Gujarat Plane Crash Highlights: ನಾಳೆ ಅಹಮದಾಬಾದ್‌ಗೆ ಮೋದಿ ಭೇಟಿ; ಭಾರತಕ್ಕೆ ಸಹಾಯಹಸ್ತ ಚಾಚಿದ ಟ್ರಂಪ್
Air India Plane Crash Highlights: ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. ಟೇಕ್ ಆಫ್ ಆದ 10 ನಿಮಿಷದಲ್ಲಿ ವಿಮಾನದ ಸಿಗ್ನಲ್ ಕಡಿತಗೊಂಡಿತು. ಬಳಿಕ ವಿಮಾನ ಪತನವಾಗಿದ್ದು, ಆಕಾಶದ ತುಂಬ ದಟ್ಟ ಹೊಗೆ ಆವರಿಸಿಕೊಂಡಿತು. ಈ ದೃಶ್ಯವನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಈ ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು, ಎಷ್ಟು ಜನರು ಸಾವನ್ನಪ್ಪಿದ್ದಾರೆ ಎಂಬಿತ್ಯಾದಿ ವಿಷಯಗಳ ಕುರಿತು ಕ್ಷಣ-ಕ್ಷಣದ ಮಾಹಿತಿ ಇಲ್ಲಿದೆ.

ಅಹಮದಾಬಾದ್, ಜೂನ್ 12: ಗುಜರಾತ್ ರಾಜ್ಯದ ಅಹಮದಾಬಾದ್‌ನ ಮೇಘನಿನಗರದಲ್ಲಿ ಏರ್ ಇಂಡಿಯಾ ಪ್ರಯಾಣಿಕ ವಿಮಾನ ಅಪಘಾತಕ್ಕೀಡಾಗಿದೆ. ಇಂದು ಮಧ್ಯಾಹ್ನ ವಿಮಾನ ಅಪಘಾತಕ್ಕೀಡಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಭೀತಿ ಮೂಡಿಸಿದೆ. ಸದ್ಯದ ಮಾಹಿತಿಯ ಪ್ರಕಾರ, ಘೋಡಾ ಕ್ಯಾಂಪ್ ಬಳಿ ವಿಮಾನ ಅಪಘಾತಕ್ಕೀಡಾದ ನಂತರ ಅಗ್ನಿಶಾಮಕ ಇಲಾಖೆಯ ಮೂರು ತಂಡಗಳು ಸ್ಥಳಕ್ಕೆ ತಲುಪಿವೆ. ವಿಮಾನ ಐಜಿಬಿ ಕಾಂಪೌಂಡ್‌ನಲ್ಲಿ ಅಪಘಾತಕ್ಕೀಡಾಗಿದೆ. ಇದರಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ದೂರದವರೆಗೆ ಹೊಗೆ ಕಾಣಿಸಿಕೊಂಡಿವೆ. ಅಪಘಾತದ ನಂತರ ರಸ್ತೆಗಳನ್ನು ಮುಚ್ಚಲಾಗಿದೆ. ವಿಮಾನ ಟೇಕಾಫ್ ಆದ 10 ನಿಮಿಷದಲ್ಲಿ ಅಪಘಾತಕ್ಕೀಡಾಗಿದೆ ಎಂದು ತಿಳಿದುಬಂದಿದೆ.
LIVE NEWS & UPDATES
-
ಭಾರತಕ್ಕೆ ಸಹಾಯಹಸ್ತ ಚಾಚಿದ ಟ್ರಂಪ್
ಗುಜರಾತ್ನಲ್ಲಿ ನಡೆದ ವಿಮಾನ ದುರಂತ ಅತ್ಯಂತ ಭೀಕರ ವಿಮಾನ ಅಪಘಾತಗಳಲ್ಲಿ ಒಂದಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಅಲ್ಲದೆ, ಈ ದುರಂತದ ಹಿನ್ನೆಲೆಯಲ್ಲಿ ಅಮೆರಿಕ ಎಲ್ಲ ರೀತಿಯ ಸಹಾಯವನ್ನು ನೀಡಲು ಸಿದ್ಧವಿದೆ ಎಂದು ಭಾರತಕ್ಕೆ ತಿಳಿಸಿದ್ದಾರೆ
-
ನಾಳೆ ಅಹಮದಾಬಾದ್‌ಗೆ ಪ್ರಧಾನಿ ಮೋದಿ ಭೇಟಿ
ಇಂದು ಅಹಮದಾಬಾದ್‌ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಿದ್ದಾರೆ. ಏರ್ ಇಂಡಿಯಾ ಅಪಘಾತದಲ್ಲಿ 241 ಪ್ರಯಾಣಿಕರು ಮೃತಪಟ್ಟಿದ್ದು, ವಿಮಾನ ಡಿಕ್ಕಿ ಹೊಡೆದ ಹಾಸ್ಟೆಲ್ನ ವಿದ್ಯಾರ್ಥಿಗಳ ಸಾವಿನ ಸಂಖ್ಯೆಯೂ ಏರುತ್ತಿದೆ. ಹೀಗಾಗಿ, ನಾಳೆ (ಶುಕ್ರವಾರ) ಅಹಮದಾಬಾದ್‌ನ ವಿಮಾನ ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ.
-
-
ಬೆಂಕಿ ಬೇಗ ಹರಡಿತು, ಯಾರನ್ನೂ ಉಳಿಸಲಾಗಲಿಲ್ಲ; ಅಮಿತ್ ಶಾ
ಏರ್ ಇಂಡಿಯಾ ವಿಮಾನವು ಸುಮಾರು 1,25,000 ಲೀಟರ್ ಇಂಧನವನ್ನು ಹೊತ್ತೊಯ್ದಿತ್ತು. ಬೆಂಕಿ ಹೊತ್ತಿ ಉರಿದಾಗ ಆ ಇಂಧನದಿಂದಾಗಿ ಬೆಂಕಿ ಇನ್ನಷ್ಟು ವ್ಯಾಪಕವಾಗಿ ಹರಡಿದೆ. ಹೆಚ್ಚಿನ ತಾಪಮಾನದಿಂದಾಗಿ ಯಾರನ್ನೂ ಉಳಿಸುವ ಅವಕಾಶವಿರಲಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.
-
ಅಹಮದಾಬಾದ್‌ನಲ್ಲಿ ಗಾಯಾಳುಗಳನ್ನು ಭೇಟಿಯಾದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ AI171 ದುರಂತದ ನಂತರ ಇಡೀ ದೇಶವು ಶೋಕದಲ್ಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪ್ರಾಣಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ ಅಮಿತ್ ಶಾ, ಸರ್ಕಾರವು ಮೃತರ ಕುಟುಂಬಗಳೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದಿದ್ದಾರೆ.
-
ತನಿಖೆಗೆ ಸಹಾಯ ಮಾಡಲು ಭಾರತಕ್ಕೆ ತಂಡಗಳನ್ನು ಕಳುಹಿಸಲಿವೆ ಅಮೆರಿಕ, ಇಂಗ್ಲೆಂಡ್
ಅಹಮದಾಬಾದ್ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಾಯ ಮಾಡಲು ಅಮೆರಿಕ, ಯುಕೆ ಭಾರತಕ್ಕೆ ತಂಡಗಳನ್ನು ಕಳುಹಿಸಲಿವೆ. ಏರ್ ಇಂಡಿಯಾದ ವಿಶೇಷ ತಂಡ ಕೂಡ ಅಹಮದಾಬಾದ್‌ಗೆ ಆಗಮಿಸಿದೆ.
-
-
ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ
ಅಹಮದಾಬಾದ್ ವಿಮಾನ ಪತನದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ಟಾಟಾ ಗ್ರೂಪ್ ಘೋಷಿಸಿದೆ.
-
ಏರ್ ಇಂಡಿಯಾ ಸಿಇಒ ಪ್ರತಿಕ್ರಿಯೆ
“ಈ ಘಟನೆಯ ಬಗ್ಗೆ ತೀವ್ರ ದುಃಖವನ್ನು ವ್ಯಕ್ತಪಡಿಸಲು ನಾನು ಬಯಸುತ್ತೇನೆ. ಏರ್ ಇಂಡಿಯಾದಲ್ಲಿ ನಮಗೆಲ್ಲರಿಗೂ ಇದು ಕಷ್ಟಕರವಾದ ದಿನವಾಗಿದೆ. ನಮ್ಮ ಪ್ರಯತ್ನಗಳು ನಮ್ಮ ಪ್ರಯಾಣಿಕರು, ಸಿಬ್ಬಂದಿ ಸದಸ್ಯರು, ಅವರ ಕುಟುಂಬಗಳು ಮತ್ತು ಪ್ರೀತಿಪಾತ್ರರ ಅಗತ್ಯಗಳ ಮೇಲೆ ಕೇಂದ್ರೀಕೃತವಾಗಿವೆ” ಎಂದು ಏರ್ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ಅಹಮದಾಬಾದ್ ವಿಮಾನ ಅಪಘಾತದ ಬಗ್ಗೆ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳಲ್ಲಿ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದರು.
-
ಹಾಸ್ಟೆಲ್ಗೆ ಏರ್ ಇಂಡಿಯಾ ವಿಮಾನ ಡಿಕ್ಕಿ; ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಾವು
ಅಹಮದಾಬಾದ್ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ವಿಮಾನ ಪಕ್ಕದ ವೈದ್ಯರ ಹಾಸ್ಟೆಲ್ಗೆ ಡಿಕ್ಕಿ ಹೊಡೆದಿತ್ತು. ಈ ಹಾಸ್ಟೆಲ್ನಲ್ಲಿದ್ದ 50-60 ವೈದ್ಯಕೀಯ ವಿದ್ಯಾರ್ಥಿಗಳಿಗೆ ಇದರಿಂದ ತೀವ್ರ ಪೆಟ್ಟಾಗಿತ್ತು. ಅವರಲ್ಲಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ.
-
ಅಹಮದಾಬಾದ್ ವಿಮಾನ ದುರಂತ; ಕರ್ನಾಟಕ ಮೂಲದ ಕೋ ಪೈಲಟ್ ಸಾವು
ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದಲ್ಲಿ ಕರ್ನಾಟಕದ ಕರಾವಳಿ ಮೂಲದ ಕ್ಲೈವ್ ಕುಂದರ್ ದುರ್ಮರಣವನ್ನಪ್ಪಿದ್ದಾರೆ. ಪತನಗೊಂಡಿದ್ದ ವಿಮಾನದ ಕೋ ಪೈಲಟ್ ಆಗಿದ್ದ ಕ್ಲೈವ್ ಕುಂದರ್ ಫಸ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮುಂಬೈನಲ್ಲಿ ವಾಸವಿದ್ದ ಕರ್ನಾಟಕ ಮೂಲದ ಕ್ಲೈವ್ ಕುಂದರ್ ಅವರಿಗೆ 1100 ಗಂಟೆ ವಿಮಾನ ಹಾರಾಟ ನಡೆಸಿದ ಅನುಭವವಿತ್ತು.
-
ಏರ್ ಇಂಡಿಯಾ ವಿಮಾನದಲ್ಲಿದ್ದ ಎಲ್ಲ 242 ಪ್ರಯಾಣಿಕರ ಸಾವು ಸಾಧ್ಯತೆ
ಏರ್ ಇಂಡಿಯಾ ವಿಮಾನ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲಾ 242 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಎಪಿ ವರದಿ ಮಾಡಿದೆ. ಅಲ್ಲದೆ, ಅಹಮದಾಬಾದ್ ಪೊಲೀಸರು ಕೂಡ ಯಾರೂ ಬದುಕುಳಿದಿರುವ ಸಾಧ್ಯತೆಯಿಲ್ಲ ಎಂದಿದ್ದಾರೆ.
-
ವಿಮಾನ ಅಪಘಾತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ
ಏರರ ಇಂಡಿಯಾ ಪತನವಾದಾಗ ಆ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಪ್ರಯಾಣಿಸುತ್ತಿದ್ದರು. ಅವರು ಈ ದುರಂತದಲ್ಲಿ ಮೃತಪಟ್ಟಿರುವುದು ದೃಢವಾಗಿದೆ. ಹಲವು ರಾಜಕೀಯ ನಾಯಕರು ರೂಪಾನಿ ಅವರ ದುರಂತ ಸಾವಿಗೆ ಸಂತಾಪ ಸೂಚಿಸಿದ್ದಾರೆ.
-
ಅಹಮದಾಬಾದ್‌ನ ಸಿವಿಲ್ ಆಸ್ಪತ್ರೆಗೆ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಭೇಟಿ
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಸೂರತ್‌ನಿಂದ ಸಿವಿಲ್ ಆಸ್ಪತ್ರೆಗೆ ತಲುಪಿದ್ದಾರೆ. ಕೆಲವೇ ನಿಮಿಷಗಳಲ್ಲಿ ಸಭೆ ನಡೆಯಲಿದೆ.
-
ಅಹಮದಾಬಾದ್ ಏರ್ ಇಂಡಿಯಾ ವಿಮಾನ ಅಪಘಾತ ಹೃದಯವಿದ್ರಾವಕ; ರಾಹುಲ್ ಗಾಂಧಿ
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, “ಅಹಮದಾಬಾದ್ ಏರ್ ಇಂಡಿಯಾ ಅಪಘಾತ ಹೃದಯವಿದ್ರಾವಕ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಕುಟುಂಬಗಳು ಅನುಭವಿಸುತ್ತಿರುವ ನೋವು ಮತ್ತು ಆತಂಕವನ್ನು ಊಹಿಸಲೂ ಸಾಧ್ಯವಿಲ್ಲ. ಆಡಳಿತದ ತುರ್ತು ರಕ್ಷಣೆ ಮತ್ತು ಪರಿಹಾರ ಪ್ರಯತ್ನಗಳು ನಿರ್ಣಾಯಕ. ಪ್ರತಿಯೊಂದು ಜೀವವೂ ಮುಖ್ಯ, ಪ್ರತಿ ಸೆಕೆಂಡ್ ಕೂಡ ಮುಖ್ಯ. ಕಾಂಗ್ರೆಸ್ ಕಾರ್ಯಕರ್ತರು ನೆಲಮಟ್ಟದಲ್ಲಿ ಸಹಾಯ ಮಾಡಲು ತಮ್ಮ ಕೈಲಾದಷ್ಟು ಮಾಡಬೇಕು.” ಎಂದಿದ್ದಾರೆ.
-
ವೈದ್ಯರ ಹಾಸ್ಟೆಲ್ಗೆ ವಿಮಾನ ಡಿಕ್ಕಿ
ಅಹಮದಾಬಾದ್ ನಿಂದ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಏರ್ ಇಂಡಿಯಾ ವಿಮಾನ ವೈದ್ಯರ ಹಾಸ್ಟೆಲ್ ಗೆ ಡಿಕ್ಕಿ ಹೊಡೆದಿದೆ. ಲಂಡನ್ ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಇಂದು ಮಧ್ಯಾಹ್ನ ಅಹಮದಾಬಾದ್ ನಿಂದ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ವಿಮಾನ ನಿಲ್ದಾಣದ ಪರಿಧಿಯ ಬಳಿ ವೈದ್ಯರ ಹಾಸ್ಟೆಲ್ ಗೆ ಡಿಕ್ಕಿ ಹೊಡೆದಿದೆ ಎಂದು ANI ವರದಿ ಮಾಡಿದೆ.
-
ನಾಗರಿಕ ವಿಮಾನಯಾನ ಸಚಿವಾಲಯದಿಂದ ಸಹಾಯ ಕೇಂದ್ರ
ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ನಡೆದ AI171 ವಿಮಾನದ ಅಪಘಾತಕ್ಕೆ ಸಂಬಂಧಿಸಿದಂತೆ ಎಲ್ಲಾ ವಿವರಗಳನ್ನು ಸಂಘಟಿಸಲು ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ಕಾರ್ಯಾಚರಣಾ ನಿಯಂತ್ರಣ ಕೊಠಡಿಯನ್ನು ಸಕ್ರಿಯಗೊಳಿಸಲಾಗಿದೆ. ಅದಕ್ಕಾಗಿ 011-24610843, 9650391859 ದೂರವಾಣಿ ಸಂಖ್ಯೆಯನ್ನು ತೆರೆಯಲಾಗಿದೆ.
In light of the AI171 crash, an Operational Control Room has been activated at the Ministry of Civil Aviation to coordinate all details. Contact: 011-24610843 | 9650391859: Ministry of Civil Aviation pic.twitter.com/Si220KVy4y
— ANI (@ANI) June 12, 2025
-
ವಿಮಾನ ಅಪಘಾತದ ಬಗ್ಗೆ ತಿಳಿದು ತೀವ್ರ ಆಘಾತ; ಎಸ್ ಜೈಶಂಕರ್
ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅಹಮದಾಬಾದ್‌ನಲ್ಲಿ ನಡೆದ ವಿಮಾನ ಅಪಘಾತದ ಬಗ್ಗೆ ತಿಳಿದು ತೀವ್ರ ಆಘಾತವಾಯಿತು. ಪ್ರಯಾಣಿಕರು ಮತ್ತು ಅವರ ಕುಟುಂಬದವರ ಜೊತೆ ನಾವಿದ್ದೇವೆ ಎಂದು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
Deeply shocked to learn about the flight crash in Ahmedabad.
Our prayers are with the passengers and their families.
— Dr. S. Jaishankar (@DrSJaishankar) June 12, 2025
-
ಅಮಿತ್ ಶಾ, ರಾಮ್ ಮೋಹನ್ ನಾಯ್ಡು ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಪ್ರಧಾನಿ ನರೇಂದ್ರ ಮೋದಿ ಗೃಹ ಸಚಿವ ಅಮಿತ್ ಶಾ ಮತ್ತು ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರೊಂದಿಗೆ ಮಾತನಾಡಿದ್ದಾರೆ. ವಿಮಾನ ಅಪಘಾತದ ನಂತರ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಅಹಮದಾಬಾದ್‌ಗೆ ತಲುಪಿಸುವಂತೆ ಅವರು ಸೂಚಿಸಿದ್ದಾರೆ.
-
ಏರ್ ಇಂಡಿಯಾದಿಂದ ಹಾಟ್‌ಲೈನ್ ಸಂಖ್ಯೆ ಬಿಡುಗಡೆ
“ಅಹಮದಾಬಾದ್‌ನಿಂದ ಇಂದು ಮಧ್ಯಾಹ್ನ 3.38ಕ್ಕೆ ಹೊರಟ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು. ಇವರಲ್ಲಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆಗಳು ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಕರೆದೊಯ್ಯಲಾಗುತ್ತಿದೆ. ಹೆಚ್ಚಿನ ಮಾಹಿತಿ ನೀಡಲು ನಾವು 1800 5691 444 ಎಂಬ ಪ್ರಯಾಣಿಕರ ಹಾಟ್‌ಲೈನ್ ಸಂಖ್ಯೆಯನ್ನು ಸಹ ಸ್ಥಾಪಿಸಿದ್ದೇವೆ” ಎಂದು ಏರ್ ಇಂಡಿಯಾ ತಿಳಿಸಿದೆ.
Air India says, “The flight, which departed from Ahmedabad at 1338 hrs, was carrying 242 passengers and crew members on board the Boeing 787-8 aircraft. Of these, 169 are Indian nationals, 53 are British nationals, 1 Canadian national and 7 Portuguese nationals. The injured are… pic.twitter.com/G7jaEIcZla
— ANI (@ANI) June 12, 2025
-
ಅಹಮದಾಬಾದ್ ನಿಂದ ಹೊರಟ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ 5 ನಿಮಿಷಗಳಲ್ಲಿ ಪತನ
ಅಹಮದಾಬಾದ್ ನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ 5 ನಿಮಿಷಗಳಲ್ಲಿ ಪತನಗೊಂಡಿದೆ ಎಂದು ಡಿಜಿಸಿಎ ತಿಳಿಸಿದೆ. ಅಹಮದಾಬಾದ್ ವಿಮಾನ ನಿಲ್ದಾಣದ ಎಲ್ಲಾ ವಿಮಾನಗಳನ್ನು ರದ್ದುಗೊಳಿಸಲಾಗಿದೆ. ವಿಮಾನ ನಿಲ್ದಾಣವನ್ನು ಸಹ ಮುಚ್ಚಲಾಗಿದೆ.
-
ಮಾಜಿ ಸಿಎಂ ರೂಪಾನಿ ಪ್ರಯಾಣಿಸುತ್ತಿದ್ದ ವಿಮಾನ
ಅಹಮದಾಬಾದ್‌ನ ಮೇಘನಿನಗರದಲ್ಲಿ ಅಪಘಾತಕ್ಕೀಡಾದ ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಪ್ರಯಾಣಿಸುತ್ತಿದ್ದರು. ಅವರು ಪ್ರಯಾಣಿಸುತ್ತಿದ್ದ ವಿಮಾನದ ಟಿಕೆಟ್ ವಿವರ ಕೂಡ ಟಿವಿ9ಗೆ ಸಿಕ್ಕಿದೆ.
ಮಾಜಿ ಸಿಎಂ ವಿಜಯ್ ರೂಪಾನಿ ಟಿಕೆಟ್
-
ಗೃಹ ಸಚಿವ ಅಮಿತ್ ಶಾ ಅಹಮದಾಬಾದ್‌ಗೆ ಭೇಟಿ
ಏರ್ ಇಂಡಿಯಾ ವಿಮಾನ ಅಪಘಾತದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಹಮದಾಬಾದ್‌ಗೆ ಭೇಟಿ ನೀಡಲಿದ್ದಾರೆ. ಅವರು ಈಗಾಗಲೇ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರೊಂದಿಗೆ ಫೋನ್ನಲ್ಲಿ ಮಾತುಕತೆ ನಡೆಸಿ ಮಾಹಿತಿ ಪಡೆದಿದ್ದಾರೆ.
-
ವಿಮಾನ ಅಪಘಾತದ ವಿಡಿಯೋ ಇಲ್ಲಿದೆ
Air India’s Boeing 787-8 struggles to gain altitude shortly after departing Ahmedabad bound for London. It seems to stall and crashes into a residential area. The plane, a Boeing 788 was never involved in a fatal crash until today. pic.twitter.com/ppnLTpirQu
— Josh Cahill (@gotravelyourway) June 12, 2025
-
ಏರ್ ಇಂಡಿಯಾದ AI 171 ವಿಮಾನ ಅಪಘಾತ
ಏರ್ ಇಂಡಿಯಾದ AI 171 ವಿಮಾನ ಅಪಘಾತಕ್ಕೀಡಾಗಿದೆ. ಈ ಘಟನೆ ನಡೆದ ತಕ್ಷಣ, ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಸೂರತ್‌ನಿಂದ ಅಹಮದಾಬಾದ್‌ಗೆ ಬರಲು ಹೊರಟಿದ್ದಾರೆ. ಅಲ್ಲದೆ, ಉನ್ನತ ಅಧಿಕಾರಿಗಳಿಗೆ ಸ್ಥಳದಲ್ಲಿ ಹಾಜರಿರುವಂತೆ ಸೂಚಿಸಲಾಗಿದೆ. ವಿಮಾನ ಅಪಘಾತದ ಹಿನ್ನೆಲೆಯಲ್ಲಿ ಗುಜರಾತ್ ಮುಖ್ಯಮಂತ್ರಿಗಳು ಅಧಿಕಾರಿಗಳು ಮತ್ತು ವೈದ್ಯರಿಗೆ ತಕ್ಷಣವೇ ಹಾಜರಿರುವಂತೆ ಸೂಚಿಸಿದ್ದಾರೆ.
-
ವಿಮಾನ ಅಪಘಾತವಾಗಿದ್ದು ಹೇಗೆ?
ಸದ್ಯದ ಮಾಹಿತಿಯ ಪ್ರಕಾರ, ವಿಮಾನದ ಹಿಂಭಾಗ ಮರಕ್ಕೆ ಡಿಕ್ಕಿ ಹೊಡೆದ 10 ನಿಮಿಷಗಳಲ್ಲಿ ವಿಮಾನ ಅಪಘಾತಕ್ಕೀಡಾಯಿತು. ಈ ವಿಮಾನದಲ್ಲಿ ಸುಮಾರು 242 ಜನರಿದ್ದರು.
-
ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್ ಬಳಿ ಪತನ
ಅಹಮದಾಬಾದ್ ನಿಂದ ಲಂಡನ್ ಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್ ನ ಮೇಘನಿನಗರ ಬಳಿ ಅಪಘಾತಕ್ಕೀಡಾಗಿದೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ವಿಮಾನದಲ್ಲಿ ಸಿಬ್ಬಂದಿ ಮತ್ತು ಪ್ರಯಾಣಿಕರು ಸೇರಿದಂತೆ 242 ಜನರಿದ್ದರು.
Published On - Jun 12,2025 2:56 PM




