ್ಟ್ ಸರ್ಕಾರದ ಟೆಂಡರ್ ಪಡೆದು ಸೇತುವೆಯನ್ನು ನವೀಕರಿಸಿದೆ. ನವೀಕರಣಕ್ಕಾಗಿ ಸೇತುವೆಯನ್ನು ಏಳು ತಿಂಗಳಿನಿಂದ ಮುಚ್ಚಲಾಗಿತ್ತು. ನವೀಕರಣ ಪೂರ್ಣಗೊಂಡು ಅಕ್ಟೋಬರ್ 26 ರಂದು ಮತ್ತೆ ತೆರೆಯಲಾಯಿತು.

“ಇದು ಸರ್ಕಾರಿ ಟೆಂಡರ್ ಆಗಿತ್ತು. ನವೀಕರಣ ಮಾಡಿದ ಓರೆವಾ ಗ್ರೂಪ್ ಸೇತುವೆಯನ್ನು ತೆರೆಯುವ ಮೊದಲು ಅದರ ನವೀಕರಣದ ವಿವರಗಳನ್ನು ನೀಡಿ ಮತ್ತು ಗುಣಮಟ್ಟವನ್ನು ಪರಿಶೀಲಿಸಬೇಕಾಗಿತ್ತು. ಆದರೆ ಅದು ಹಾಗೆ ಮಾಡಲಿಲ್ಲ. ಸರ್ಕಾರಕ್ಕೆ ಈ ಬಗ್ಗೆ ತಿಳಿದಿರಲಿಲ್ಲ” ಮೋರ್ಬಿ ಮುನ್ಸಿಪಲ್ ಏಜೆನ್ಸಿ ಮುಖ್ಯಸ್ಥ ಸಂದೀಪ್‌ಸಿನ್ಹ್ ಝಾಲಾ ಹೇಳಿದ್ದಾರೆ.

ಭಾನುವಾರ (ಅ30) ಸಂಜೆ ವೇಳೆ ಸೇತುವೆ ಮೇಲೆ ಮಿತಿಗೂ ಮೀರಿ ನೂರಾರು ಜನರು ನಿಂತಿದ್ದರು ಮತ್ತು ಓಟಾಡ ನಡೆಸುತ್ತಿದ್ದರು. ಇದರಿಂದಾಗಿ ಸೇತುವೆ ಕುಸಿದುಬಿದ್ದಿದೆ ಎನ್ನಲಾಗಿದೆ. ಕೂಡಲೇ ರಕ್ಷಣ ಕಾರ್ಯ ಆರಂಭಿಸಲಾಗಿದ್ದು, ರಾತ್ರಿಯಿಡೀ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಸೇನೆಯ ತಂಡಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಮತ್ತು ಭಾರತೀಯ ವಾಯುಪಡೆಯ ಸಿಬ್ಬಂದಿಗಳು ಸ್ಥಳದಲ್ಲಿದ್ದು, ನದಿಯಲ್ಲಿ ಸಿಲುಕಿದವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದೆ. ಘಟನೆಯಲ್ಲಿ 90ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:20 am, Mon, 31 October 22

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ