Gujarat Plastic Factory: ಗುಜರಾತ್​ನ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, 8 ಅಗ್ನಿಶಾಮಕ ಟೆಂಡರ್​ಗಳ ಆಗಮನ

ಗುಜರಾತ್​ನ ಖೇಡಾದ ಗೋಬ್ಲೆಜ್​ ಬಳಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯನ್ನು ಫಾರ್ಮೋಸಾ ಸಿಂಥೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿದೆ.

Gujarat Plastic Factory: ಗುಜರಾತ್​ನ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ ಅವಘಡ, 8 ಅಗ್ನಿಶಾಮಕ ಟೆಂಡರ್​ಗಳ ಆಗಮನ
ಪ್ಲಾಸ್ಟಿಕ್ ಕಾರ್ಖಾನೆ

Updated on: May 29, 2023 | 9:22 AM

ಗುಜರಾತ್​ನ ಖೇಡಾದ ಗೋಬ್ಲೆಜ್​ ಬಳಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆಯನ್ನು ಫಾರ್ಮೋಸಾ ಸಿಂಥೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ನಿರ್ವಹಿಸುತ್ತಿದೆ. ಆವರಣದಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಭಾರಿ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಮತ್ತು ಅಗ್ನಿಶಾಮಕ ದಳದ ಅಧಿಕಾರಿಗಳು ಬೆಂಕಿಯನ್ನು ನಂದಿಸಲು ಇನ್ನೂ ಮೂರ್ನಾಲ್ಕು ಗಂಟೆಗಳ ಕಾಲ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ.

ನಾಡಿಯಾಡ್, ಖೇಡಾ, ಬರೇಜಾ ಅಸ್ಲಾಲಿ, ಧೋಲ್ಕಾ ಮತ್ತು ಅಹಮದಾಬಾದ್‌ನಿಂದ ಎಂಟು ಅಗ್ನಿಶಾಮಕ ಟೆಂಡರ್‌ಗಳು ಬೆಂಕಿಯ ಬಗ್ಗೆ ವರದಿಯಾದ ತಕ್ಷಣ ಸ್ಥಳಕ್ಕೆ ಧಾವಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಬೆಂಗಳೂರಲ್ಲಿ ಮೊತ್ತೊಂದು ಅಗ್ನಿ ಅವಘಡ: ಐದಾರು ಗುಜರಿ ಗೋಡೌನ್‌ಗಳಿಗೆ ಹೊತ್ತಿಕೊಂಡ ಬೆಂಕಿ

ಕಾರ್ಖಾನೆಯಿಂದ ಹೊರಬರುವ ಹೊಗೆ ಹಲವಾರು ಕಿಲೋಮೀಟರ್ ದೂರದಿಂದ ಗೋಚರಿಸುತ್ತದೆ ಎಂದು ಸ್ಥಳೀಯರು ಹೇಳಿದ್ದಾರೆ. ಕಾರ್ಖಾನೆಯು ಪ್ಲಾಸ್ಟಿಕ್ ರೋಲ್​ಗಳನ್ನು ತಯಾರಿಸುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us