Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Attack: ನವರಾತ್ರಿ ಗರ್ಭಾ ಆಚರಣೆ, 24 ಗಂಟೆಗಳಲ್ಲಿ ಹೃದಯಾಘಾತಕ್ಕೆ 10 ಸಾವು

ಗುಜರಾತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ 10 ಮಂದಿ ಗರ್ಭಾ ಮಾಡುತ್ತಿದ್ದವರು ಮೃತಪಟ್ಟಿದ್ದಾರೆ. ಇದರಲ್ಲೂ ದುರಂತವೆಂದರೆ ಸಾವನ್ನಪ್ಪುತ್ತಿರುವವರಲ್ಲಿ ಹೆಚ್ಚಿನವರು ಹದಿಹರೆಯದವರು, ಮಧ್ಯವಯಸ್ಕ ಜನ. ಶುಕ್ರವಾರ ಅಹಮದಾಬಾದ್‌ನ 24 ವರ್ಷದ ಯುವಕ ಗರ್ಭಾ ಡ್ಯಾನ್ಸ್ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.

Heart Attack: ನವರಾತ್ರಿ ಗರ್ಭಾ ಆಚರಣೆ, 24 ಗಂಟೆಗಳಲ್ಲಿ ಹೃದಯಾಘಾತಕ್ಕೆ 10 ಸಾವು
ಸಾಂದರ್ಭಿಕ ಚಿತ್ರ (ಗರ್ಭಾ ಡ್ಯಾನ್ಸ್)
Follow us
ಆಯೇಷಾ ಬಾನು
|

Updated on:Oct 22, 2023 | 7:06 AM

ಅಹ್ಮದಾಬಾದ್, ಅ.22​: ಇಡೀ ದೇಶದಲ್ಲಿ ನವರಾತ್ರಿ (Navarathri) ಹಬ್ಬದ ಸಂಭ್ರಮ ಮನೆ ಮಾಡಿದೆ. ಅದರಲ್ಲೂ ಗುಜರಾತ್​ನಲ್ಲಿ (Gujarat) ಅನೇಕ ಕಡೆಗಳಲ್ಲಿ ವಿಜೃಂಭಣೆಯಿಂದ ನವರಾತ್ರಿ ಆಚರಿಸಲಾಗುತ್ತದೆ. ದೇವಿಗೆ ಪೂಜೆ ಮಾಡಿ ಗರ್ಭಾ ನೃತ್ಯ (Garba Dance) ಮಾಡಿ ಜನ ಸಂಭ್ರಮಿಸುತ್ತಾರೆ. ಆದರೆ ಇಂತಹ ಸಂಭ್ರಮದ ಸಮಯದಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಗುಜರಾತ್‌ನಲ್ಲಿ ನವರಾತ್ರಿ ಆಚರಣೆಯ ಸಂದರ್ಭದಲ್ಲಿ ಗರ್ಭಾ ನೃತ್ಯ ಮಾಡುವಾಗ ಕೆಲವರು ಕುಸಿದು ಬಿದ್ದು ಸಾವನ್ನಪ್ಪುತ್ತಿದ್ದಾರೆ (Heart Attack). ಗುಜರಾತ್‌ನಲ್ಲಿ ಕಳೆದ 24 ಗಂಟೆಗಳಲ್ಲಿ 10 ಮಂದಿ ಗರ್ಭಾ ಮಾಡುತ್ತಿದ್ದವರು ಮೃತಪಟ್ಟಿದ್ದಾರೆ. ಇದರಲ್ಲೂ ದುರಂತವೆಂದರೆ ಸಾವನ್ನಪ್ಪುತ್ತಿರುವವರಲ್ಲಿ ಹೆಚ್ಚಿನವರು ಹದಿಹರೆಯದವರು, ಮಧ್ಯವಯಸ್ಕ ಜನ.

ಇತ್ತೀಚೆಗೆ ಬರೋಡಾದ ದಾಭೋಯ್‌ನ 13 ವರ್ಷದ ಬಾಲಕ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಶುಕ್ರವಾರ ಅಹಮದಾಬಾದ್‌ನ 24 ವರ್ಷದ ಯುವಕ ಗರ್ಭಾ ಡ್ಯಾನ್ಸ್ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಅದೇ ರೀತಿ ಕಪದ್ವಾಂಜ್‌ನ 17 ವರ್ಷದ ಯುವಕ ಕೂಡ ಗರ್ಭಾ ಆಡುವಾಗ ಸಾವನ್ನಪ್ಪಿದ್ದಾನೆ. ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಇದೇ ರೀತಿಯ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ.

ಇದನ್ನೂ ಓದಿ: ನವರಾತ್ರಿ, ದುರ್ಗಾ ಪೂಜೆಗೆ ಕೃತಿ ಶೆಟ್ಟಿ ಶುಭಾಶಯ ತಿಳಿಸಿದ್ದು ಹೀಗೆ

6 ದಿನಗಳಲ್ಲಿ 521 ಹೃದಯ ಸಂಬಂಧಿ ಕರೆಗಳು

ಇನ್ನು ಇದರ ಜೊತೆಗೆ ನವರಾತ್ರಿಯ ಮೊದಲ ಆರು ದಿನಗಳಲ್ಲಿ, 108 ತುರ್ತು ಆಂಬ್ಯುಲೆನ್ಸ್ ಸೇವೆಗಳಿಗೆ 521 ಕರೆಗಳು ಹೃದಯ ಸಂಬಂಧಿ ತೊಂದರೆ ಬಗ್ಗೆಯೇ ಬಂದಿವೆ. ಹಾಗೂ ಉಸಿರಾಟದ ತೊಂದರೆಗಾಗಿ 609 ಕರೆಗಳು ಬಂದಿವೆ. ಗರ್ಭಾ ಆಚರಣೆಗಳು ಸಾಮಾನ್ಯವಾಗಿ ಸಂಜೆ 6 ರಿಂದ 2 ಗಂಟೆಯ ನಡುವೆ ನಡೆಯುತ್ತವೆ. ಹೀಗಾಗಿ ಈ ಸಮಯದಲ್ಲೇ ಆರೋಗ್ಯ ಸಿಬ್ಬಂದಿ ಹೆಚ್ಚಿನ ಕರೆಗಳನ್ನು ಸ್ವೀಕರಿಸಿದ್ದಾರೆ. ಆದ್ದರಿಂದ, ಗರ್ಭಾ ಕಾರ್ಯಕ್ರಮಗಳ ಸಂಘಟಕರು ಮತ್ತು ಸರ್ಕಾರ ಈ ಸಮಸ್ಯೆಗಳ ಬಗ್ಗೆ ಕ್ರಮ ಕೈಗೊಳ್ಳುತ್ತಿದೆ. ಗರ್ಭಾ ಸ್ಥಳಗಳ ಸಮೀಪವಿರುವ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳು ಜಾಗರೂಕರಾಗಿರಬೇಕು ಎಂದು ಸರ್ಕಾರ ತಿಳಿಸಿದೆ.

ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್‌ಗಳು ತ್ವರಿತವಾಗಿ ಪ್ರವೇಶಿಸಲು ಕಾರಿಡಾರ್‌ಗಳನ್ನು ರಚಿಸಲು ಗರ್ಭಾ ಸಂಘಟಕರಿಗೆ ಸರ್ಕಾರ ಸೂಚನೆ ನೀಡಿದೆ. ಇದಲ್ಲದೆ, ಗಾರ್ಭಾ ಸಂದರ್ಭದಲ್ಲಿ ಹೆಚ್ಚಾಗಿ ಸಮಸ್ಯೆಗಳು ಎದುರಾಗುವ ಹಿನ್ನೆಲೆ ಈಗಾಗಲೇ ಸಂಘಟಕರು ಸ್ಥಳಗಳಲ್ಲಿ ವೈದ್ಯರು ಮತ್ತು ಆಂಬ್ಯುಲೆನ್ಸ್‌ಗಳನ್ನು ನಿಲ್ಲಿಸುವ ಮೂಲಕ ಭಾಗವಹಿಸುವವರ ಸುರಕ್ಷತೆಯಾಗಿ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ವರ್ಷ ನವರಾತ್ರಿ ಹಬ್ಬದ ಮೊದಲು, ಗುಜರಾತ್‌ನಲ್ಲಿ ಮೂರು ಜನರು ಗಾರ್ಭಾ ಅಭ್ಯಾಸ ಮಾಡುವಾಗ ಹೃದಯಾಘಾತದಿಂದ ಸಾವನ್ನಪ್ಪಿದರು.

ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:03 am, Sun, 22 October 23

ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಮಕ್ಕಳಿಂದ ಶುಚಿಮಾಡಿಸಿದರೆ ಕೂಡಲೇ ಕ್ರಮ ಜರುಗಿಸುತ್ತೇವೆ: ಮಧು ಬಂಗಾರಪ್ಪ
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
ಕಾಂಗ್ರೆಸ್ ನಾಯಕರ ಒಳಜಗಳಗಳಿಂದ ಸರ್ಕಾರ ಪತನಗೊಳ್ಳಲಿದೆ: ಜಗದೀಶ್ ಶೆಟ್ಟರ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
CSK ವಿರುದ್ಧದ ಗೆಲುವಿನ ಖುಷಿಯಲ್ಲಿ ವಿರಾಟ್ ಕೊಹ್ಲಿ ಭರ್ಜರಿ ಡ್ಯಾನ್ಸ್
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಸಿನಿಮೀಯ ರೀತಿಯಲ್ಲಿ ವಾಹನ ಚೇಸ್ ಮಾಡಿ ಗೋವುಗಳ ರಕ್ಷಣೆ: ವಿಡಿಯೋ ನೋಡಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಅಂತ ಪೊಲೀಸರು ಹೇಳಬೇಕು: ಜಾರಕಿಹೊಳಿ
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ರಾಜ್ಯಾದ್ಯಂತ ಸುತ್ತಿ ಜನರ ಬಳಿ ಹೋಗ್ತೀನಿ, ನಾನು ಪಲಾಯನವಾದಿಯಲ್ಲ: ಯತ್ನಾಳ್
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
ಬಸನಗೌಡ ಯತ್ನಾಳ್ ಇಂದು ವಿಜಯಪುರಕ್ಕೆ ಮರಳುವ ಸಾಧ್ಯತೆ
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
‘ರೀಲ್ಸ್​ ಕೇಸ್.. ಹಹಹ’; ನಗುತ್ತಲೇ ಜೈಲಿನಿಂದ ಹೊರ ಬಂದ ವಿನಯ್-ರಜತ್
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
ಹತ್ಯೆಯಾದ ಮಹಿಳೆಯ ಮೂರನೇ ಗಂಡ ಪತ್ನಿ ಮತ್ತು ಇತರರನ್ನು ಕೊಂದನೇ?
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ
WITT: ಟಿವಿ9 ಶೃಂಗಸಭೆಯಲ್ಲಿ ಕೇಂದ್ರ ಸಚಿವರ ಸಂದರ್ಶನ, ಲೈವ್ ನೋಡಿ