Gujarat Plastic Factory: ಗುಜರಾತ್ನ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, 8 ಅಗ್ನಿಶಾಮಕ ಟೆಂಡರ್ಗಳ ಆಗಮನ
ಗುಜರಾತ್ನ ಖೇಡಾದ ಗೋಬ್ಲೆಜ್ ಬಳಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯನ್ನು ಫಾರ್ಮೋಸಾ ಸಿಂಥೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿದೆ.
ಗುಜರಾತ್ನ ಖೇಡಾದ ಗೋಬ್ಲೆಜ್ ಬಳಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯನ್ನು ಫಾರ್ಮೋಸಾ ಸಿಂಥೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿದೆ. ಆವರಣದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಬೆಂಕಿಯನ್ನು ನಂದಿಸಲು ಇನ್ನೂ ಮೂರ್ನಾಲ್ಕು ಗಂಟೆಗಳ ಕಾಲ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.
ನಾಡಿಯಾಡ್, ಖೇಡಾ, ಬರೇಜಾ ಅಸ್ಲಾಲಿ, ಧೋಲ್ಕಾ ಮತ್ತು ಅಹಮದಾಬಾದ್‌ನಿಂದ ಎಂಟು ಅಗ್ನಿಶಾಮಕ ಟೆಂಡರ್‌ಗಳು ಬೆಂಕಿಯ ಬಗ್ಗೆ ವರದಿಯಾದ ತಕ್ಷಣ ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಐದಾರು ಗುಜರಿ ಗೋಡೌನ್‌ಗಳಿಗೆ ಹೊತ್ತಿಕೊಂಡ ಬೆಂಕಿ
ಕಾರ್ಖಾನೆಯಿಂದ ಹೊರಬರುವ ಹೊಗೆ ಹಲವಾರು ಕಿಲೋಮೀಟರ್ ದೂರದಿಂದ ಗೋಚರಿಸುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ. ಕಾರ್ಖಾನೆಯು ಪ್ಲಾಸ್ಟಿಕ್ ರೋಲ್ಗಳನ್ನು ತಯಾರಿಸುತ್ತದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ